ಪ್ರಸಂಗಿ 3:6 - ಪರಿಶುದ್ದ ಬೈಬಲ್6 ಹುಡುಕುವ ಸಮಯ, ಹುಡುಕದಿರುವ ಸಮಯ. ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ, ವಸ್ತುಗಳನ್ನು ಬಿಸಾಡುವ ಸಮಯ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಂಪಾದಿಸುವ ಸಮಯ, ಕಳೆದುಕೊಳ್ಳುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಗಳಿಸುವ ಸಮಯ, ಕಳೆಯುವ ಸಮಯ, ಕಾಪಾಡುವ ಸಮಯ, ಬಿಸಾಡುವ ಸಮಯ, ಹರಿಯುವ ಸಮಯ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಗಳಿಸುವುದಕ್ಕೆ ಒಂದು ಸಮಯ, ಕಳೆದುಕೊಳ್ಳುವುದಕ್ಕೆ ಒಂದು ಸಮಯ. ಕಾಪಾಡುವುದಕ್ಕೆ ಒಂದು ಸಮಯ, ಬಿಸಾಡುವುದಕ್ಕೆ ಒಂದು ಸಮಯ. ಅಧ್ಯಾಯವನ್ನು ನೋಡಿ |
ಹಜಾಯೇಲನು ತನ್ನೊಡನೆ ಕಾಣಿಕೆಯನ್ನು ತೆಗೆದುಕೊಂಡು ಎಲೀಷನನ್ನು ಭೇಟಿಮಾಡಲು ಹೋದನು. ಅವನು ದಮಸ್ಕದಿಂದ ಎಲ್ಲಾ ವಿಧವಾದ ಉತ್ತಮ ವಸ್ತುಗಳನ್ನು ನಲವತ್ತು ಒಂಟೆಗಳ ಮೇಲೆ ಹೇರಿಸಿಕೊಂಡು ಹೋದನು. ಹಜಾಯೇಲನು ಎಲೀಷನ ಬಳಿಗೆ ಹೋಗಿ, “ನಿನ್ನ ಹಿಂಬಾಲಕನೂ ಅರಾಮ್ಯರ ರಾಜನೂ ಆದ ಬೆನ್ಹದದನು ನನ್ನನ್ನು ನಿನ್ನ ಬಳಿಗೆ ಕಳುಹಿಸಿದನು. ತನ್ನ ಕಾಯಿಲೆಯು ವಾಸಿಯಾಗುತ್ತದೆಯೇ ಇಲ್ಲವೇ ಎಂಬುದನ್ನು ಅವನು ನಿನ್ನಿಂದ ತಿಳಿದುಕೊಳ್ಳಬೇಕೆಂದಿದ್ದಾನೆ” ಎಂದು ಹೇಳಿದನು.