Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:8 - ಪರಿಶುದ್ದ ಬೈಬಲ್‌

8 ನಿನ್ನ ಜೀವನದ ಪ್ರತಿಯೊಂದು ದಿನದಲ್ಲಿಯೂ ಆನಂದಿಸು. ನೀನು ಎಷ್ಟುಕಾಲ ಬದುಕುವೆ ಎಂಬುದು ಮುಖ್ಯವಲ್ಲ. ಆದರೆ ಕತ್ತಲೆಯ ದಿನಗಳು ಬಹಳವೆಂದು ಜ್ಞಾಪಕದಲ್ಲಿಟ್ಟುಕೊ. ಮುಂದೆ ಸಂಭವಿಸುವುದೆಲ್ಲಾ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಬಹಳ ವರ್ಷ ಬದುಕುವವನು, ಅವುಗಳಲ್ಲೆಲ್ಲಾ ಆನಂದಿಸಲಿ, ಆದರೆ ಅಂಧಕಾರದ ದಿನಗಳನ್ನು ನೆನಪಿಗೆ ತರಲಿ, ಏಕೆಂದರೆ ಅವು ಬಹಳವಾಗಿರುವವು. ಮುಂದಾಗುವುದೆಲ್ಲ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8-9 ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆದರೆ ಅಂಧಕಾರದ ದಿನಗಳು ಬಹಳವೆಂದು ನೆನಪಿಗೆ ತರಲಿ. ಮುಂದಾಗುವದೆಲ್ಲಾ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಒಬ್ಬನು ಅನೇಕ ವರ್ಷಗಳು ಬದುಕಿ, ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಕತ್ತಲೆಯ ದಿನಗಳನ್ನು ನೆನಪಿಸಿಕೊಳ್ಳಲಿ, ಏಕೆಂದರೆ ಅಂಥ ದಿನಗಳು ಬಹಳ. ಮುಂದಾಗುವುದೆಲ್ಲವೂ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:8
32 ತಿಳಿವುಗಳ ಹೋಲಿಕೆ  

ಅದಕ್ಕೆ ಯೇಸು, “ಇನ್ನು ಸ್ವಲ್ಪಕಾಲ ಮಾತ್ರ ಬೆಳಕು ನಿಮ್ಮೊಂದಿಗಿರುತ್ತದೆ. ಆದ್ದರಿಂದ ಬೆಳಕು ನಿಮ್ಮೊಂದಿಗೆ ಇರುವಾಗಲೇ ನಡೆಯಿರಿ. ಆಗ ಕತ್ತಲೆಯು (ಪಾಪ) ನಿಮ್ಮನ್ನು ಕವಿದುಕೊಳ್ಳುವುದಿಲ್ಲ. ಕತ್ತಲೆಯಲ್ಲಿ ನಡೆಯುವವನಿಗೆ ತಾನು ಎಲ್ಲಿಗೆ ಹೋಗುತ್ತಿದ್ದೇನೆಂಬುದು ತಿಳಿಯದು.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


ಆ ದಿನವು ಕರಾಳ ದಿನ. ಮೋಡದಿಂದ ತುಂಬಿದ ದಿನವಾಗಿದೆ. ಅಂದು ಸೂರ್ಯೋದಯದ ಸಮಯದಲ್ಲಿ ಪರ್ವತದಲ್ಲಿ ಹರಡಿದ ಸೈನ್ಯವನ್ನು ನೀವು ನೋಡುವಿರಿ. ಅದು ಬಲಿಷ್ಠವಾದ ಮಹಾಸೈನ್ಯ. ಅಂಥ ಸೈನ್ಯವು ಹಿಂದೆಂದೂ ಇರಲಿಲ್ಲ. ಇನ್ನು ಮುಂದೆಯೂ ಇರುವುದಿಲ್ಲ.


ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೋ ಯಾರಿಗೂ ಗೊತ್ತಿಲ್ಲ.


ಅಪೊಸ್ತಲರು ನಿಮಗೆ, “ಅಂತ್ಯಕಾಲದಲ್ಲಿ ದೇವರನ್ನು ಕುರಿತು ನಗುವ ಜನರಿರುತ್ತಾರೆ” ಎಂದು ಹೇಳಿದರು. ಈ ಜನರು ತಮ್ಮ ಇಚ್ಛೆಗನುಸಾರವಾದ ಮತ್ತು ದೇವರಿಗೆ ವಿರುದ್ಧವಾದವುಗಳನ್ನು ಮಾತ್ರ ಮಾಡುವವರಾಗಿರುತ್ತಾರೆ.


ನಿಮ್ಮ ದೇವರಾದ ಯೆಹೋವನು ಅಂಧಕಾರವನ್ನು ಉಂಟುಮಾಡುವ ಮೊದಲೇ ಆತನನ್ನು ಗೌರವಿಸಿರಿ, ಕಗ್ಗತ್ತಲಿನ ಬೆಟ್ಟಗಳ ಮೇಲೆ ನೀವು ಬೀಳುವ ಮೊದಲೇ ಆತನನ್ನು ಸ್ತುತಿಸಿರಿ. ಯೆಹೂದದ ಜನರಾದ ನೀವು ಬೆಳಕನ್ನು ನಿರೀಕ್ಷಿಸುತ್ತಿದ್ದೀರಿ. ಆದರೆ ಯೆಹೋವನು ಬೆಳಕನ್ನು ಗಾಢಾಂಧಕಾರವನ್ನಾಗಿ ಪರಿವರ್ತಿಸುವನು.


ಆದ್ದರಿಂದ ಜೀವನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವುದೇ ಉತ್ತಮವೆಂದು ನಿರ್ಧರಿಸಿದೆನು. ಯಾಕೆಂದರೆ ದೇವರು ಮನುಷ್ಯನಿಗೆ ಈ ಲೋಕದಲ್ಲಿ ಅನುಗ್ರಹಿಸಿರುವ ಪ್ರಯಾಸಕರ ಕೆಲಸಗಳಲ್ಲಿಯೂ ಮನುಷ್ಯನು ಸಂತೋಷವಾಗಿರಬೇಕು.


ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.


ಆಗ ರಾಜನು ಕೆಲವು ಸೇವಕರಿಗೆ, ‘ಇವನ ಕೈಕಾಲು ಕಟ್ಟಿ ಹೊರಗೆ ಕತ್ತಲೆಯೊಳಕ್ಕೆ ಎಸೆಯಿರಿ’ ಅಂದನು. ಆ ಸ್ಥಳದಲ್ಲಿ ಜನರು ಗೋಳಾಡುತ್ತಾ ಬಾಧೆಯಿಂದ ತಮ್ಮ ಹಲ್ಲುಗಳನ್ನು ಕಡಿಯುತ್ತಿರುವರು.


ಅವನು ಎರಡು ಸಾವಿರ ವರ್ಷಗಳ ಕಾಲ ಬದುಕಿಯೂ ಜೀವನದಲ್ಲಿ ಸಂತೋಷಪಡದಿದ್ದರೆ ಏನು ಪ್ರಯೋಜನ? ಆ ಮಗುವೂ ಅವನೂ ಕತ್ತಲೆ ಗುಂಡಿಗೇ ಹೋಗುವರು.


ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವ್ಯರ್ಥ.


ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ನಾನು ಜ್ಞಾನವನ್ನೂ ಪ್ರಯಾಸವನ್ನೂ ಯಾವುದರಲ್ಲಿ ವಿನಿಯೋಗಿಸಿದ್ದೇನೋ ಅದರ ಮೇಲೆ ಬೇರೊಬ್ಬನು ದೊರೆತನ ಮಾಡುವನು. ಅವನು ಜ್ಞಾನಿಯೋ ಮೂಢನೋ ನನಗೆ ಗೊತ್ತಿಲ್ಲ. ಇದೂ ವ್ಯರ್ಥವೇ.


ಈ ಲೋಕದ ಕಾರ್ಯಗಳೆಲ್ಲಾ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ನನಗೆ ಕಂಡುಬಂದದ್ದರಿಂದ ಜೀವನವೇ ನನಗೆ ಅಸಹ್ಯವಾಯಿತು.


ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು.


ಜನರು ಅವನನ್ನು ಬೆಳಕಿನಿಂದ ತಳ್ಳಿಬಿಡುವರು; ಅವನನ್ನು ಕತ್ತಲೆಯೊಳಗೆ ನೂಕಿಬಿಡುವರು. ಅವರು ಅವನನ್ನು ಲೋಕದಿಂದಲೇ ಅಟ್ಟಿಬಿಡುವರು.


ಅವನು ಅತ್ತಿತ್ತ ಅಲೆದಾಡುವನು; ಅವನ ದೇಹವು ರಣಹದ್ದುಗಳಿಗೆ ಆಹಾರವಾಗುವುದು. ಮರಣವು ತನಗೆ ಬಹು ಸಮೀಪವಾಗಿರುವುದು ಅವನಿಗೆ ಗೊತ್ತೇ ಇದೆ.


ಮನುಷ್ಯನಾದರೋ ಸತ್ತು ಕೊನೆಗೊಳ್ಳುವನು. ಪ್ರಾಣ ಹೋದಾಗ ಇಲ್ಲವಾಗುವನು.


ಆ ಸ್ಥಳವು ಕತ್ತಲೆಯಿಂದಲೂ ಮರಣಾಂಧಕಾರದಿಂದಲೂ ಗಲಿಬಿಲಿಯಿಂದಲೂ ಕೂಡಿದೆ. ಅಲ್ಲಿನ ಬೆಳಕು ಸಹ ಕತ್ತಲೆಯೇ!’”


ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.


ನಿನ್ನಲ್ಲಿರುವುದನ್ನೆಲ್ಲ ಒಳ್ಳೆಯ ಕಾರ್ಯಗಳಿಗೆ ಉಪಯೋಗಿಸು; ಲೋಕಕ್ಕೆ ಮುಂದೆ ಸಂಭವಿಸುವ ಕೇಡು ನಿನಗೆ ತಿಳಿಯದು.


ಯಾರೂ ಮರಳಿ ಬರಲಾಗದಂಥ ಕತ್ತಲೆಯ ಸ್ಥಳಕ್ಕೂ ಮರಣಾಂಧಕಾರದ ಸ್ಥಳಕ್ಕೂ ಹೋಗುವ ಮೊದಲೇ ನನಗಿರುವ ಅಲ್ಪಕಾಲವನ್ನು ಆನಂದಿಸಲು ಅವಕಾಶಕೊಡು.


ಸತ್ತ ಮನುಷ್ಯನು ಮಲಗಿಕೊಂಡೇ ಇರುವನು. ಅವನು ಮತ್ತೆ ಮೇಲೇಳುವುದಿಲ್ಲ. ಆಕಾಶವು ಅಳಿದುಹೋಗುವವರೆಗೆ ಅವನು ನಿದ್ರೆಯಿಂದ ಎಬ್ಬಿಸಲ್ಪಡುವುದಿಲ್ಲ.


ಅರ್ಥಮಾಡಿಕೊಳ್ಳಲಾರದವನು ಎಷ್ಟೇ ಐಶ್ವರ್ಯವಂತನಾಗಿದ್ದರೂ ಪ್ರಾಣಿಗಳಂತೆಯೇ ನಾಶವಾಗುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು