Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:7 - ಪರಿಶುದ್ದ ಬೈಬಲ್‌

7 ಬಟ್ಟೆಯನ್ನು ಹರಿಯುವ ಸಮಯ, ಬಟ್ಟೆಯನ್ನು ಹೊಲಿಯುವ ಸಮಯ. ಮೌನವಾಗಿರುವ ಸಮಯ, ಮಾತಾಡುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಹರಿಯುವ ಸಮಯ, ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತನಾಡುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹರಿಯುವ ಸಮಯ, ಹೊಲಿಯುವ ಸಮಯ ಸುಮ್ಮನಿರುವ ಸಮಯ, ಮಾತಾಡುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಹೊಲಿಯುವ ಸಮಯ, ಸುಮ್ಮನಿರುವ ಸಮಯ, ಮಾತಾಡುವ ಸಮಯ, ಪ್ರೀತಿಸುವ ಸಮಯ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಹರಿಯುವುದಕ್ಕೆ ಒಂದು ಸಮಯ, ಹೊಲಿಯುವುದಕ್ಕೆ ಒಂದು ಸಮಯ. ಸುಮ್ಮನೆ ಇರುವುದಕ್ಕೆ ಒಂದು ಸಮಯ, ಮಾತಾಡುವುದಕ್ಕೆ ಒಂದು ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:7
32 ತಿಳಿವುಗಳ ಹೋಲಿಕೆ  

ನಿನ್ನ ನೆರೆಯವನ ಮೇಲೆ ನಂಬಿಕೆ ಇಡಬೇಡ! ನಿನ್ನ ಸ್ನೇಹಿತನ ಮೇಲೆ ಭರವಸವಿಡಬೇಡ! ನಿನ್ನ ಹೆಂಡತಿಯೊಂದಿಗೂ ನಿನ್ನ ಮನಸ್ಸಿನಲ್ಲಿರುವ ವಿಷಯವನ್ನು ತಿಳಿಸಬೇಡ.


ಆ ಸಮಯದಲ್ಲಿ ಜ್ಞಾನಿಗಳಾದ ಬೋಧಕರು ಸುಮ್ಮನಿರುವರು. ಯಾಕೆಂದರೆ ಅದು ಕೆಟ್ಟ ಸಮಯವಾಗಿರುತ್ತದೆ.


ನಾವಂತೂ ಸುಮ್ಮನಿರಲಾರೆವು. ನಾವು ಕಂಡ ಮತ್ತು ಕೇಳಿದ ಸಂಗತಿಗಳ ಬಗ್ಗೆ ಜನರಿಗೆ ಹೇಳಲೇಬೇಕು” ಎಂದು ಉತ್ತರಕೊಟ್ಟರು.


ಯೆಹೋವನು ಈ ಸಂಕಟದ ನೊಗವನ್ನು ಅವನ ಮೇಲೆ ಹಾಕುವಾಗ ಅವನು ಮೌನವಾಗಿ ಕುಳಿತುಕೊಂಡಿರಬೇಕು.


ನಿಮ್ಮ ಬಟ್ಟೆಗಳನ್ನಲ್ಲ, ಹೃದಯವನ್ನು ಹರಿಯಿರಿ.” ನಿಮ್ಮ ದೇವರಾದ ಯೆಹೋವನ ಬಳಿಗೆ ಬನ್ನಿರಿ. ಆತನು ದಯಾಪರನೂ ಕನಿಕರವುಳ್ಳವನೂ ಆಗಿದ್ದಾನೆ. ಆತನು ಬೇಗನೆ ಕೋಪಿಸುವುದಿಲ್ಲ. ಆತನಲ್ಲಿ ಆಳವಾದ ಪ್ರೀತಿ ಇದೆ. ಆತನು ಯೋಚಿಸಿದ ಶಿಕ್ಷೆಯನ್ನು ಒಂದುವೇಳೆ ನಿಮಗೆ ಕೊಡದೆ ತನ್ನ ಮನಸ್ಸನ್ನು ಬದಲಾಯಿಸಬಹುದು.


ಯಾಕೆಂದರೆ ನಾನು, ನನ್ನ ಜನರೂ ಕೊಲ್ಲಲ್ಪಡಲು, ನಾಶವಾಗಲು, ಸಂಪೂರ್ಣವಾಗಿ ನಿರ್ಮೂಲವಾಗಲು ಮಾರಲ್ಪಟ್ಟಿರುತ್ತೇವೆ. ನಾವು ಬರೇ ಗುಲಾಮರಾಗಿ ಮಾರಲ್ಪಟ್ಟಿದರೆ ನಾನು ಸುಮ್ಮನಿರುತ್ತಿದ್ದೆ. ಯಾಕೆಂದರೆ ಅದು ರಾಜನನ್ನು ತೊಂದರೆಪಡಿಸುವಂಥ ದೊಡ್ಡ ವಿಷಯವಲ್ಲ” ಎಂದು ಉತ್ತರಿಸಿದಳು.


ನನ್ನ ಆಲಯದಲ್ಲಿ ಹಾಡುವ ಹಾಡುಗಳು ಮರಣದ ಶೋಕಗೀತೆಗಳಾಗುವವು. ಇವು ಕರ್ತನಾದ ಯೆಹೋವನ ನುಡಿಗಳು. ಸತ್ತಹೆಣಗಳು ಎಲ್ಲೆಲ್ಲಿಯೂ ಬಿದ್ದುಕೊಂಡಿರುವವು. ಜನರು ಮೌನದಿಂದಿದ್ದು ಸತ್ತವರನ್ನು ಎತ್ತಿ ರಾಶಿಗೆ ಬಿಸಾಡುವರು.”


“ನಾವು ಇಲ್ಲಿ ಸುಮ್ಮನೆ ಕುಳಿತುಕೊಂಡಿರುವುದೇಕೆ? ಬನ್ನಿ, ನಾವು ಭದ್ರವಾದ ಪಟ್ಟಣಗಳಿಗೆ ಓಡಿಹೋಗೋಣ. ನಮ್ಮ ದೇವರಾದ ಯೆಹೋವನು ನಮ್ಮನ್ನು ಸಾಯುವಂತೆ ಮಾಡಿದರೆ ಅಲ್ಲಿಯೇ ಸತ್ತುಹೋಗೋಣ. ನಾವು ಯೆಹೋವನಿಗೆ ವಿರುದ್ಧವಾಗಿ ಪಾಪಮಾಡಿದ್ದೇವೆ. ಆದ್ದರಿಂದ ಆತನು ನಮಗೆ ಕುಡಿಯಲು ವಿಷಮಿಶ್ರಿತ ನೀರನ್ನು ಕೊಟ್ಟಿದ್ದಾನೆ.


ಇದನ್ನು ಕೇಳಿ ಜೆರುಸಲೇಮಿನ ಜನರು ಮೌನವಾದರು. ಅವರು ಸೇನಾದಂಡನಾಯಕನಿಗೆ ಯಾವ ಉತ್ತರವನ್ನೂ ಕೊಡಲಿಲ್ಲ. ಯಾಕೆಂದರೆ ಹಿಜ್ಕೀಯನು ಅವರ ಸಂಗಡ ಮಾತಾಡಬಾರದೆಂದು ಹೇಳಿದ್ದನು.


ನಾನು ಮೌನವಾಗಿದ್ದೆನು. ಒಳ್ಳೆಯದನ್ನೂ ಹೇಳದೆ ಸುಮ್ಮನಿದ್ದೆನು. ಆದರೆ ನನ್ನ ವೇದನೆಯು ಹೆಚ್ಚಾಯಿತು.


ಆ ಸ್ತ್ರೀಯ ಮಾತುಗಳನ್ನು ರಾಜನು ಕೇಳಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲಾ ಹರಿದುಕೊಂಡನು. ಅವನ ಮೈಮೇಲೆ ಗೋಣಿತಟ್ಟಿರುವುದು ಜನರಿಗೆಲ್ಲಾ ಕಾಣಿಸಿತು.


ಇಸ್ರೇಲಿನ ರಾಜನು ಪತ್ರವನ್ನು ಓದಿದಾಗ, ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು, “ನಾನು ದೇವರೇನು? ಇಲ್ಲ! ಹುಟ್ಟು ಮತ್ತು ಸಾವುಗಳ ಮೇಲೆ ನನಗೆ ಯಾವ ಶಕ್ತಿಯೂ ಇಲ್ಲ. ಹೀಗಿರುವಾಗ ಅರಾಮ್ಯರ ರಾಜನು ಕುಷ್ಠರೋಗಪೀಡಿತನಾದ ಮನುಷ್ಯನನ್ನು ನನ್ನ ಬಳಿಗೆ ಗುಣಪಡಿಸಲು ಏಕೆ ಕಳುಹಿಸಿದನು? ಇದರ ಬಗ್ಗೆ ನೀವೇ ಯೋಚಿಸಿರಿ. ಇದು ಒಂದು ಕುತಂತ್ರವೆಂಬುದು ನಿಮಗೇ ತಿಳಿಯುತ್ತದೆ. ಅರಾಮ್ಯರ ರಾಜನು ಯುದ್ಧವನ್ನು ಆರಂಭಿಸಲು ಪ್ರಯತ್ನಿಸುತ್ತಿದ್ದಾನೆ!” ಎಂದು ಹೇಳಿದನು.


ಎಲೀಯನು ಮಾತನಾಡಿದ ನಂತರ ಅಹಾಬನು ಬಹಳ ಶೋಕತಪ್ತನಾದನು. ಅವನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡನು. ಅವನು ಊಟಮಾಡದೆ ಹಾಗೆಯೇ ಮಲಗಿಕೊಂಡನು; ದುಃಖದಿಂದ ತಳಮಳಗೊಂಡನು.


ದಾವೀದನು ಯೋವಾಬನಿಗೆ ಮತ್ತು ಅವನ ಜೊತೆಯಲ್ಲಿದ್ದ ಜನರಿಗೆಲ್ಲ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು ಮತ್ತು ಶೋಕಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಅಬ್ನೇರನಿಗಾಗಿ ಶೋಕಿಸಿ” ಎಂದು ಹೇಳಿದನು. ರಾಜನಾದ ದಾವೀದನೂ ಶವಸಂಸ್ಕಾರಕ್ಕೆ ಹೋದನು. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಸಮಾಧಿ ಮಾಡಿದರು. ಅಬ್ನೇರನ ಸಮಾಧಿಯ ಹತ್ತಿರ ರಾಜನಾದ ದಾವೀದನೂ ಇತರ ಜನರೂ ಗೋಳಾಡಿದರು.


ಆಗ ದಾವೀದನು ದುಃಖದಿಂದ ತನ್ನ ಬಟ್ಟೆಗಳನ್ನೆಲ್ಲ ಹರಿದುಕೊಂಡನು. ದಾವೀದನ ಜೊತೆಯಲ್ಲಿದ್ದವರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡರು.


ನನ್ನ ಜೊತೆಯಲ್ಲಿ ಈ ಹುಡುಗನಿಲ್ಲದೆ ನಾನು ನನ್ನ ತಂದೆಯ ಬಳಿಗೆ ಹಿಂತಿರುಗಿ ಹೋಗಲು ಸಾಧ್ಯವಿಲ್ಲ. ನಮ್ಮ ತಂದೆಗೆ ಸಂಭವಿಸುವುದನ್ನು ನೋಡಲು ನನಗೆ ತುಂಬ ಭಯವಾಗಿದೆ” ಎಂದು ಹೇಳಿದನು.


ಆಗ ಯೆಹೂದನು ಯೋಸೇಫನ ಬಳಿಗೆ ಹೋಗಿ, “ಸ್ವಾಮಿ, ತಮ್ಮೊಂದಿಗೆ ಬಿಚ್ಚುಮನಸ್ಸಿನಿಂದ ಮಾತನಾಡಲು ದಯವಿಟ್ಟು ಅನುಮತಿಯಾಗಲಿ; ದಯವಿಟ್ಟು ನನ್ನ ಮೇಲೆ ಕೋಪಗೊಳ್ಳಬೇಡಿ. ನೀವು ಸ್ವತಃ ಫರೋಹನಂತೆ ಇರುವಿರೆಂದು ನನಗೆ ತಿಳಿದಿದೆ.


ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡು ಗೋಣಿತಟ್ಟನ್ನು ಸುತ್ತಿಕೊಂಡು ಬಹುದಿನಗಳವರೆಗೆ ದುಃಖಪಟ್ಟನು.


ಆ ಸಮಯದಲ್ಲಿ ರೂಬೇನನು ತನ್ನ ಸಹೋದರರೊಡನೆ ಇರಲಿಲ್ಲ. ಅವರು ಯೋಸೇಫನನ್ನು ಮಾರಿದ್ದು ಅವನಿಗೆ ಗೊತ್ತಿರಲಿಲ್ಲ. ರೂಬೇನನು ಬಾವಿಗೆ ಹಿಂತಿರುಗಿ ಬಂದಾಗ, ಯೋಸೇಫನನ್ನು ಅಲ್ಲಿ ಕಾಣದೆ ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು.


ಪೇತ್ರನು ಸಿದ್ಧನಾಗಿ ಅವರೊಂದಿಗೆ ಹೋದನು. ಅವನು ಅಲ್ಲಿಗೆ ತಲುಪಿದಾಗ, ಅವರು ಅವನನ್ನು ಮೇಲ್ಮಾಳಿಗೆಯ ಕೋಣೆಗೆ ಕರೆದುಕೊಂಡು ಹೋದರು. ವಿಧವೆಯರೆಲ್ಲ ಅಳುತ್ತಾ ಪೇತ್ರನನ್ನು ಸುತ್ತುವರಿದರು. ದೊರ್ಕಳು ಜೀವಂತವಾಗಿದ್ದಾಗ ತಮಗಾಗಿ ತಯಾರಿಸಿ ಕೊಟ್ಟ ಮೇಲಂಗಿಗಳನ್ನು ಮತ್ತು ಬಟ್ಟೆಗಳನ್ನು ಅವರು ಪೇತ್ರನಿಗೆ ತೋರಿಸಿದರು.


ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.


ಬಳಿಕ ಆ ಮೂವರು ಸ್ನೇಹಿತರು ಏಳುದಿನ ಹಗಲಿರುಳು ಯೋಬನೊಂದಿಗೆ ನೆಲದ ಮೇಲೆ ಕುಳಿತುಕೊಂಡಿದ್ದರು. ಯೋಬನು ವಿಪರೀತ ನೋವಿನಲ್ಲಿದ್ದ ಕಾರಣ ಅವರು ಒಂದು ಮಾತನ್ನೂ ಅವನಿಗೆ ಹೇಳಲಿಲ್ಲ.


ಹುಡುಕುವ ಸಮಯ, ಹುಡುಕದಿರುವ ಸಮಯ. ವಸ್ತುಗಳನ್ನು ಇಟ್ಟುಕೊಳ್ಳುವ ಸಮಯ, ವಸ್ತುಗಳನ್ನು ಬಿಸಾಡುವ ಸಮಯ.


ಸೌಲನು ಅವನಿಗೆ, “ಕತ್ತೆಗಳು ಈಗಾಗಲೇ ಸಿಕ್ಕಿವೆ ಎಂದು ಸಮುವೇಲನು ಹೇಳಿದನು” ಅಂದನು. ಸೌಲನು ತನ್ನ ಚಿಕ್ಕಪ್ಪನಿಗೆ ಎಲ್ಲವನ್ನೂ ತಿಳಿಸಲಿಲ್ಲ. ರಾಜ್ಯದ ಬಗ್ಗೆ ಸಮುವೇಲನು ಹೇಳಿದ ಮಾತುಗಳನ್ನು ಸೌಲನು ತನ್ನ ಚಿಕ್ಕಪ್ಪನಿಗೆ ತಿಳಿಸಲಿಲ್ಲ.


ಆದರೆ ಜನರೆಲ್ಲರೂ ಸುಮ್ಮನಿದ್ದರು, ರಾಜನಾದ ಹಿಜ್ಕೀಯನು ಜನರಿಗೆ ಆಜ್ಞಾಪಿಸಿದ್ದರಿಂದ ಅವರು ಸೇನಾಧಿಪತಿಯೊಂದಿಗೆ ಒಂದು ಮಾತನ್ನೂ ಆಡಲಿಲ್ಲ. “ಅವನಿಗೆ ಏನನ್ನೂ ಹೇಳಬೇಡಿ” ಎಂದು ಹಿಜ್ಕೀಯನು ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು