ಪ್ರಸಂಗಿ 2:12 - ಪರಿಶುದ್ದ ಬೈಬಲ್12 ರಾಜನಿಗಿಂತ ಹೆಚ್ಚಾಗಿ ಮಾಡಲು ಬೇರೆ ಯಾರಿಗೂ ಸಾಧ್ಯವಿಲ್ಲ. ನೀನು ಮಾಡಬೇಕೆನ್ನುವುದನ್ನು ನಿನಗಿಂತ ಮೊದಲೇ ಬೇರೊಬ್ಬ ರಾಜನು ಮಾಡಿರುತ್ತಾನೆ; ಆದ್ದರಿಂದ ರಾಜನ ಕಾರ್ಯಗಳು ಸಹ ವ್ಯರ್ಥವೆಂದು ಕಂಡುಕೊಂಡೆನು. ಆದ್ದರಿಂದ ನಾನು ಜ್ಞಾನವನ್ನೂ ಮೂಢತನವನ್ನೂ ಬುದ್ಧಿಹೀನತೆಯನ್ನೂ ಮತ್ತೆ ಮತ್ತೆ ಆಲೋಚಿಸಿದೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಜ್ಞಾನವನ್ನೂ ನೋಡುವುದಕ್ಕೆ ತಿರುಗಿಕೊಂಡೆನು, ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವುದಕ್ಕೆ ತಿರುಗಿಕೊಂಡೆನು. ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ರಾಜನ ಪ್ರಯತ್ನವೇ ಹೀಗಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುತ್ತದೆ ಎಂದುಕೊಂಡೆ. ಜ್ಞಾನವೆಂದರೇನು? ಮೂಢತನವೆಂದರೇನು? ಬುದ್ಧಿಹೀನತೆ ಎಂದರೇನು? ಇವುಗಳ ಬಗ್ಗೆ ಮತ್ತೆ ಚಿಂತಿಸಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ರಾಜನ ಪ್ರಯತ್ನವಾದ ಮೇಲೆ ಮತ್ತೊಬ್ಬನಿಂದ ಏನಾದೀತು? ಆದದ್ದೇ ಆಗುವದು ಎಂದುಕೊಂಡು ಜ್ಞಾನವನ್ನೂ ಮರುಳುತನವನ್ನೂ ಬುದ್ಧಿಹೀನತೆಯನ್ನೂ ನೋಡುವದಕ್ಕೆ ತಿರುಗಿಕೊಂಡೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅನಂತರ ಜ್ಞಾನವನ್ನೂ ಮನಗುಂದುವಿಕೆಯನ್ನೂ ಮೂಡತೆಯನ್ನೂ ಮತ್ತೆ ಯೋಚಿಸುವುದಕ್ಕೆ ನಾನು ತಿರುಗಿಕೊಂಡೆನು. ಈಗಾಗಲೇ ಮಾಡಿದ್ದನ್ನು ಬಿಟ್ಟು, ಅರಸನ ತರುವಾಯ ಬರುವವನು ಹೊಸದಾಗಿ ಏನು ಮಾಡಬಲ್ಲನು? ಅಧ್ಯಾಯವನ್ನು ನೋಡಿ |