ಪ್ರಸಂಗಿ 2:4 - ಪರಿಶುದ್ದ ಬೈಬಲ್4 ದೊಡ್ಡಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಿತೋಟಗಳನ್ನು ಮಾಡಿಸಿದೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಮಹತ್ಕಾರ್ಯಗಳನ್ನು ಎಸಗಿದೆ; ಮನೆಮಾರುಗಳನ್ನು ಕಟ್ಟಿಸಿಕೊಂಡೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಮತ್ತು ವಿಶೇಷ ಕಾರ್ಯಗಳನ್ನು ನಡಿಸಿದೆನು; ಮನೆಗಳನ್ನು ಕಟ್ಟಿಸಿಕೊಂಡೆನು, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು. ಅಧ್ಯಾಯವನ್ನು ನೋಡಿ |
ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.
ಆಸನು ಈ ಸಂದೇಶವನ್ನು ಕಳುಹಿಸಿದನು: “ನನ್ನ ತಂದೆಯೂ ನಿನ್ನ ತಂದೆಯೂ ಶಾಂತಿಒಪ್ಪಂದವನ್ನು ಮಾಡಿಕೊಂಡಿದ್ದರು. ಈಗ ನಾನು ನಿನ್ನೊಂದಿಗೆ ಶಾಂತಿ ಒಪ್ಪಂದವನ್ನು ಮಾಡಿಕೊಳ್ಳಲು ಅಪೇಕ್ಷಿಸಿದ್ದೇನೆ. ನಾನು ನಿನಗೆ ಬೆಳ್ಳಿಬಂಗಾರಗಳನ್ನು ಕಾಣಿಕೆಯಾಗಿ ಕಳುಹಿಸುತ್ತಿದ್ದೇನೆ. ಇಸ್ರೇಲಿನ ರಾಜನಾದ ಬಾಷನೊಂದಿಗೆ ನಿನಗಿರುವ ಒಪ್ಪಂದವನ್ನು ಮುರಿದುಬಿಡು. ಆಗ ಬಾಷನು ನನ್ನ ದೇಶವನ್ನು ಬಿಟ್ಟುಹೋಗುತ್ತಾನೆ.”