ಪ್ರಸಂಗಿ 2:21 - ಪರಿಶುದ್ದ ಬೈಬಲ್21 ಒಬ್ಬನು ತನ್ನ ಜ್ಞಾನದಿಂದಲೂ ತಿಳುವಳಿಕೆಯಿಂದಲೂ ಕಾರ್ಯವನ್ನು ಸಫಲಗೊಳಿಸಿದ ಮೇಲೆ ಅದರ ಫಲವನ್ನು ಪ್ರಯಾಸಪಡದ ಬೇರೊಬ್ಬನಿಗೆ ಬಿಟ್ಟು ಹೋಗಬೇಕಾಗುವುದು. ಇದೂ ವ್ಯರ್ಥವೂ ಅನ್ಯಾಯವೂ ಆಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಒಬ್ಬನು ಜ್ಞಾನದಿಂದಲೂ, ತಿಳಿವಳಿಕೆಯಿಂದಲೂ ತನ್ನ ಕೆಲಸವನ್ನು ನಡೆಸಿ ಸಿದ್ಧಿಗೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಭಾಧ್ಯತೆಯಾಗಿ ಬಿಡಬೇಕಾಯಿತು. ಇದು ಸಹ ವ್ಯರ್ಥವೂ, ಕೇವಲ ಅನ್ಯಾಯವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಒಬ್ಬನು ಜ್ಞಾನದಿಂದಲೂ ತಿಳುವಳಿಕೆ ಇಂದಲೂ ಕೆಲಸಮಾಡಿ ಕಾರ್ಯವನ್ನು ಸಿದ್ಧಿಗೆ ತಂದಮೇಲೆ, ಅದಕ್ಕಾಗಿ ಪ್ರಯಾಸಪಡದವನಿಗೆ ಅದನ್ನು ವಾರಸುದಾರನಾಗಿ ಬಿಡಬೇಕಾಗುತ್ತದೆ. ಇದು ಸಹ ವ್ಯರ್ಥವಲ್ಲವೆ? ಇದು ಅನ್ಯಾಯವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಒಬ್ಬನು ಜ್ಞಾನದಿಂದಲೂ ತಿಳುವಳಿಕೆಯಿಂದಲೂ ತನ್ನ ಕೆಲಸವನ್ನು ನಡಿಸಿ ಸಾಫಲ್ಯಕ್ಕೆ ತಂದ ಮೇಲೆ ಆ ಕೆಲಸದಲ್ಲಿ ಪ್ರಯಾಸಪಡದವನಿಗೆ ಅದರ ಫಲವನ್ನು ಬಾಧ್ಯತೆಯಾಗಿ ಬಿಡಬೇಕಾಗುವದು. ಇದು ಸಹ ವ್ಯರ್ಥವೂ ಕೇವಲ ಅನ್ಯಾಯವೂ ಆಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ಒಬ್ಬ ಮನುಷ್ಯನು ಜ್ಞಾನದಲ್ಲಿಯೂ ತಿಳುವಳಿಕೆಯಲ್ಲಿಯೂ ಕೌಶಲಯುತವಾಗಿಯೂ ತನ್ನ ಕೆಲಸ ಮಾಡಬಹುದು. ಅನಂತರ ತನಗಿರುವುದೆಲ್ಲವನ್ನು ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡಬೇಕಾಗುತ್ತದೆ. ಇದೂ ವ್ಯರ್ಥವೂ ದೊಡ್ಡ ವ್ಯಸನವೂ ಆಗಿವೆ. ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.