ಪ್ರಸಂಗಿ 3:3 - ಪರಿಶುದ್ದ ಬೈಬಲ್3 ಕೊಲ್ಲುವ ಸಮಯ, ವಾಸಿಮಾಡುವ ಸಮಯ. ನಾಶಮಾಡುವ ಸಮಯ, ಕಟ್ಟುವ ಸಮಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಕೊಲ್ಲುವ ಸಮಯ, ಸ್ವಸ್ಥಮಾಡುವ ಸಮಯ ಕೆಡುವಿಬಿಡುವ ಸಮಯ, ಕಟ್ಟುವ ಸಮಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಕೊಲ್ಲುವ ಸಮಯ, ಗುಣಪಡಿಸುವ ಸಮಯ ಕೆಡವಿಬಿಡುವ ಸಮಯ, ಕಟ್ಟಿ ಎಬ್ಬಿಸುವ ಸಮಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಕೊಲ್ಲುವ ಸಮಯ, ಸ್ವಸ್ಥ ಮಾಡುವ ಸಮಯ, ಕೆಡವಿಬಿಡುವ ಸಮಯ, ಕಟ್ಟುವ ಸಮಯ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಕೊಲ್ಲುವುದಕ್ಕೆ ಒಂದು ಸಮಯ, ಸ್ವಸ್ಥ ಮಾಡುವುದಕ್ಕೆ ಒಂದು ಸಮಯ, ಕೆಡವಿಬಿಡುವುದಕ್ಕೆ ಒಂದು ಸಮಯ, ಕಟ್ಟುವುದಕ್ಕೆ ಒಂದು ಸಮಯ. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ, ಇಸ್ರೇಲ್ ಮತ್ತು ಯೆಹೂದಗಳ ಮೇಲೆ ನಾನು ಗಮನವಿಟ್ಟಿದ್ದೆನು. ಆದರೆ ನಾನು ಅವರನ್ನು ತೆಗೆದುಹಾಕುವ ಸಮಯಕ್ಕಾಗಿ ಕಾದುಕೊಂಡಿದ್ದೆ. ನಾನು ಅವರನ್ನು ಕೆಡವಿದೆ; ಅವರನ್ನು ಹಾಳುಮಾಡಿದೆ. ಅವರಿಗೆ ಅನೇಕ ಕಷ್ಟಗಳನ್ನು ಕೊಟ್ಟೆ. ಆದರೆ ಈಗ ಅವರನ್ನು ಅಭಿವೃದ್ಧಿಪಡಿಸುವದಕ್ಕಾಗಿ ಅವರನ್ನು ಬಲಶಾಲಿಗಳನ್ನಾಗಿ ಮಾಡಲು ಅವರ ಕಡೆಗೆ ಗಮನಹರಿಸುತ್ತೇನೆ” ಇದು ಯೆಹೋವನ ನುಡಿ.
ಯೆಹೋವನು ತನ್ನ ಸೇವಕರನ್ನು ಜನರಿಗೆ ಸಂದೇಶ ತಿಳಿಸುವದಕ್ಕಾಗಿ ಉಪಯೋಗಿಸಿಕೊಳ್ಳುತ್ತಿದ್ದಾನೆ. ಆತನ ಸಂದೇಶಗಳು ಸತ್ಯವಾದವುಗಳಾಗಿವೆ. ಜನರು ಮಾಡಬೇಕಾದ ಕಾರ್ಯಗಳ ಬಗ್ಗೆ ಯೆಹೋವನು ಸಂದೇಶಕರನ್ನು ಕಳುಹಿಸುತ್ತಾನೆ. ಅವರ ಸಲಹೆಯು ಒಳ್ಳೆಯದೆಂದು ಯೆಹೋವನು ತೋರಿಸಿಕೊಡುತ್ತಾನೆ. ಯೆಹೋವನು ಜೆರುಸಲೇಮಿಗೆ, “ಜನರು ನಿನ್ನಲ್ಲಿ ಮತ್ತೆ ವಾಸಮಾಡುವರು” ಎಂತಲೂ ಯೆಹೂದದ ನಗರಗಳಿಗೆ, “ನೀವು ತಿರುಗಿ ಕಟ್ಟಲ್ಪಡುವಿರಿ” ಎಂತಲೂ ಕೆಡವಲ್ಪಟ್ಟ ನಗರಗಳಿಗೆ, “ನಾನು ತಿರುಗಿ ನಿಮ್ಮನ್ನು ನಗರಗಳನ್ನಾಗಿ ಮಾಡುತ್ತೇನೆ” ಎಂತಲೂ ಹೇಳುತ್ತಾನೆ.