ಪ್ರಸಂಗಿ 3:1 - ಪರಿಶುದ್ದ ಬೈಬಲ್1 ಪ್ರತಿಯೊಂದಕ್ಕೂ ಸೂಕ್ತವಾದ ಸಮಯವಿದೆ. ಭೂಮಿಯ ಮೇಲೆ ನಡೆಯುವ ಪ್ರತಿಯೊಂದು ಕಾರ್ಯಕ್ಕೂ ಸೂಕ್ತ ಸಮಯವಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಪ್ರತಿಯೊಂದು ಕಾರ್ಯಕ್ಕೂ ನಿಗದಿಯಾದ ಸಮಯವಿದೆ, ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಪ್ರತಿಯೊಂದು ಕಾಲಕ್ಕೂ ನಿಗದಿಯಾದ ಕಾಲವಿದೆ. ಜಗತ್ತಿನಲ್ಲಿ ನಡೆಯುವ ಒಂದೊಂದು ಕೆಲಸಕ್ಕೂ ಸೂಕ್ತ ಸಮಯವಿದೆ: ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಪ್ರತಿಯೊಂದು ಕಾರ್ಯಕ್ಕೂ ಕಾಲವು ಕ್ಲುಪ್ತವಾಗಿದೆ; ಆಕಾಶದ ಕೆಳಗೆ ನಡೆಯುವ ಒಂದೊಂದು ಕೆಲಸಕ್ಕೂ ತಕ್ಕ ಸಮಯವುಂಟು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಪ್ರತಿಯೊಂದಕ್ಕೂ ಒಂದೊಂದು ಸಮಯವಿದೆ. ಆಕಾಶದ ಕೆಳಗೆ ಪ್ರತಿಯೊಂದು ಕಾರ್ಯಕ್ಕೂ ಒಂದು ಕಾಲವಿದೆ. ಅಧ್ಯಾಯವನ್ನು ನೋಡಿ |
ಬೆಳಿಗ್ಗೆ ಸೂರ್ಯೋದಯವನ್ನು ಗಮನಿಸುತ್ತೀರಿ. ಆಕಾಶವು ಕಪ್ಪಾಗಿದ್ದರೆ ಅಥವಾ ಕೆಂಪಾಗಿದ್ದರೆ, ಈ ದಿನ ಮಳೆ ಬರುತ್ತದೆ ಎಂದು ಹೇಳುತ್ತೀರಿ. ಇವುಗಳು ಹವಾಮಾನದ ಗುರುತುಗಳಾಗಿವೆ. ನೀವು ಈ ಗುರುತುಗಳನ್ನು ಕಂಡು ಅವುಗಳ ಅರ್ಥವನ್ನು ತಿಳಿದುಕೊಳ್ಳುತ್ತೀರಿ. ಅದೇ ರೀತಿಯಲ್ಲಿ ಈಗ ನೀವು ನೋಡುತ್ತಿರುವ ಇಂದಿನ ಸಂಗತಿಗಳು ಸಹ ಗುರುತುಗಳಾಗಿವೆ. ಆದರೆ ನಿಮಗೆ ಈ ಗುರುತುಗಳ ಅರ್ಥವು ಗೊತ್ತಿಲ್ಲ.