ಪ್ರಸಂಗಿ 5:1 - ಪರಿಶುದ್ದ ಬೈಬಲ್1 ದೇವರನ್ನು ಆರಾಧಿಸಲು ಹೋಗುವಾಗ ಎಚ್ಚರಿಕೆಯಿಂದಿರಿ. ಮೂಢರಂತೆ ಯಜ್ಞಗಳನ್ನು ಅರ್ಪಿಸುವುದಕ್ಕಿಂತ ದೇವರಿಗೆ ಕಿವಿಗೊಡುವುದೇ ಉತ್ತಮ. ಮೂಢರು ದುಷ್ಕೃತ್ಯಗಳನ್ನು ಮಾಡುತ್ತಲೇ ಇರುವರು; ಆದರೆ ಅವರಿಗೆ ಅದು ಗೊತ್ತೇ ಇಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವುದು ಲೇಸು. ತಾವು ತಪ್ಪು ಮಾಡುತ್ತಿದ್ದೇವೆಂಬುದು ಮೂಢರಿಗೆ ಗೊತ್ತೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ನೀನು ದೇವಾಲಯವನ್ನು ಪ್ರವೇಶಿಸುವಾಗ ಎಚ್ಚರಿಕೆವಹಿಸು. ಮೂಢರು ಅರ್ಪಿಸುವ ಬಲಿಗಿಂತ ದೇವರ ಸಾನ್ನಿಧ್ಯ ಸೇರಿ ಕಿವಿಗೊಟ್ಟು ಆಲಿಸುವುದು ಲೇಸು. ತಾವು ಮಾಡುವುದು ಸರಿಯಲ್ಲ ಎಂದು ಆ ಮೂಢರಿಗೆ ತಿಳಿಯದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವದು ಲೇಸು; ತಾವು ಮಾಡುವದು ಅಧರ್ಮವೆಂದು ಮೂಢರಿಗೆ ಗೊತ್ತೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ದೇವರ ಆಲಯಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು. ಮೂರ್ಖರು ಅರ್ಪಿಸುವ ಯಜ್ಞಕ್ಕಿಂತ, ದೇವರ ಸಮೀಪವಾಗಿದ್ದು ಅವರಿಗೆ ಕಿವಿಗೊಟ್ಟು ಆಲಿಸುವುದು ಲೇಸು. ತಾವು ತಪ್ಪು ಮಾಡುತ್ತಿದ್ದಾರೆಂದು ಮೂಢರಿಗೆ ತಿಳಿಯುವುದಿಲ್ಲ. ಅಧ್ಯಾಯವನ್ನು ನೋಡಿ |
ಕೆಲವರು ಒಂದು ಕಡೆಯಲ್ಲಿ ಹೋರಿಯನ್ನು ಯಜ್ಞಮಾಡುವರು. ಇನ್ನೊಂದು ಕಡೆಯಲ್ಲಿ ಜನರಿಗೆ ಹಿಂಸೆ ಕೊಡುವರು. ಅವರು ಬಲಿಯರ್ಪಿಸಲು ಕುರಿಗಳನ್ನು ಕೊಯ್ಯುವರು, ಅದೇ ಸಮಯದಲ್ಲಿ ನಾಯಿಗಳ ಕುತ್ತಿಗೆಗಳನ್ನು ಮುರಿಯುವರು. ಅವರು ನನಗೆ ಹಂದಿಗಳ ರಕ್ತವನ್ನು ಅರ್ಪಿಸುವರು. ನನಗೆ ಧೂಪವನ್ನು ಹಾಕಲು ಯಾವಾಗಲೂ ತಯಾರಿರುವರು. ಅದೇ ಸಮಯದಲ್ಲಿ ಅಯೋಗ್ಯವಾದ ತಮ್ಮ ವಿಗ್ರಹಗಳನ್ನು ಪ್ರೀತಿಸುವರು. ಅವರು ನನ್ನ ಮಾರ್ಗವನ್ನು ಅನುಸರಿಸದೆ ತಮ್ಮ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ. ಅವರು ತಮ್ಮ ಭಯಂಕರವಾದ ವಿಗ್ರಹಗಳನ್ನು ಪೂಜಿಸುತ್ತಾರೆ.