ಪ್ರಸಂಗಿ 3:2 - ಪರಿಶುದ್ದ ಬೈಬಲ್2 ಹುಟ್ಟುವ ಸಮಯ, ಸಾಯುವ ಸಮಯ. ನೆಡುವ ಸಮಯ, ಸಸಿಗಳನ್ನು ಕೀಳುವ ಸಮಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಹುಟ್ಟುವ ಸಮಯ, ಸಾಯುವ ಸಮಯ ನೆಡುವ ಸಮಯ, ನೆಟ್ಟದ್ದನ್ನು ಕೀಳುವ ಸಮಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಹುಟ್ಟುವ ಸಮಯ, ಸಾಯುವ ಸಮಯ, ನೆಡುವ ಸಮಯ, ನೆಟ್ಟದ್ದನ್ನು ಕಿತ್ತುಹಾಕುವ ಸಮಯ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಹುಟ್ಟುವುದಕ್ಕೆ ಒಂದು ಸಮಯ, ಸಾಯುವುದಕ್ಕೆ ಒಂದು ಸಮಯ. ನೆಡುವುದಕ್ಕೆ ಒಂದು ಸಮಯ, ನೆಟ್ಟದ್ದನ್ನು ಕಿತ್ತು ಹಾಕುವುದಕ್ಕೆ ಒಂದು ಸಮಯ. ಅಧ್ಯಾಯವನ್ನು ನೋಡಿ |
ಆ ಸಮಯದಲ್ಲಿ ಹಿಜ್ಕೀಯನು ರೋಗಗ್ರಸ್ತನಾಗಿ ಸಾಯುವ ಸ್ಥಿತಿಯಲ್ಲಿದ್ದನು. ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನನ್ನು ನೋಡಲು ಹೋದನು. ಯೆಶಾಯನು ಅರಸನಿಗೆ, “ಯೆಹೋವನು ಈ ವಿಷಯಗಳನ್ನು ನಿನಗೆ ತಿಳಿಸಲು ಹೇಳಿದ್ದಾನೆ: ‘ನೀನು ಬೇಗನೇ ಸಾಯುವೆ. ಆದ್ದರಿಂದ ನೀನು ಸಾಯುವಾಗ ನಿನ್ನ ಕುಟುಂಬದವರು ಮಾಡಬೇಕಾದದ್ದನ್ನು ಅವರಿಗೆ ತಿಳಿಸು. ನಿನಗೆ ಗುಣವಾಗುವುದಿಲ್ಲ’” ಎಂದು ಹೇಳಿದನು.
ಯಜ್ಞವೇದಿಕೆಯ ವಿರುದ್ಧ ಮಾತನಾಡುವಂತೆ ಆ ದೇವಮನುಷ್ಯನಿಗೆ ಯೆಹೋವನು ಆಜ್ಞಾಪಿಸಿದನು. ಆಗ ಅವನು ಹೇಳಿದ್ದೇನೆಂದರೆ: “ಯಜ್ಞವೇದಿಕೆಯೇ, ಯೆಹೋವನು ನಿನಗೆ ಹೀಗೆನ್ನುತ್ತಾನೆ: ‘ದಾವೀದನ ವಂಶದಲ್ಲಿ ಯೋಷೀಯನೆಂಬ ಮಗನು ಹುಟ್ಟುವನು. ಈಗ ಈ ಪೂಜಾಸ್ಥಳಗಳಲ್ಲಿ ಧೂಪಸುಡುತ್ತಿರುವ ಈ ಯಾಜಕರನ್ನು ಅವನು ಹಿಡಿದು ಅವರನ್ನು ನಿನ್ನ ಮೇಲೆಯೇ ಕೊಲ್ಲುವನು; ಈಗ ನಿನ್ನ ಮೇಲೆ ಧೂಪಸುಡುತ್ತಿರುವ ಯಾಜಕರನ್ನು ಅವನು ಹಿಡಿದು ಅವರ ಮೂಳೆಗಳನ್ನು ನಿನ್ನ ಮೇಲೆ ಸುಡುವನು.’”
ಇಸ್ರೇಲನು ಸಾಯುವ ಕಾಲ ಸಮೀಪಿಸಿತು. ಅವನಿಗೆ ತಾನು ಸಾಯುತ್ತೇನೆಂದು ತಿಳಿದು ಬಂದಾಗ, ತನ್ನ ಮಗನಾದ ಯೋಸೇಫನನ್ನು ಕರೆಯಿಸಿ, “ನೀನು ನನ್ನನ್ನು ಪ್ರೀತಿಸುವುದಾದರೆ, ನಿನ್ನ ಕೈಯನ್ನು ನನ್ನ ತೊಡೆಯ ಕೆಳಗಿಟ್ಟು ಪ್ರಮಾಣಮಾಡು. ನಾನು ಹೇಳಿದ್ದನ್ನು ನಡೆಸುವುದಾಗಿಯೂ ನನಗೆ ನಂಬಿಗಸ್ತನಾಗಿರುವುದಾಗಿಯೂ ಪ್ರಮಾಣ ಮಾಡು. ನಾನು ಸತ್ತಾಗ, ನನ್ನನ್ನು ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ.