Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:10 - ಪರಿಶುದ್ದ ಬೈಬಲ್‌

10 ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕೆಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ಕಣ್ಣು ಬಯಸಿದ್ದೆಲ್ಲವನ್ನು, ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ. ಯಾವ ಸಂತೋಷವನ್ನು ಅನುಭವಿಸುವುದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ. ಏಕೆಂದರೆ ನನ್ನ ಹೃದಯವು ನಾನು ನಡಿಸುವ ಕಾರ್ಯಗಳಲ್ಲಿ ಹರ್ಷಿಸುತ್ತಿತ್ತು. ನನ್ನ ಪ್ರಯಾಸದಿಂದ ನನಗೆ ದೊರೆತ ಫಲವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ನಾನು ಒಪ್ಪಿಸದೆ ಬಿಡಲಿಲ್ಲ; ಯಾವ ಸಂತೋಷವನ್ನನುಭವಿಸುವದಕ್ಕೂ ನನ್ನ ಹೃದಯವನ್ನು ತಡೆಯಲಿಲ್ಲ; ಏಕಂದರೆ ನನ್ನ ಹೃದಯವು ನನ್ನ ಕಾರ್ಯಗಳಲ್ಲೆಲ್ಲಾ ಹರ್ಷಿಸುತ್ತಿತ್ತು; ನನ್ನ ಪ್ರಯಾಸದಿಂದೆಲ್ಲಾ ನನಗಾದ ಲಾಭವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ನನ್ನ ಕಣ್ಣು ಬಯಸಿದ್ದೆಲ್ಲವನ್ನು ಅದರಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ. ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು. ಇದು ನನ್ನ ಎಲ್ಲಾ ಪ್ರಯಾಸದಿಂದ ನನಗೆ ಬಂದ ಬಹುಮಾನ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:10
21 ತಿಳಿವುಗಳ ಹೋಲಿಕೆ  

ನೀನು ಪ್ರಿಯ ಪತ್ನಿಯೊಡನೆ ಸುಖಪಡು. ನಿನ್ನ ಅಲ್ಪಕಾಲ ಜೀವಿತದ ದಿನಗಳಲ್ಲೆಲ್ಲಾ ಸುಖಪಡು. ಈ ಜೀವಿತವನ್ನು ನಿನಗೆ ಅನುಗ್ರಹಿಸಿರುವಾತನು ದೇವರೇ, ಇದೇ ನಿನ್ನ ಪಾಲು. ನಿನ್ನ ಈ ಜೀವಿತದ ಕೆಲಸಕಾರ್ಯಗಳನ್ನು ಸಂತೋಷದಿಂದ ಮಾಡು.


ನಾನು ಕಂಡುಕೊಂಡದ್ದೇನೆಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.


ಆದ್ದರಿಂದ ಮನುಷ್ಯನಿಗೆ ತನ್ನ ಕಾರ್ಯದಲ್ಲಿ ಸಂತೋಷಪಡುವುದಕ್ಕಿಂತ ಬೇರೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಅಲ್ಲದೆ ಮುಂದಿನ ಕಾಲವನ್ನು ಕುರಿತು ಮನುಷ್ಯನು ಚಿಂತಿಸಬಾರದು. ಯಾಕೆಂದರೆ ಅವನ ಜೀವಮಾನದ ನಂತರ ಸಂಭವಿಸುವಂಥವುಗಳನ್ನು ನೋಡಲು ಈ ಲೋಕಕ್ಕೆ ಅವನನ್ನು ಯಾರು ಬರಮಾಡುವರು?


ನಿಷ್ಪ್ರಯೋಜಕವಾದವುಗಳ ಮೇಲೆ ದೃಷ್ಟಿಸದಂತೆ ನನ್ನನ್ನು ಕಾಪಾಡು. ನಿನ್ನ ಮಾರ್ಗದಲ್ಲಿ ಜೀವಿಸಲು ನನಗೆ ಸಹಾಯಮಾಡು.


ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.


ಈ ಲೋಕದಲ್ಲಿರುವ ಕೆಟ್ಟವುಗಳು ಇಂತಿವೆ: ನಮ್ಮ ಪಾಪಸ್ವಭಾವವನ್ನು ತಣಿಸಲು ಮಾಡಲಿಚ್ಛಿಸುವ ಕಾರ್ಯಗಳು, ನಾವು ನೋಡುವ ಪಾಪಪೂರಿತವಾದದ್ದನ್ನು ಪಡೆಯಲಿಚ್ಛಿಸುವುದು, ಮತ್ತು ನಮ್ಮಲ್ಲಿರುವ ವಸ್ತುಗಳಲ್ಲಿಯೇ ದುರಹಂಕಾರಪಡುವುದು. ಆದರೆ ಇವುಗಳಲ್ಲಿ ಯಾವುದೂ ತಂದೆಯಿಂದ ಬರುವುದಿಲ್ಲ. ಇವುಗಳೆಲ್ಲ ಈ ಲೋಕದಿಂದ ಬರುತ್ತವೆ.


ಈ ಲೋಕದಲ್ಲಿ ಮನುಷ್ಯನು ಪಡುವ ಎಲ್ಲಾ ಪ್ರಯಾಸದಿಂದ ಅವನಿಗೆ ಪ್ರಯೋಜನವೇನು?


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ದುರಾಶೆಪಡುವುದಕ್ಕಿಂತ ಇರುವುದರಲ್ಲಿ ಸಂತೋಷಪಡುವುದೇ ಉತ್ತಮ. ದುರಾಶೆಯಿಂದ ಪ್ರಯೋಜನವಿಲ್ಲ. ಅದು ಸಹ ಗಾಳಿಯನ್ನು ಹಿಂದಟ್ಟಿದಂತಿದೆ.


ಪಕ್ಷಿಯಂತೆ ಹಾರಿಹೋಗುತ್ತದೋ ಎಂಬಂತೆ ಹಣವು ಬಹುಬೇಗನೆ ಇಲ್ಲವಾಗುವುದು.


“ಯುವತಿಯನ್ನು ಕಾಮದಾಶೆಯಿಂದ ನೋಡುವುದಿಲ್ಲವೆಂದು ನನ್ನ ಕಣ್ಣುಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದೇನೆ.


ಅವನು ಮನೆಗೆ ಹಿಂದಿರುಗಿ ತನ್ನ ತಂದೆತಾಯಿಗಳಿಗೆ, “ನಾನು ತಿಮ್ನಾ ನಗರದಲ್ಲಿ ಒಬ್ಬ ಫಿಲಿಷ್ಟಿಯರ ಸ್ತ್ರೀಯನ್ನು ನೋಡಿದ್ದೇನೆ. ನೀವು ಅವಳನ್ನು ನನಗೆ ಮದುವೆ ಮಾಡಿಸಿಕೊಡಿ” ಎಂದು ಕೇಳಿದನು.


ಈ ಹೆಣ್ಣುಮಕ್ಕಳ ಸೌಂದರ್ಯವನ್ನು ಕಂಡ ದೇವಪುತ್ರರು ತಮಗೆ ಬೇಕಾದ ಸ್ತ್ರೀಯರನ್ನು ಆರಿಸಿಕೊಂಡು ಮದುವೆಯಾದರು. ಈ ಸ್ತ್ರೀಯರು ಮಕ್ಕಳನ್ನು ಹೆತ್ತರು. ಆ ಕಾಲದಲ್ಲಿ ಮತ್ತು ಆ ಕಾಲದ ನಂತರ ನೆಫೇಲಿಯರು ಆ ನಾಡಿನಲ್ಲಿ ವಾಸವಾಗಿದ್ದರು. ಅವರು ಪ್ರಸಿದ್ಧರಾದ ಪರಾಕ್ರಮಶಾಲಿಗಳಾಗಿದ್ದರು. ಬಳಿಕ ಯೆಹೋವನು, “ಜನರು ಕೇವಲ ಮಾನವರಷ್ಟೆ; ನನ್ನ ಆತ್ಮವು ಅವರಿಂದ ಯಾವಾಗಲೂ ತೊಂದರೆಗೆ ಗುರಿಯಾಗಕೂಡದು. ಅವರು 120 ವರ್ಷ ಬದುಕುವಂತೆ ಮಾಡುವೆನು” ಅಂದುಕೊಂಡನು.


ಸ್ತ್ರೀಗೆ ಆ ಮರ ಸುಂದರವಾಗಿ ಕಂಡಿತು. ಅದರ ಹಣ್ಣು ಆಕೆಗೆ ತಿನ್ನಲು ಯೋಗ್ಯವಾಗಿ ಕಂಡಿತು. ಆ ಮರ ತನ್ನನ್ನು ಜ್ಞಾನಿಯನ್ನಾಗಿ ಮಾಡುತ್ತದೆಯೆಂದು ಆಕೆ ಉತ್ಸಾಹಗೊಂಡಳು. ಆದ್ದರಿಂದ ಸ್ತ್ರೀಯು ಆ ಮರದ ಹಣ್ಣನ್ನು ಕಿತ್ತುಕೊಂಡು ತಿಂದಳು; ತನ್ನೊಂದಿಗಿದ್ದ ಗಂಡನಿಗೂ ಸ್ವಲ್ಪ ಹಣ್ಣನ್ನು ಕೊಟ್ಟಳು. ಅವನು ಸಹ ಅದನ್ನು ತಿಂದನು.


ಹಣದಾಸೆಯುಳ್ಳವನು ತನ್ನಲ್ಲಿ ಎಷ್ಟೇ ಹಣವಿದ್ದರೂ ತೃಪ್ತನಾಗಲಾರನು. ಐಶ್ವರ್ಯದಾಸೆಯುಳ್ಳವನು ಎಷ್ಟೇ ಸಂಪಾದಿಸಿದರೂ ತೃಪ್ತನಾಗುವುದಿಲ್ಲ. ಇದು ಸಹ ವ್ಯರ್ಥ.


ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗುವ ಎಲ್ಲವನ್ನೂ ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ.


ಅವರು ಸತ್ತಾಗಲೇ, ಅವರ ಪ್ರೀತಿ, ದ್ವೇಷ ಮತ್ತು ಹೊಟ್ಟೆಕಿಚ್ಚು ಅಳಿದುಹೋದವು; ಸತ್ತವರು ಭೂಲೋಕದ ಕಾರ್ಯಗಳಲ್ಲಿ ಇನ್ನೆಂದಿಗೂ ಪಾಲುಗಾರರಾಗುವುದಿಲ್ಲ.


ನಾನು ನನ್ನ ಹೃದಯದಲ್ಲಿ, “ಬಾ, ನಿನ್ನನ್ನು ಸುಖದ ಮೂಲಕ ಪರೀಕ್ಷಿಸುವೆನು; ಆಗ ನೀನು ನೀತಿಮಾರ್ಗವನ್ನು ಕಲಿತುಕೊಳ್ಳುವೆ” ಎಂದುಕೊಂಡೆನು. ಆದರೆ ಇದು ಸಹ ವ್ಯರ್ಥವೆಂದು ಕಂಡುಕೊಂಡೆನು.


ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.


ಅವನ ಜೀವಮಾನವೆಲ್ಲಾ ವ್ಯಸನದಿಂದಲೂ ದುಃಖದಿಂದಲೂ ಕೂಡಿದೆ. ನಿರಾಶೆಯೂ ಕಾಯಿಲೆಯೂ ಕೋಪವೂ ಅವನನ್ನು ಕಾಡುತ್ತಲೇ ಇರುತ್ತವೆ.


ಆದ್ದರಿಂದ ಜೀವನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವುದೇ ಉತ್ತಮವೆಂದು ನಿರ್ಧರಿಸಿದೆನು. ಯಾಕೆಂದರೆ ದೇವರು ಮನುಷ್ಯನಿಗೆ ಈ ಲೋಕದಲ್ಲಿ ಅನುಗ್ರಹಿಸಿರುವ ಪ್ರಯಾಸಕರ ಕೆಲಸಗಳಲ್ಲಿಯೂ ಮನುಷ್ಯನು ಸಂತೋಷವಾಗಿರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು