Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:8 - ಪರಿಶುದ್ದ ಬೈಬಲ್‌

8 ಇದಲ್ಲದೆ ಬೆಳ್ಳಿಬಂಗಾರಗಳನ್ನು ನನಗೋಸ್ಕರ ಸಂಗ್ರಹಿಸಿದೆ; ರಾಜರುಗಳಿಂದಲೂ ಅವರ ದೇಶಗಳಿಂದಲೂ ಭಂಡಾರಗಳನ್ನು ತೆಗೆದುಕೊಂಡೆ. ನನಗೋಸ್ಕರ ಹಾಡಲು ಗಾಯಕಗಾಯಕಿಯರಿದ್ದರು. ನನ್ನನ್ನು ಸಂತೋಷಪಡಿಸಲು ಅನೇಕ ಉಪಪತ್ನಿಯರಿದ್ದರು. ಮನುಷ್ಯನು ಬಯಸಬಹುದಾದ ಪ್ರತಿಯೊಂದನ್ನೂ ನಾನು ಪಡೆದಿದ್ದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ಬೆಳ್ಳಿಬಂಗಾರಗಳನ್ನೂ ಅರಸರ ಮತ್ತು ಪ್ರಾಂತ್ಯಗಳ ಕಪ್ಪವನ್ನೂ ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗ್ಯರಾದ ಅನೇಕ ಸ್ತ್ರೀಯರನ್ನು ಸಂಪಾದಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಬೆಳ್ಳಿಬಂಗಾರಗಳನ್ನೂ ಅರಸರ ಹಾಗೂ ಸಾಮಂತರ ಕಪ್ಪಕಾಣಿಕೆಗಳನ್ನೂ ಶೇಖರಿಸಿಕೊಂಡೆ. ಗಾಯಕಗಾಯಕಿಯರೂ ಭೋಗವಿಲಾಸಕ್ಕಾಗಿ ಹಲವಾರು ಉಪಪತ್ನಿಯರೂ ನನಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮತ್ತು ಬೆಳ್ಳಿ ಬಂಗಾರಗಳನ್ನೂ ಅರಸರ ನಜರನ್ನೂ ದಿಗ್ದೇಶಗಳಿಂದ ಕಪ್ಪವನ್ನೂ ಸಂಗ್ರಹಿಸಿಕೊಂಡೆನು; ಗಾಯಕಗಾಯಕಿಯರನ್ನೂ ಮನುಷ್ಯರಿಗೆ ಭೋಗ್ಯರಾದ ಅನೇಕ ಉಪಪತ್ನಿಯರನ್ನೂ ಸಂಪಾದಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನಾನು ಬೆಳ್ಳಿಬಂಗಾರಗಳನ್ನು, ಅರಸರ ಮತ್ತು ಪ್ರಾಂತಗಳ ವಿಶೇಷ ಸಂಪತ್ತನ್ನು ಸಂಗ್ರಹಿಸಿಕೊಂಡೆನು. ಗಾಯಕ, ಗಾಯಕಿಯರನ್ನು ಮತ್ತು ಮನುಷ್ಯರಿಗೆ ಭೋಗವಿಲಾಸಕ್ಕಾಗಿ ಅನೇಕ ಉಪಪತ್ನಿಯರನ್ನು ಸಂಪಾದಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:8
21 ತಿಳಿವುಗಳ ಹೋಲಿಕೆ  

ನಂತರ ಶೆಬದ ರಾಣಿಯು ರಾಜನಿಗೆ ನಾಲ್ಕು ಸಾವಿರದ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಕೊಟ್ಟಳು. ಅವಳು ಅವನಿಗೆ ಅನೇಕ ಸಾಂಬಾರ ಪದಾರ್ಥಗಳನ್ನು ಮತ್ತು ರತ್ನಗಳನ್ನು ಕೊಟ್ಟಳು. ಹಿಂದೆಂದೂ ಯಾರೂ ಇಸ್ರೇಲಿಗೆ ತೆಗೆದುಕೊಂಡು ಬಂದಿಲ್ಲದಷ್ಟು ಸಾಂಬಾರ ಪದಾರ್ಥಗಳನ್ನು ಶೆಬದ ರಾಣಿಯು ಸೊಲೊಮೋನನಿಗೆ ಕೊಟ್ಟಳು.


ಸೊಲೊಮೋನನ ಹಡಗುಗಳು ಓಫೀರಿಗೆ ಹೋದವು. ಆ ಹಡಗುಗಳು ರಾಜನಾದ ಸೊಲೊಮೋನನಿಗೆ ಹದಿನಾಲ್ಕು ಸಾವಿರದ ಇನ್ನೂರ ಎಂಭತ್ತು ಕಿಲೋಗ್ರಾಂ ಬಂಗಾರವನ್ನು ಓಫೀರಿನಿಂದ ತೆಗೆದುಕೊಂಡು ಬಂದವು.


ನನಗೀಗ ಎಂಭತ್ತು ವರ್ಷ. ಒಳಿತು ಕೆಡುಕುಗಳಿಗಿರುವ ವ್ಯತ್ಯಾಸ ಈಗ ನನಗೆ ತಿಳಿಯುವುದಿಲ್ಲ. ನಾನು ತಿನ್ನುವ ಇಲ್ಲವೆ ಕುಡಿಯುವ ವಸ್ತುಗಳ ರುಚಿಯೂ ನನಗೆ ಗೊತ್ತಾಗುವುದಿಲ್ಲ. ಹಾಡುತ್ತಿರುವ ಗಂಡಸರ ಮತ್ತು ಹೆಂಗಸರ ಯಾವುದೇ ಧ್ವನಿಯೂ ನನಗೆ ಕೇಳಿಸುವುದಿಲ್ಲ. ನನ್ನ ಒಡೆಯನಾದ ರಾಜನಿಗೆ ನಾನೇಕೆ ಭಾರವಾಗಬೇಕು?


ರಾಜನಾದ ಸೊಲೊಮೋನನು ಪ್ರತಿವರ್ಷವೂ ಇಪ್ಪತ್ತೆರಡು ಸಾವಿರದ ಆರುನೂರ ನಲವತ್ನಾಲ್ಕು ಕಿಲೋಗ್ರಾಂ ಬಂಗಾರವನ್ನು ಪಡೆಯುತ್ತಿದ್ದನು.


ನಿಮ್ಮ ತಂತಿವಾದ್ಯಗಳಿಂದ ಹಾಡನ್ನು ಬಾರಿಸುವಿರಿ; ದಾವೀದನಂತೆ ನಿಮ್ಮ ವಾದ್ಯಗಳನ್ನು ಅಭ್ಯಾಸಿಸುವಿರಿ.


ಈಗಲಾದರೋ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಅಡ್ಡಬಿದ್ದು ಚಿನ್ನದ ವಿಗ್ರಹವನ್ನು ಪೂಜಿಸಬೇಕು. ನಾನು ಮಾಡಿಸಿದ ಈ ವಿಗ್ರಹವನ್ನು ಪೂಜಿಸಲು ನೀವು ಸಿದ್ಧರಾಗಿದ್ದರೆ ಸರಿ. ನೀವು ಅದನ್ನು ಪೂಜಿಸದಿದ್ದರೆ ತಕ್ಷಣ ನಿಮ್ಮನ್ನು ಉರಿಯುವ ಕೊಂಡದಲ್ಲಿ ಎಸೆಯಲಾಗುವುದು. ಆಗ ನನ್ನ ಕೈಯಿಂದ ನಿಮ್ಮನ್ನು ಬಿಡಿಸುವುದು ಯಾವ ದೇವರಿಗೂ ಸಾಧ್ಯವಾಗಲಾರದು” ಎಂದು ಹೇಳಿದನು.


ಆದ್ದರಿಂದ ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ಅವರು ಅಡ್ಡಬಿದ್ದು ಬಂಗಾರದ ವಿಗ್ರಹವನ್ನು ಪೂಜಿಸಿದರು. ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ವಿಗ್ರಹವನ್ನು ಎಲ್ಲ ಜನಾಂಗಗಳ, ಭಾಷೆಗಳ ಜನರು ಪೂಜಿಸಿದರು.


ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೇ ನೀವು ಅಡ್ಡಬೀಳಬೇಕು. ಇದು ರಾಜಾಜ್ಞೆ. ತುತ್ತೂರಿ, ಕೊಳಲು, ಕಿನ್ನರಿ, ತಂಬೂರಿ, ವೀಣೆ, ವಾಲಗ ಮುಂತಾದ ಸಕಲ ವಾದ್ಯಗಳ ಧ್ವನಿಯನ್ನು ಕೇಳಿದ ಕೂಡಲೆ ನೀವು ಬಂಗಾರದ ವಿಗ್ರಹವನ್ನು ಪೂಜಿಸಬೇಕು. ಅರಸನಾದ ನೆಬೂಕದ್ನೆಚ್ಚರನು ಈ ವಿಗ್ರಹವನ್ನು ನಿಲ್ಲಿಸಿದ್ದಾನೆ.


ಸುಗಂಧದ ಮರಗಳಿಂದ ಸೊಲೊಮೋನನು ದೇವಾಲಯದ ಮತ್ತು ಅರಮನೆಯ ಮೆಟ್ಟಲುಗಳನ್ನು ಮಾಡಿಸಿದನು; ಅಲ್ಲದೆ ಗಾಯಕರಿಗಾಗಿ ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ಅದರಿಂದ ತಯಾರಿಸಿದನು. ಯೆಹೂದ ಪ್ರಾಂತ್ಯದಲ್ಲಿ ಯಾರೂ ಅಂತಹ ಸುಂದರವಾದ ಸುಗಂಧವಸ್ತುಗಳನ್ನು ನೋಡಿರಲಿಲ್ಲ.


ಹೇಮಾನನು ತನ್ನ ಮಕ್ಕಳೆಲ್ಲರನ್ನು ದೇವಾಲಯದಲ್ಲಿ ಹಾಡುವದಕ್ಕಾಗಿ ಬಳಸಿಕೊಂಡನು. ಅವರು ಹಾರ್ಪ್ ಮತ್ತು ಲೈರ್ ವಾದ್ಯಗಳನ್ನೂ ತಾಳಗಳನ್ನೂ ಬಾರಿಸಿದರು. ಹೀಗೆ ದೇವಾಲಯದಲ್ಲಿ ಸೇವೆಮಾಡುವುದಕ್ಕಾಗಿ ಅರಸನಾದ ದಾವೀದನು ಅವರನ್ನು ಆರಿಸಿಕೊಂಡನು.


ದಾವೀದನೂ ಸೇನಾಪತಿಗಳೂ ಆಸಾಫನ ಸಂತತಿಯವರನ್ನು ವಿಶೇಷವಾದ ಸೇವೆಗೆ ಪ್ರತ್ಯೇಕಿಸಿದರು. ಆಸಾಫನ ಗಂಡುಮಕ್ಕಳು ಹೇಮಾನ್ ಮತ್ತು ಯೆದುತೂನ್. ಹಾರ್ಪ್ ವಾದ್ಯಗಳನ್ನು, ಲೈರ್ ವಾದ್ಯಗಳನ್ನು ಮತ್ತು ತಾಳಗಳನ್ನು ಬಾರಿಸುತ್ತಾ ದೇವರ ಸಂದೇಶವನ್ನು ಪ್ರವಾದಿಸುವುದೇ ಇವರ ಸೇವೆಯಾಗಿತ್ತು. ಈ ರೀತಿಯಾಗಿ ದೇವರ ಸೇವೆಯನ್ನು ಮಾಡಿದವರು ಯಾರೆಂದರೆ:


ಆದ್ದರಿಂದ ರಾಜನಾದ ರೆಹಬ್ಬಾಮನು ಅವುಗಳ ಸ್ಥಾನದಲ್ಲಿಡಲು ಅನೇಕ ಗುರಾಣಿಗಳನ್ನು ಮಾಡಿಸಿದನು. ಆದರೆ ಈ ಗುರಾಣಿಗಳನ್ನು ಮಾಡಿಸಿದ್ದು ಹಿತ್ತಾಳೆಯಲ್ಲೇ ಹೊರತು ಬಂಗಾರದಿಂದಲ್ಲ. ಅರಮನೆಯ ಬಾಗಿಲಿನ ಕಾವಲುಗಾರರಿಗೆ ಈ ಗುರಾಣಿಗಳನ್ನು ಅವನು ಕೊಟ್ಟನು.


ಸೊಲೊಮೋನನ ಬಟ್ಟಲುಗಳು ಮತ್ತು ಲೋಟಗಳು ಬಂಗಾರದಿಂದ ತಯಾರಿಸಲಾಗಿದ್ದವು. “ಲೆಬನೋನಿನ ಅರಣ್ಯ” ಎಂದು ಕರೆಯುವ ಕಟ್ಟಡದಲ್ಲಿದ್ದ ಎಲ್ಲಾ ಆಯುಧಗಳನ್ನು ಅಪ್ಪಟ ಚಿನ್ನದಿಂದ ಮಾಡಿದ್ದರು. ಅರಮನೆಯ ಯಾವ ವಸ್ತುವನ್ನೂ ಬೆಳ್ಳಿಯಿಂದ ಮಾಡಿರಲಿಲ್ಲ. ಜನರು ಬೆಳ್ಳಿಯನ್ನು ಅಮೂಲ್ಯವೆಂದು ಯೋಚಿಸದಷ್ಟು ಬಂಗಾರವು ಸೊಲೊಮೋನನ ಕಾಲದಲ್ಲಿತ್ತು!


ಹೀರಾಮನು ರಾಜನಾದ ಸೊಲೊಮೋನನಿಗೆ ಆಲಯದ ನಿರ್ಮಾಣಕ್ಕೆ ಉಪಯೋಗಿಸಲು ಒಂಭತ್ತು ಸಾವಿರ ಪೌಂಡು ಬಂಗಾರವನ್ನು ಕಳುಹಿಸಿದ್ದನು.


ಸೊಲೊಮೋನನಿಗೆ ಏಳುನೂರು ಮಂದಿ ಪತ್ನಿಯರಿದ್ದರು. (ಈ ಸ್ತ್ರೀಯರು ಅನ್ಯದೇಶಗಳ ನಾಯಕರ ಹೆಣ್ಣುಮಕ್ಕಳು) ಅವನಿಗೆ ಪತ್ನಿಯರಂತಿರುವ ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದೇವರಿಗೆ ವಿಮುಖನನ್ನಾಗಿ ಮಾಡಿದರು.


ವ್ಯರ್ಥವೇ ವ್ಯರ್ಥ, ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು