ಪ್ರಸಂಗಿ 4:9 - ಪರಿಶುದ್ದ ಬೈಬಲ್9 ಇಬ್ಬರು ಒಬ್ಬನಿಗಿಂತಲೂ ಉತ್ತಮ. ಇಬ್ಬರು ಒಟ್ಟಾಗಿ ದುಡಿದರೆ ಹೆಚ್ಚು ಗಳಿಸುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಬ್ಬನಿಗಿಂತ ಇಬ್ಬರು ಕೆಲಸ ಮಾಡುವುದು ಒಳ್ಳೆಯದು. ಅವರ ಪ್ರಯಾಸಕ್ಕೆ ಒಳ್ಳೆಯ ಲಾಭವನ್ನು ಸಂಪಾದಿಸಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಹೆಚ್ಚಿನ ಲಾಭ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಬ್ಬನಿಗಿಂತ ಇಬ್ಬರು ಲೇಸು; ಅವರ ಪ್ರಯಾಸಕ್ಕೆ ಒಳ್ಳೆಯ ಲಾಭ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಒಬ್ಬನಿಗಿಂತ ಇಬ್ಬರು ಲೇಸು, ಏಕೆಂದರೆ ಅವರ ಪ್ರಯಾಸಕ್ಕೆ ಒಳ್ಳೆಯ ಪ್ರತಿಫಲವಿದೆ: ಅಧ್ಯಾಯವನ್ನು ನೋಡಿ |
ಬಳಿಕ ದೇವರಾದ ಯೆಹೋವನು ಆಲಯವನ್ನು ಕಟ್ಟುವಂತೆ ಜನರನ್ನು ಪ್ರೇರೇಪಿಸಿದನು. ಶೆಯಲ್ತಿಯೇಲನ ಮಗನಾದ ಜೆರುಬ್ಬಾಬೆಲನು ಯೆಹೂದ ಪ್ರಾಂತ್ಯದ ರಾಜ್ಯಪಾಲನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು. ಯೆಹೋಚಾದಾಕನ ಮಗನಾದ ಯೆಹೋಶುವನು ಪ್ರಧಾನ ಯಾಜಕನಾಗಿದ್ದನು. ಯೆಹೋವನು ಅವನನ್ನು ಪ್ರೇರೇಪಿಸಿದನು ಅಲ್ಲದೆ ಯೆಹೋವನು ಆಲಯವನ್ನು ಕಟ್ಟಲು ಎಲ್ಲಾ ಜನರನ್ನು ಪ್ರೋತ್ಸಾಹಿಸಿದನು. ಆದ್ದರಿಂದ ಅವರೆಲ್ಲರೂ ತಮ್ಮ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟಲು ಪ್ರಾರಂಭಿಸಿದರು.
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.