ಪ್ರಸಂಗಿ 3:12 - ಪರಿಶುದ್ದ ಬೈಬಲ್12 ಬದುಕಿರುವಷ್ಟು ಕಾಲ ಸಂತೋಷವಾಗಿದ್ದು ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯರಿಗೆ ಇಲ್ಲವೆಂದು ಕಲಿತುಕೊಂಡೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಮನುಷ್ಯರು ತಮ್ಮ ಇಡೀ ಜೀವಮಾನದಲ್ಲಿ ಸುಖಸಂತೋಷವನ್ನು ಅನುಭವಿಸುವುದಕ್ಕಿಂತ ಮೇಲಾದುದು ಅವರಿಗೆ ಯಾವುದೂ ಇಲ್ಲ ಎಂಬುದನ್ನು ನಾನು ಗ್ರಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು. ಅಧ್ಯಾಯವನ್ನು ನೋಡಿ |
ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.