Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:3 - ಪರಿಶುದ್ದ ಬೈಬಲ್‌

3 ಮೋಡಗಳು ನೀರಿನಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತವೆ. ಮರವು ದಕ್ಷಿಣಕ್ಕಾಗಲಿ ಉತ್ತರಕ್ಕಾಗಲಿ ಬಿದ್ದರೆ, ಅದು ತಾನು ಬಿದ್ದಲ್ಲಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಮಳೆ ತುಂಬಿದ ಮೋಡಗಳು, ತಾವಾಗಿಯೇ ಭೂಮಿಯ ಮೇಲೆ ಸುರಿದುಬಿಡುವವು, ಮರವು ಉತ್ತರಕ್ಕಾಗಲಿ, ದಕ್ಷಿಣಕ್ಕಾಗಲಿ, ಬಿದ್ದರೆ ಬಿದ್ದ ಸ್ಥಳದಲ್ಲಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಮಳೆ ತುಂಬಿದ ಮೋಡಗಳು ನೆಲದ ಮೇಲೆ ಸುರಿದುಬಿಡುತ್ತವೆ. ಮರವು ದಕ್ಷಿಣದ ಕಡೆಗಾಗಲಿ, ಉತ್ತರದ ಕಡೆಗಾಗಲಿ ಉರುಳಿದರೆ ಬಿದ್ದ ಕಡೆಯಲ್ಲೆ ಬಿದ್ದಿರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಮಳೆ ತುಂಬಿದ ಮೋಡಗಳು ಭೂವಿುಯ ಮೇಲೆ ಸುರಿದುಬಿಡುವವು; ಮರವು ತೆಂಕಣಕ್ಕಾಗಲಿ ಬಡಗಣಕ್ಕಾಗಲಿ ಬಿದ್ದರೆ ಬಿದ್ದ ಹಾಗೆಯೇ ಇರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಮೋಡಗಳು ಮಳೆಯಿಂದ ತುಂಬಿದ್ದರೆ, ಅವು ಭೂಮಿಯ ಮೇಲೆ ಸುರಿದುಬಿಡುತ್ತವೆ. ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ, ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:3
9 ತಿಳಿವುಗಳ ಹೋಲಿಕೆ  

ಈ ಲೋಕದ ಐಶ್ವರ್ಯವನ್ನು ಹೊಂದಿರುವ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿದರೂ ಸಹಾಯ ಮಾಡದೆ ಹೋದರೆ, ಅವನಲ್ಲಿ ದೇವರ ಪ್ರೀತಿಯು ನೆಲೆಗೊಂಡಿಲ್ಲ. ಅವನೇಕೆ ಸಹಾಯ ಮಾಡಲಿಲ್ಲ? ಏಕೆಂದರೆ ಅವನ ಹೃದಯದಲ್ಲಿ ದೇವರ ಮೇಲೆ ಪ್ರೀತಿಯೇ ಇಲ್ಲ.


ಅವನು ತನ್ನ ತೋಟವನ್ನು ನೋಡಿಕೊಳ್ಳುವುದಕ್ಕಾಗಿ ಒಬ್ಬ ತೋಟಗಾರನನ್ನೂ ನೇಮಿಸಿದ್ದನು. ಅವನು ತನ್ನ ಆ ಸೇವಕನಿಗೆ, ‘ಈ ಮರವು ಹಣ್ಣು ಬಿಡಬಹುದೆಂದು ನಾನು ಮೂರು ವರ್ಷದಿಂದ ಕಾಯುತ್ತಿದ್ದೇನೆ. ಆದರೆ ಇದು ಹಣ್ಣನ್ನು ಬಿಡಲೇ ಇಲ್ಲ. ಇದನ್ನು ಕತ್ತರಿಸಿಹಾಕು! ಇದು ಭೂಮಿಯ ಸಾರವನ್ನೇಕೆ ವ್ಯರ್ಥಗೊಳಿಸಬೇಕು?’ ಎಂದು ಹೇಳಿದನು.


ಸ್ವಲ್ಪ ಹೊತ್ತಿನಲ್ಲಿಯೇ, ಆಕಾಶವು ಕಪ್ಪಾದ ಮೋಡಗಳಿಂದ ಕವಿದುಕೊಂಡಿತು. ಗಾಳಿಯು ಬೀಸಲಾರಂಭಿಸಿತು ಮತ್ತು ಬಿರುಸಾದ ಮಳೆಯು ಸುರಿಯಲಾರಂಭಿಸಿತು. ಅಹಾಬನು ತನ್ನ ರಥವನ್ನೇರಿ, ಇಜ್ರೇಲಿಗೆ ಪ್ರಯಾಣ ಮಾಡಲಾರಂಭಿಸಿದನು.


ಮರಗಳನ್ನು ಕಡಿದುಹಾಕಲು ಕೊಡಲಿ ಈಗಲೇ ಸಿದ್ಧವಾಗಿದೆ. ಒಳ್ಳೆಯ ಫಲಬಿಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಗೆ ಹಾಕಲಾಗುವುದು.


ನಿನ್ನಲ್ಲಿರುವುದನ್ನೆಲ್ಲ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸು; ಲೋಕಕ್ಕೆ ಮುಂದೆ ಸಂಭವಿಸುವ ಕೇಡು ನಿನಗೆ ತಿಳಿಯದು.


ಒಳ್ಳೆಯ ಹವಾಮಾನಕ್ಕಾಗಿ ಕಾದುಕೊಂಡಿರುವವನು ಬೀಜ ಬಿತ್ತುವುದಿಲ್ಲ; ಮಳೆ ಬರಬಹುದೆಂದು ಮೋಡವನ್ನು ನೋಡುತ್ತಿರುವವನು ಪೈರು ಕೊಯ್ಯನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು