ಪ್ರಸಂಗಿ 12:11 - ಪರಿಶುದ್ದ ಬೈಬಲ್11 ಜ್ಞಾನಿಯ ನುಡಿಗಳು ಪ್ರಾಣಿಗಳನ್ನು ಮುನ್ನಡೆಸುವ ಚಾವಟಿಗಳಂತಿವೆ. ಅವನ ಉಪದೇಶಗಳು ಮುರಿಯದ ಮೊಳೆಗಳಂತಿವೆ. ಅವುಗಳೆಲ್ಲ ಒಬ್ಬನೇ ಕುರುಬನಿಂದ (ದೇವರಿಂದ) ಬಂದಿವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು, ಸಂಗ್ರಹ ವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು ಇವೆರಡು ಒಬ್ಬನೇ ಕುರುಬನಿಂದ ಕೊಡಲ್ಪಟ್ಟಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಜ್ಞಾನಿಗಳ ನುಡಿಗಳು ಮೊನೆಗೋಲುಗಳು, ಅವರು ಸಂಗ್ರಹಿಸಿದ ವಚನಗಳು ಬಿಗಿಯಾಗಿ ಜಡಿದ ಮೊಳೆಗಳು. ಅವುಗಳ ಮೂಲಕರ್ತನು ಎಲ್ಲರ ಏಕೈಕ ಮೇಷಪಾಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳು; ಸಂಗ್ರಹವಾಕ್ಯಗಳು ಬಿಗಿಯಾಗಿ ಬಡಿದ ಮೊಳೆಗಳು; ಒಬ್ಬನೇ ಕರ್ತನಿಂದ ಬಂದಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಜ್ಞಾನಿಗಳ ಮಾತುಗಳು ಮುಳ್ಳುಗೋಲುಗಳ ಹಾಗಿರುತ್ತವೆ. ಅವರು ಸಂಗ್ರಹಿಸಿದ ವಚನಗಳು ಒಬ್ಬ ಆತ್ಮಿಕ ಕುರುಬನಿಂದ ನೆಟ್ಟ ಮೊಳೆಗಳ ಹಾಗೆ ಕೊಡಲಾಗಿವೆ. ಅಧ್ಯಾಯವನ್ನು ನೋಡಿ |
ಶಾಂತಿಸ್ವರೂಪನಾದ ದೇವರು ನಿಮಗೆ ಬೇಕಾದ ತನ್ನ ವರದಾನಗಳನ್ನು ದಯಪಾಲಿಸಲಿ ಎಂದು ನಾನು ಆತನಲ್ಲಿ ಪ್ರಾರ್ಥಿಸುತ್ತೇನೆ. ಏಕೆಂದರೆ ಆಗ ನೀವು ಆತನ ಇಷ್ಟಕ್ಕನುಸಾರವಾದವುಗಳನ್ನೆಲ್ಲಾ ಮಾಡಲು ಸಾಧ್ಯವಾಗುವುದು. ತನ್ನ ರಕ್ತವನ್ನು ಸುರಿಸಿ ಸಭೆಯೆಂಬ ಹಿಂಡಿಗೆ ಮಹಾಕುರುಬನಾಗಿರುವ ನಮ್ಮ ಪ್ರಭುವಾದ ಯೇಸುವನ್ನು ಸತ್ತವರೊಳಗಿಂದ ಮೇಲಕ್ಕೆ ಎಬ್ಬಿಸಿದವನು ದೇವರೇ. ಆತನ ರಕ್ತವು ಶಾಶ್ವತವಾದ ಹೊಸ ಒಡಂಬಡಿಕೆಯನ್ನಾರಂಭಿಸಿತು. ದೇವರು ತನಗೆ ಸಂತೋಷವನ್ನು ಉಂಟುಮಾಡುವ ಕಾರ್ಯಗಳನ್ನು ಯೇಸು ಕ್ರಿಸ್ತನ ಮೂಲಕ ನಮ್ಮಲ್ಲಿ ನಡೆಸಲಿ. ಯೇಸುವಿಗೆ ಎಂದೆಂದಿಗೂ ಮಹಿಮೆಯಾಗಲಿ. ಆಮೆನ್.