Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:9 - ಪರಿಶುದ್ದ ಬೈಬಲ್‌

9 ಪ್ರಸಂಗಿಯು ತುಂಬ ಜ್ಞಾನಿಯಾಗಿದ್ದನು. ಪ್ರಸಂಗಿಯು ಅನೇಕ ಜ್ಞಾನೋಪದೇಶಗಳನ್ನು ತುಂಬ ಎಚ್ಚರಿಕೆಯಿಂದ ಅಧ್ಯಯನ ಮಾಡಿ ಕ್ರಮಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಪ್ರಸಂಗಿಯು ಜ್ಞಾನಿಯಾಗಿದ್ದು, ಜನರಿಗೆ ತಿಳಿವಳಿಕೆಯನ್ನು ಬೋಧಿಸುತ್ತಾ ಬಂದನು, ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ ಕ್ರಮಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಉಪದೇಶಕನು ಜ್ಞಾನಿಯಾಗಿದ್ದ; ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದ. ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ, ಪರೀಕ್ಷಿಸಿ, ಕ್ರಮಪಡಿಸಿದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಮತ್ತು ಪ್ರಸಂಗಿಯು ಜ್ಞಾನಿಯಾಗಿದ್ದದ್ದಲ್ಲದೆ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಅನೇಕಾನೇಕ ಜ್ಞಾನೋಕ್ತಿಗಳನ್ನು ಧ್ಯಾನಿಸಿ ಪರೀಕ್ಷಿಸಿ ಕ್ರಮಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಇದಲ್ಲದೆ ಜ್ಞಾನವಂತ ಪ್ರಸಂಗಿಯು ಇನ್ನೂ ಜನರಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು. ಅನೇಕ ಜ್ಞಾನೋಕ್ತಿಗಳನ್ನು ಅವನು ಪರೀಕ್ಷಿಸಿ, ವಿಚಾರಿಸಿ ಕ್ರಮಪಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:9
8 ತಿಳಿವುಗಳ ಹೋಲಿಕೆ  

ರಾಜನಾದ ಸೊಲೊಮೋನನು ತನ್ನ ಜೀವಿತದ ಅವಧಿಯಲ್ಲಿ ಮೂರುಸಾವಿರ ಜ್ಞಾನೋಪದೇಶಗಳನ್ನೂ ಒಂದು ಸಾವಿರದ ಐದು ಹಾಡುಗಳನ್ನೂ ಬರೆದನು.


ದಾವೀದನ ಮಗನಾದ ಸೊಲೊಮೋನನ ಜ್ಞಾನೋಕ್ತಿಗಳು. ಸೊಲೊಮೋನನು ಇಸ್ರೇಲರ ರಾಜನಾಗಿದ್ದನು.


ಇವು ಸಹ ಸೊಲೊಮೋನನು ಹೇಳಿದ ಜ್ಞಾನೋಕ್ತಿಗಳು. ಈ ನುಡಿಗಳನ್ನು ಯೆಹೂದದ ರಾಜನಾಗಿದ್ದ ಹಿಜ್ಕೀಯನ ಸೇವಕರು ನಕಲು ಮಾಡಿದರು:


ಇವು ಸೊಲೊಮೋನನ ಜ್ಞಾನೋಕ್ತಿಗಳು: ಜ್ಞಾನಿಯಾದ ಮಗನಿಂದ ತಂದೆಗೆ ಸಂತೋಷ. ಮೂಢನಾದ ಮಗನಿಂದ ತಾಯಿಗೆ ದುಃಖ.


ನಿನ್ನ ಪತ್ನಿಯರೂ ಅಧಿಕಾರಿಗಳೂ ಧನ್ಯರೇ ಸರಿ! ಯಾಕೆಂದರೆ ಅವರು ನಿನ್ನ ಸೇವೆ ಮಾಡುತ್ತಾ ನಿನ್ನ ಜ್ಞಾನವಾಕ್ಯಗಳನ್ನು ಕೇಳಬಹುದು!


ಯೆಹೋವನು ತಾನು ವಾಗ್ದಾನ ಮಾಡಿದ್ದಂತೆ ಸೊಲೊಮೋನನಿಗೆ ಜ್ಞಾನವನ್ನು ಅನುಗ್ರಹಿಸಿದನು. ಹೀರಾಮನ ಮತ್ತು ಸೊಲೊಮೋನನ ನಡುವೆ ಸಮಾಧಾನವಿತ್ತು. ಈ ಇಬ್ಬರು ರಾಜರುಗಳು ತಮ್ಮತಮ್ಮಲ್ಲಿ ಒಂದು ಒಪ್ಪಂದವನ್ನು ಮಾಡಿಕೊಂಡರು.


ಜ್ಞಾನಿಗಳು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ನೀತಿವಂತರಾಗಿ ಜೀವಿಸಲು ಅವರು ಅನೇಕರಿಗೆ ಉಪದೇಶಿಸುವರು. ಯುಗಯುಗಾಂತರಗಳಲ್ಲಿಯೂ ನಕ್ಷತ್ರಗಳ ಹಾಗೆ ಹೊಳೆಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು