Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:10 - ಪರಿಶುದ್ದ ಬೈಬಲ್‌

10 ಹಣದಾಸೆಯುಳ್ಳವನು ತನ್ನಲ್ಲಿ ಎಷ್ಟೇ ಹಣವಿದ್ದರೂ ತೃಪ್ತನಾಗಲಾರನು. ಐಶ್ವರ್ಯದಾಸೆಯುಳ್ಳವನು ಎಷ್ಟೇ ಸಂಪಾದಿಸಿದರೂ ತೃಪ್ತನಾಗುವುದಿಲ್ಲ. ಇದು ಸಹ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗುವುದಿಲ್ಲ ಮತ್ತು ಸಮೃದ್ಧಿಯನ್ನು ಬಯಸುವವನಿಗೆ ಆದಾಯವೆಷ್ಟಾದರೂ ಸಾಲುವುದಿಲ್ಲ. ಇದೂ ಸಹ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಹಣದಾಸೆಯುಳ್ಳವನಿಗೆ ಎಷ್ಟು ಹಣ ಇದ್ದರೂ ತೃಪ್ತಿಯಿಲ್ಲ. ಆಸ್ತಿ ಬಯಸುವವನಿಗೆ ಎಷ್ಟು ಆದಾಯವಿದ್ದರೂ ನೆಮ್ಮದಿಯಿಲ್ಲ. ಇದೂ ಸಹ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಬೆಳ್ಳಿಯನ್ನು ಆಶಿಸುವವನಿಗೆ ಎಷ್ಟು ಬೆಳ್ಳಿಯಿಂದಲೂ ತೃಪ್ತಿಯಾಗದು; ಸಮೃದ್ಧಿಯನ್ನು ಬಯಸುತ್ತಲೇ ಇರುವವನಿಗೆ ಆದಾಯವೆಷ್ಟಾದರೂ ಸಾಲದು. ಇದು ಸಹ ವ್ಯರ್ಥ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಹಣವನ್ನು ಪ್ರೀತಿಸುವವರಿಗೆ ಎಷ್ಟು ಹಣ ಇದ್ದರೂ ಸಾಕಾಗದು. ಆಸ್ತಿಯನ್ನು ಪ್ರೀತಿಸುವವನು ತನ್ನ ಆದಾಯದಿಂದ ತೃಪ್ತಿಗೊಳ್ಳುವುದಿಲ್ಲ. ಇದೂ ಸಹ ವ್ಯರ್ಥವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:10
21 ತಿಳಿವುಗಳ ಹೋಲಿಕೆ  

ಹಣದಾಸೆಯು ಎಲ್ಲಾ ವಿಧವಾದ ಕೆಟ್ಟತನಕ್ಕೆ ಮೂಲವಾಗುತ್ತದೆ. ಕೆಲವು ಜನರು ಹೆಚ್ಚುಹೆಚ್ಚು ಹಣವನ್ನು ಗಳಿಸಿಕೊಳ್ಳುವುದಕ್ಕಾಗಿ ಸತ್ಯೋಪದೇಶವನ್ನು ತೊರೆದುಬಿಟ್ಟಿದ್ದಾರೆ. ಆದರೆ ಅವರು ತಮ್ಮನ್ನು ತಾವೇ ಹೆಚ್ಚು ವೇದನೆಗೆ ಗುರಿಪಡಿಸಿಕೊಂಡಿದ್ದಾರೆ.


“ಯಾವನೂ ಇಬ್ಬರು ಯಜಮಾನರಿಗೆ ಒಂದೇ ಸಮಯದಲ್ಲಿ ಸೇವೆ ಮಾಡಲಾರನು. ಅವನು ಒಬ್ಬ ಯಜಮಾನನನ್ನು ದ್ವೇಷಿಸಿ ಮತ್ತೊಬ್ಬನನ್ನು ಪ್ರೀತಿಸುತ್ತಾನೆ ಅಥವಾ ಒಬ್ಬ ಯಜಮಾನನನ್ನು ಹಿಂಬಾಲಿಸಿ ಮತ್ತೊಬ್ಬನನ್ನು ತಾತ್ಸಾರ ಮಾಡುತ್ತಾನೆ. ಆದ್ದರಿಂದ ನೀನು ದೇವರಿಗೆ ಮತ್ತು ಹಣಕ್ಕೆ ಒಂದೇ ಸಮಯದಲ್ಲಿ ಸೇವೆ ಮಾಡಲಾರೆ.


ಬಳಿಕ ಯೇಸು ನೆರೆದಿದ್ದ ಜನರಿಗೆ, “ಎಚ್ಚರಿಕೆ, ಯಾವ ವಿಧವಾದ ಸ್ವಾರ್ಥಕ್ಕೂ ಒಳಗಾಗದಂತೆ ಜಾಗರೂಕರಾಗಿರಿ. ಒಬ್ಬನಿಗೆ ಎಷ್ಟೇ ಆಸ್ತಿಯಿದ್ದರೂ ಅದರಿಂದ ಅವನು ಜೀವವನ್ನು ಪಡೆದುಕೊಳ್ಳಲಾರನು” ಎಂದನು.


“ನಿಮಗೋಸ್ಕರ ಈ ಭೂಮಿಯ ಮೇಲೆ ಭಂಡಾರಗಳನ್ನು ಮಾಡಿಕೊಳ್ಳಬೇಡಿ. ಅವು ಕಿಲುಬುಹತ್ತಿ ಹಾಳಾಗುತ್ತವೆ. ಕಳ್ಳರು ನಿಮ್ಮ ಮನೆಯೊಳಗೆ ಕನ್ನಕೊರೆದು ನಿಮ್ಮಲ್ಲಿರುವುದನ್ನು ಕದಿಯಬಲ್ಲರು.


ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಅನ್ಯಾಯದಿಂದ ಸಂಪಾದಿಸಿದ್ದರಲ್ಲಿ ನಂಬಿಕೆ ಇಡಬೇಡಿ. ಕದ್ದವಸ್ತುಗಳಲ್ಲಿ ಜಂಬಪಡಬೇಡಿ. ಐಶ್ವರ್ಯವು ಅಧಿಕವಾಗುತ್ತಿದ್ದರೂ ಅದರಲ್ಲಿ ಮನಸ್ಸಿಡಬೇಡಿ.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


“ದೇವರ ಮೇಲೆ ಅವಲಂಬಿಸಿಕೊಳ್ಳದ ಇವನಿಗೆ ಏನಾಯಿತು? ತನ್ನ ಐಶ್ವರ್ಯವೂ ಸುಳ್ಳುಗಳೂ ತನ್ನನ್ನು ಕಾಪಾಡುತ್ತವೆ ಎಂದು ಭಾವಿಸಿಕೊಂಡವನು ಇವನೇ.”


ನನ್ನ ಕಾರ್ಯಗಳನ್ನೂ ನನ್ನ ಪ್ರಯಾಸವನ್ನೂ ಆಲೋಚಿಸಿದೆ. ಗಾಳಿಯನ್ನು ಹಿಂದಟ್ಟಿದ ಹಾಗೆ ಅದೆಲ್ಲಾ ವ್ಯರ್ಥವೆಂದು ಕಂಡುಕೊಂಡೆ. ನಮ್ಮ ಈ ಜೀವಮಾನದ ಯಾವ ಕೆಲಸಗಳಿಂದಲೂ ಲಾಭವಿಲ್ಲ.


ಅನೇಕಾನೇಕ ಜನರು ಆ ಯೌವನಸ್ಥನಿಗೆ ಬೆಂಬಲನೀಡುವರು. ಆದರೆ ಕೊನೆಗಾಲದಲ್ಲಿ ಅವರೇ ಅವನನ್ನು ಇಷ್ಟಪಡುವುದಿಲ್ಲ. ಇದು ಸಹ ಗಾಳಿಯನ್ನು ಹಿಂದಟ್ಟಿದಂತೆ ವ್ಯರ್ಥ.


ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ ‘ಉಸಿರು.’ ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ.


ಮನುಷ್ಯನು ದುಡಿಯುವುದೆಲ್ಲಾ ಊಟಕ್ಕಾಗಿಯೇ. ಆದರೂ ಅವನಿಗೆ ತೃಪ್ತಿಯೇ ಇಲ್ಲ.


ಜ್ಞಾನವನ್ನಲ್ಲದೆ ಮೂಢತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಿಕೊಳ್ಳಲು ನಿರ್ಧರಿಸಿದೆನು. ಆದರೆ ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ಕಲಿತುಕೊಂಡೆನು.


ದುಷ್ಟಾಧಿಕಾರಿಯೇ, ನಿನ್ನ ದುಷ್ಕೃತ್ಯಗಳ ಕುರಿತು ಜಂಬಪಡುವುದೇಕೇ? ದೇವರ ದೃಷ್ಟಿಗೆ ನೀನು ಅಸಹ್ಯಕರವಾಗಿರುವೆ.


ಮಾತುಗಳಿಂದ ಯಾವುದನ್ನೂ ಸಂಪೂರ್ಣವಾಗಿ ವಿವರಿಸಲು ಸಾಧ್ಯವಿಲ್ಲ; ಆದರೂ ಜನರು ಮಾತಾಡುತ್ತಲೇ ಇರುವರು. ನಮ್ಮ ಕಿವಿಗಳು ಮಾತುಗಳನ್ನು ಕೇಳುತ್ತಲೇ ಇರುತ್ತವೆ; ಆದರೂ ನಮ್ಮ ಕಿವಿಗಳು ತುಂಬುವುದಿಲ್ಲ. ನಮ್ಮ ಕಣ್ಣುಗಳು ನೋಡುತ್ತಲೇ ಇರುತ್ತವೆ; ಆದರೂ ಅವು ತುಂಬುವುದಿಲ್ಲ.


ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕೆಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.


ರಾಜನು ಸಹ ಸೇವಕನಾಗಿದ್ದಾನೆ; ಅವನ ದೇಶವು ಅವನನ್ನು ಗಳಿಸಿಕೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು