ಪ್ರಸಂಗಿ 2:26 - ಪರಿಶುದ್ದ ಬೈಬಲ್26 ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಸಂತೋಷವನ್ನೂ ದಯಪಾಲಿಸುತ್ತಾನಲ್ಲವೆ; ಪಾಪಿಗಾದರೋ ತನ್ನ ಮೆಚ್ಚಿಕೆಯಾದವನಿಗೆ ಒದಗತಕ್ಕವುಗಳನ್ನು ಕೂಡಿಸಿಡುವ ಪ್ರಯಾಸವನ್ನೇ ನೇವಿುಸುತ್ತಾನೆ. ಇದೂ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಏಕೆಂದರೆ ದೇವರು ಮೆಚ್ಚಿದವರಿಗೆ ಅವರು ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾರೆ. ಆದರೆ ದೇವರು ತಮಗೆ ಮೆಚ್ಚುಗೆಯಾದವನಿಗೆ ಕೊಡತಕ್ಕ ಐಶ್ವರ್ಯವನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ಪಾಪಿಗೆ ಕೊಡುತ್ತಾರೆ. ಏಕೆಂದರೆ ಇದು ಸಹ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ. ಅಧ್ಯಾಯವನ್ನು ನೋಡಿ |
ಆದರೆ ದೇವರಿಂದ ಬರುವ ಜ್ಞಾನವು ಹೀಗಿರುತ್ತದೆ: ಮೊದಲನೆಯದಾಗಿ ಅದು ಪರಿಶುದ್ಧವಾದದ್ದು. ಅದು ಶಾಂತಿದಾಯಕವಾದದ್ದು, ಸಾತ್ವಿಕವಾದದ್ದು ಮತ್ತು ಸುಲಭವಾಗಿ ಮೆಚ್ಚಿಕೊಳ್ಳುವಂಥದ್ದು. ಈ ಜ್ಞಾನವು ತೊಂದರೆಯಲ್ಲಿರುವ ಜನರಿಗೆ ಸಹಾಯ ಮಾಡಲು ಮತ್ತು ಇತರ ಜನರಿಗೆ ಒಳ್ಳೆಯದನ್ನು ಮಾಡಲು ಯಾವಾಗಲೂ ಸಿದ್ಧವಾಗಿರುತ್ತದೆ. ಈ ಜ್ಞಾನವು ಯಾವಾಗಲೂ ನ್ಯಾಯವಾದದ್ದು ಮತ್ತು ಯಥಾರ್ಥವಾದದ್ದು.