Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:16 - ಪರಿಶುದ್ದ ಬೈಬಲ್‌

16 ಯಾಕೆಂದರೆ ಮೂಢನು ಸಾಯುವಂತೆ ಜ್ಞಾನಿಯೂ ಸಾಯುವುದರಿಂದ ಜನರು ಜ್ಞಾನಿಯನ್ನಾಗಲಿ ಮೂಢನನ್ನಾಗಲಿ ಸದಾಕಾಲ ಜ್ಞಾಪಿಸಿಕೊಳ್ಳುವುದಿಲ್ಲ. ಅವರ ಕಾರ್ಯಗಳನ್ನು ಮುಂದಿನ ಕಾಲದ ಜನರು ಮರೆತುಬಿಡುವರು. ಆದ್ದರಿಂದ ಜ್ಞಾನಿಗೂ ಮೂಢನಿಗೂ ಯಾವ ವ್ಯತ್ಯಾಸವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಏಕೆಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ಬಹಳ ದಿನಗಳವರೆಗೆ ಮರೆತುಹೋಗುವನು. ಈಗಿನ ಜನರು ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರು. ಆಹಾ! ಮೂಢನಂತೆ ಜ್ಞಾನಿಯೂ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಏಕಂದರೆ ಮೂಢನು ಹೇಗೋ ಹಾಗೆಯೇ ಜ್ಞಾನಿಯೂ ನಿರಂತರವಾಗಿ ಮರೆತುಹೋಗುವನು. ಈಗಿನವರೆಲ್ಲಾ ಮುಂದಿನ ಕಾಲದೊಳಗಾಗಿಯೇ ಮರೆತುಹೋಗುವರಷ್ಟೆ. ಆಹಾ, ಮೂಢನಂತೆ ಜ್ಞಾನಿಯೂ ಸಾಯುವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ಬಹಳ ದಿನಗಳವರೆಗೆ ಜ್ಞಾಪಕಮಾಡಿಕೊಳ್ಳುವುದಿಲ್ಲ. ಇವರಿಬ್ಬರನ್ನೂ ಮರೆತುಹೋದ ದಿನಗಳು ಈಗಾಗಲೇ ಬಂದಿವೆ. ಮೂಢನಂತೆ ಜ್ಞಾನಿಯೂ ಸಹ ಸಾಯಲೇಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:16
17 ತಿಳಿವುಗಳ ಹೋಲಿಕೆ  

ಬಹುಕಾಲದ ಹಿಂದಿನ ಘಟನೆಗಳನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಈಗ ನಡೆಯುತ್ತಿರುವ ಸಂಗತಿಗಳನ್ನು ಮುಂದಿನ ಕಾಲದ ಜನರು ಜ್ಞಾಪಿಸಿಕೊಳ್ಳುವುದಿಲ್ಲ. ಹೀಗೆ, ತಮಗಿಂತ ಮುಂಚೆ ಇದ್ದವರು ಮಾಡಿದ್ದನ್ನು ಜನರು ಜ್ಞಾಪಿಸಿಕೊಳ್ಳುವುದಿಲ್ಲ.


ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳುವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು.


ಸತ್ತು ಕತ್ತಲೆಯಲ್ಲಿ ಬಿದ್ದಿರುವ ಜನರು ನಿನ್ನ ಅದ್ಭುತಕಾರ್ಯಗಳನ್ನು ನೋಡಲಾರರು. ಸತ್ತವರು, ಮರೆಯಲ್ಪಟ್ಟವರ ಲೋಕದಲ್ಲಿ ನಿನ್ನ ನೀತಿಯ ಬಗ್ಗೆ ಮಾತಾಡಲಾರರು.


ಬಳಿಕ ಒಬ್ಬ ಹೊಸ ರಾಜನು ಈಜಿಪ್ಟನ್ನು ಆಳತೊಡಗಿದನು. ಈ ರಾಜನಿಗೆ ಯೋಸೇಫನ ವಿಷಯವಾಗಿ ತಿಳಿದಿರಲಿಲ್ಲ.


ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.


ದೇವರನ್ನು ಅನುಸರಿಸುವ ಭಕ್ತರು ಒಬ್ಬರಿಗೊಬ್ಬರು ಮಾತನಾಡಿಕೊಳ್ಳಲು ಯೆಹೋವನು ಆಲೈಸಿದನು. ಆತನ ಮುಂದೆ ದೇವಜನರ ಹೆಸರುಗಳನ್ನು ಬರೆದಿರುವ ಒಂದು ಪುಸ್ತಕವಿತ್ತು. ಯೆಹೋವನ ಹೆಸರನ್ನು ಘನಪಡಿಸುವವರ ಹೆಸರುಗಳು ಅದರಲ್ಲಿದ್ದವು.


ಆದ್ದರಿಂದ ಜ್ಞಾನಿಯು ಮೂಢನಿಗಿಂತ ಉತ್ತಮನಲ್ಲ. ಬಡವರಾಗಿದ್ದರೂ ಜೀವನವನ್ನು ಅರ್ಥಮಾಡಿಕೊಂಡು ಜೀವಿಸುವುದೇ ಮೇಲು,


ಅದು ಈ ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೋ ಕತ್ತಲೆಯಲ್ಲಿ ನಡೆದುಹೋಗುವನು. ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು; ಅವರಿಬ್ಬರೂ ಸಾಯುವರು.


ನಾವು ಅಡವಿಯ ಚಿಕ್ಕ ಹೂವಿನಂತಿದ್ದೇವೆ ಎಂಬುದು ಆತನಿಗೆ ಗೊತ್ತಿದೆ. ನಮ್ಮ ಹೂವು ಬೇಗನೆ ಬೆಳೆದರೂ ಬಿಸಿಗಾಳಿ ಬೀಸಿದಾಗ ಒಣಗಿಹೋಗುವುದು. ಬಳಿಕ, ಅದು ಬೆಳೆದ ಸ್ಥಳವನ್ನೂ ಗುರುತಿಸಲಾಗದು.


ಬುದ್ಧಿಹೀನರೂ ಮೂಢರೂ ಸಾಯುವಂತೆ ಜ್ಞಾನಿಗಳೂ ಸಾಯುವರು. ಅವರು ಸತ್ತಾಗ ಅವರ ಆಸ್ತಿಯು ಬೇರೆಯವರ ಪಾಲಾಗುವುದು.


ರಾಜನಾದ ದಾವೀದನು ಅಬ್ನೇರನಿಗಾಗಿ ಈ ಶೋಕಗೀತೆಯನ್ನು ಹಾಡಿದನು: “ಅಬ್ನೇರನು ಮೂರ್ಖ ಅಪರಾಧಿಯಂತೆ ಸತ್ತನೇ?


ಬಳಿಕ ಯೋಸೇಫನೂ ಅವನ ಸಹೋದರರೂ ಮತ್ತು ಆ ತಲೆಮಾರಿನ ಜನರೆಲ್ಲರೂ ಸತ್ತುಹೋದರು.


ನಾನು ನನ್ನೊಳಗೆ, “ಮೂಢನಿಗೆ ಸಂಭವಿಸುವ ಗತಿಯು ನನಗೂ ಸಂಭವಿಸುವುದು. ಹೀಗಿರಲು ಜ್ಞಾನಿಯಾಗಲು ನಾನೇಕೆ ಪ್ರಯಾಸಪಡಬೇಕು? ಇದೂ ವ್ಯರ್ಥವಲ್ಲವೇ?” ಅಂದುಕೊಂಡೆನು.


ಔತಣಕೂಟಕ್ಕೆ ಹೋಗುವುದಕ್ಕಿಂತ ಶವಸಂಸ್ಕಾರಕ್ಕೆ ಹೋಗುವುದು ಇನ್ನೂ ಉತ್ತಮ. ಯಾಕೆಂದರೆ ಎಲ್ಲರೂ ಒಂದು ದಿನ ಸಾಯಲೇಬೇಕು. ಸಾವನ್ನು ಕಂಡ ಪ್ರತಿಯೊಬ್ಬನು ಇದನ್ನು ಸ್ಮರಿಸಿಕೊಳ್ಳುವನು.


ಇದಲ್ಲದೆ ದುಷ್ಟರಿಗೆ ಶವಸಂಸ್ಕಾರವನ್ನು ವೈಭವದಿಂದ ಮಾಡುವುದನ್ನು ನಾನು ನೋಡಿದ್ದೇನೆ. ಶವಸಂಸ್ಕಾರವಾದ ಮೇಲೆ ಜನರು ಸತ್ತುಹೋದ ದುಷ್ಟರನ್ನು ಹೊಗಳುತ್ತಾ ತಮ್ಮ ಮನೆಗಳಿಗೆ ಹೋದರು; ನೀತಿವಂತರಾದರೋ ಪರಿಶುದ್ಧ ಸ್ಥಾನದಿಂದ ತೊಲಗಬೇಕಾಯಿತು. ನಗರದಲ್ಲಿ ಅವರ ಜ್ಞಾಪಕವೇ ಇಲ್ಲವಾಯಿತು. ಇದು ಸಹ ವ್ಯರ್ಥ.


ಆ ನಗರದಲ್ಲಿ ಒಬ್ಬ ಜ್ಞಾನಿ ಇದ್ದನು. ಆದರೆ ಅವನು ಬಡವನಾಗಿದ್ದನು, ಅವನು ತನ್ನ ಜ್ಞಾನದಿಂದ ಆ ನಗರವನ್ನು ಕಾಪಾಡಿದನು; ಆದರೆ ಜನರು ಅವನನ್ನು ಮರೆತೇಬಿಟ್ಟರು.


ಜಾಣರು ಜ್ಞಾನಿಗಳಾಗಿದ್ದಾರೆ; ಅವರು ವಿವೇಚಿಸಿ ಕಾರ್ಯಗಳನ್ನು ಮಾಡುತ್ತಾರೆ, ಮೂಢರು ಬುದ್ಧಿಹೀನರಾಗಿದ್ದಾರೆ; ತಾವು ಮೋಸದಿಂದ ಬದುಕಬಲ್ಲೆವು ಎಂದು ಅವರು ಯೋಚಿಸಿಕೊಂಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು