ಪ್ರಸಂಗಿ 12:2 - ಪರಿಶುದ್ದ ಬೈಬಲ್2 ನೀನು ಮುದುಕನಾದಾಗ, ಸೂರ್ಯ, ಚಂದ್ರ, ನಕ್ಷತ್ರಗಳ ಬೆಳಕು ನಿನಗೆ ಕತ್ತಲೆಯಂತೆ ಕಾಣುತ್ತದೆ. ಮಳೆಯಾದ ಮೇಲೆಯೂ ಮತ್ತೆಮತ್ತೆ ಮೋಡಗಳಂತೆ ನಿನ್ನ ಜೀವನದಲ್ಲಿ ಕಷ್ಟಗಳು ತುಂಬಿರುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೂರ್ಯನೂ, ಚಂದ್ರನೂ ಮತ್ತು ನಕ್ಷತ್ರಗಳೂ ಕತ್ತಲಾಗುವ ಮೊದಲೇ, ಮಳೆಯ ಮೋಡಗಳು ಹಿಂತಿರುಗಿ ಬರುವವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಆ ಕಷ್ಟಕರವಾದ ದಿನಗಳಲ್ಲಿ ಸೂರ್ಯಚಂದ್ರನಕ್ಷತ್ರಗಳೂ ನಿನಗೆ ಮೊಬ್ಬಾಗುವುವು. ಮಳೆಯಾದ ಮೇಲೂ ಮೋಡಗಳು ಮತ್ತೆ ಬರುವುವು; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಆ ಕಷ್ಟದ ದಿನಗಳಲ್ಲಿ ಸೂರ್ಯನೂ ಬೆಳಕೂ ಚಂದ್ರನೂ ನಕ್ಷತ್ರಗಳೂ ಮೊಬ್ಬಾಗುವವು; ಮಳೆಯಾದ ಮೇಲೆಯೂ ಮೋಡಗಳು ಮತ್ತೆ ಬರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಸೂರ್ಯ ಚಂದ್ರ ನಕ್ಷತ್ರಗಳೂ ನಿನಗೆ ಮೊಬ್ಬಾಗಿ, ಮಳೆಯ ಮೋಡಗಳು ಮತ್ತೆ ಬರುವುದಕ್ಕಿಂತ ಮೊದಲು ದೇವರನ್ನು ಸ್ಮರಿಸು. ಅಧ್ಯಾಯವನ್ನು ನೋಡಿ |