Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:3 - ಪರಿಶುದ್ದ ಬೈಬಲ್‌

3 ಮನುಷ್ಯರು ತಮ್ಮ ಕ್ಷಣಿಕ ಜೀವಮಾನದಲ್ಲಿ ಮಾಡತಕ್ಕ ಒಳ್ಳೆಯದನ್ನು ತಿಳಿದುಕೊಳ್ಳಬೇಕೆಂದು ನನ್ನ ಮನಸ್ಸನ್ನು ಜ್ಞಾನದಿಂದ ತುಂಬಿಸಿದೆ; ದೇಹವನ್ನು ದ್ರಾಕ್ಷಾರಸದಿಂದ ತುಂಬಿಸಿದೆ; ಮೂಢತನವನ್ನು ಅವಲಂಭಿಸಿಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಕಾಶದ ಕೆಳಗೆ ಮನುಷ್ಯರ ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಒಳ್ಳೆಯದೆಂದು ನಾನು ತಿಳಿದುಕೊಳ್ಳುವುದಕ್ಕಾಗಿ, ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಸಂತೋಷದಲ್ಲಿ ಇಡುವುದಕ್ಕೂ, ಬುದ್ಧಿಹೀನತೆಯನ್ನು ಅವಲಂಬಿಸುವುದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಕಾಶದ ಕೆಳಗೆ ನರಜನ್ಮದವರು ಅಲ್ಪಾಯುಷ್ಯದಲ್ಲಿ ಏನು ಮಾಡುವದು ಯುಕ್ತವೆಂದು ನಾನು ತಿಳಿದುಕೊಳ್ಳುವದಕ್ಕೋಸ್ಕರ ನನ್ನ ಮನಸ್ಸು ಜ್ಞಾನದಿಂದಿರುವಾಗಲೇ ದೇಹವನ್ನು ದ್ರಾಕ್ಷಾರಸದಿಂದ ಉತ್ತೇಜನಮಾಡುವದಕ್ಕೂ ಬುದ್ಧಿಹೀನತೆಯನ್ನು ಅವಲಂಬಿಸುವದಕ್ಕೂ ಮನಸ್ಸಿನಲ್ಲಿ ವಿಚಾರಮಾಡಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:3
22 ತಿಳಿವುಗಳ ಹೋಲಿಕೆ  

ದ್ರಾಕ್ಷಾರಸವು ಪರಿಹಾಸ್ಯಕ್ಕೂ ಮದ್ಯವು ಕೂಗಾಟಕ್ಕೂ ನಡೆಸುತ್ತವೆ. ಅಮಲೇರಿಸಿಕೊಳ್ಳುವುದು ಮೂರ್ಖತನ.


ಜ್ಞಾನವನ್ನಲ್ಲದೆ ಮೂಢತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಿಕೊಳ್ಳಲು ನಿರ್ಧರಿಸಿದೆನು. ಆದರೆ ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ಕಲಿತುಕೊಂಡೆನು.


ಮದ್ಯಪಾನಮಾಡಿ ಮತ್ತರಾಗಬೇಡಿ, ಅದು ಪಾಪಕೃತ್ಯಗಳಿಗೆ ನಡೆಸುತ್ತದೆ, ಆದರೆ ಯಾವಾಗಲೂ ಪವಿತ್ರಾತ್ಮಭರಿತರಾಗಿರಿ.


ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.


ಮನುಷ್ಯನ ಅಲ್ಪಕಾಲದ ಜೀವನದಲ್ಲಿ ಅವನಿಗೆ ಯಾವುದು ಉತ್ತಮವೆಂದು ಯಾರಿಗೆ ಗೊತ್ತು? ಅವನ ಜೀವನವು ನೆರಳಿನಂತೆ ಕಳೆದುಹೋಗುವುದು. ಮುಂದೆ ಏನಾಗುವುದೆಂದು ಯಾರೂ ಅವನಿಗೆ ಹೇಳಲಾರರು.


“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


ನಿಜವಾದ ಜ್ಞಾನವನ್ನು ಕಂಡುಕೊಳ್ಳಲು ನಾನು ವ್ಯಾಸಂಗ ಮಾಡಿದೆ ಮತ್ತು ತುಂಬ ಕಷ್ಟಪಟ್ಟು ಪ್ರಯತ್ನಿಸಿದೆ. ಪ್ರತಿಯೊಂದಕ್ಕೂ ಕಾರಣವನ್ನು ಕಂಡುಕೊಳ್ಳಲು ನಾನು ಪ್ರಯತ್ನಿಸಿದೆ. ನಾನು ಕಲಿತಿದ್ದೇನು? ಕೆಡುಕನಾಗಿರುವುದು ಮೂಢತನ ಮತ್ತು ಮೂಢನಂತೆ ವರ್ತಿಸುವುದು ಹುಚ್ಚುತನ ಎಂಬುದನ್ನು ನಾನು ಕಲಿತುಕೊಂಡೆ.


ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ.


ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.


ಸತ್ತ ಮನುಷ್ಯನು ಮತ್ತೆ ಬದುಕುವನೇ? ಬದುಕುವುದಾಗಿದ್ದರೆ, ನನಗೆ ಬಿಡುಗಡೆಯಾಗುವ ತನಕ ನನ್ನ ಎಲ್ಲಾ ಕಷ್ಟದ ದಿನಗಳಲ್ಲಿಯೂ ಕಾದುಕೊಂಡಿರುವೆ.


ಅಬೀಗೈಲಳು ನಾಬಾಲನ ಬಳಿಗೆ ಹಿಂದಿರುಗಿ ಹೋದಳು. ನಾಬಾಲನು ಮನೆಯಲ್ಲಿಯೇ ಇದ್ದನು. ನಾಬಾಲನು ರಾಜನಂತೆ ತಿನ್ನುತ್ತಾ ಕುಡಿದು ಮತ್ತನಾಗಿದ್ದನು. ಆದ್ದರಿಂದ ಅಬೀಗೈಲಳು ಮಾರನೆಯ ದಿನದ ಹೊತ್ತಾರೆಯವರೆಗೆ ನಾಬಾಲನಿಗೆ ಏನನ್ನೂ ಹೇಳಲಿಲ್ಲ.


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


“ಆದರೆ ದ್ರಾಕ್ಷಾಲತೆಯು, ‘ನನ್ನ ರಸವು ಎಲ್ಲ ಜನರಿಗೂ ಮತ್ತು ರಾಜರುಗಳಿಗೂ ಸಂತೋಷವನ್ನು ಉಂಟುಮಾಡುತ್ತದೆ. ಕೇವಲ ಬೇರೆ ಮರಗಳ ಮೇಲೆ ಅಧಿಕಾರ ನಡೆಸುವುದಕ್ಕಾಗಿ ನಾನು ನನ್ನ ರಸ ಕೊಡುವುದನ್ನು ನಿಲ್ಲಿಸಬೇಕೇ?’ ಎಂದು ಕೇಳಿತು.


ನಮ್ಮನ್ನು ಸಂತೋಷಪಡಿಸುವ ದ್ರಾಕ್ಷಾರಸವನ್ನೂ ನಮ್ಮ ಚರ್ಮವನ್ನು ಮೃದುಗೊಳಿಸುವ ಎಣ್ಣೆಯನ್ನೂ ನಮ್ಮನ್ನು ಬಲಗೊಳಿಸುವ ಆಹಾರವನ್ನೂ ನಮಗೆ ದೇವರು ಕೊಡುತ್ತಾನೆ.


ನಾನು ಕಂಡುಕೊಂಡದ್ದೇನೆಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.


ಆದ್ದರಿಂದ ಜೀವನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವುದೇ ಉತ್ತಮವೆಂದು ನಿರ್ಧರಿಸಿದೆನು. ಯಾಕೆಂದರೆ ದೇವರು ಮನುಷ್ಯನಿಗೆ ಈ ಲೋಕದಲ್ಲಿ ಅನುಗ್ರಹಿಸಿರುವ ಪ್ರಯಾಸಕರ ಕೆಲಸಗಳಲ್ಲಿಯೂ ಮನುಷ್ಯನು ಸಂತೋಷವಾಗಿರಬೇಕು.


ಊಟವು ಸಂತೋಷಗೊಳಿಸುವುದು; ದ್ರಾಕ್ಷಾರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು