ಪ್ರಸಂಗಿ 12:1 - ಪರಿಶುದ್ದ ಬೈಬಲ್1 ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು . ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು. ಅಧ್ಯಾಯವನ್ನು ನೋಡಿ |
ನಮಗೆದುರಾಗಿ ಬಂದಿದ್ದ ಪರಿಸ್ಥಿತಿಯನ್ನು ನಾನು ಚೆನ್ನಾಗಿ ಅವಲೋಕಿಸಿ ನಮ್ಮ ಜನರೊಂದಿಗೆ ಕುಟುಂಬ ಕುಟುಂಬವಾಗಿ, ಅಧಿಕಾರಿಗಳಿಗೆ ಮತ್ತು ಉಳಿದ ಜನರಿಗೆ ಹೀಗೆ ಹೇಳಿದೆನು: “ನಮ್ಮ ವೈರಿಗಳ ಬಗ್ಗೆ ನೀವು ಏನೂ ಹೆದರಬೇಡಿರಿ. ನಮ್ಮ ದೇವರನ್ನು ನೆನಪುಮಾಡಿರಿ. ಯೆಹೋವನು ಬಲಶಾಲಿಯೂ ಸರ್ವಶಕ್ತನೂ ಆಗಿದ್ದಾನೆ. ನೀವು ನಿಮ್ಮ ಸಹೋದರರಿಗಾಗಿ, ನಿಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ನಿಮ್ಮನಿಮ್ಮ ಹೆಂಡತಿಯರಿಗಾಗಿ ಮತ್ತು ಮನೆಗಳಿಗಾಗಿ ಹೋರಾಡಿರಿ.”