ಪ್ರಸಂಗಿ 5:11 - ಪರಿಶುದ್ದ ಬೈಬಲ್11 ಐಶ್ವರ್ಯ ಹೆಚ್ಚಿದಂತೆಲ್ಲಾ “ಅನುಭವಿಸುವವರ” ಸಂಖ್ಯೆಯೂ ಹೆಚ್ಚುವುದು. ಐಶ್ವರ್ಯವಂತನು ಅದನ್ನು ಕಣ್ಣಿಂದ ನೋಡಬಹುದಷ್ಟೇ ಹೊರತು ಬೇರೆ ಯಾವ ಲಾಭವೂ ಅವನಿಗಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಸ್ತಿ ಹೆಚ್ಚಾದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚಾಗುವುದು. ಅದನ್ನು ಕಣ್ಣಿನಿಂದ ನೋಡುವುದೇ ಹೊರತು ಯಜಮಾನನಿಗೆ ಇನ್ಯಾವ ಲಾಭವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಿರಿಸಂಪತ್ತು ಹೆಚ್ಚಿದಂತೆ ಅನುಭವಿಸುವವರ ಸಂಖ್ಯೆಯೂ ಹೆಚ್ಚುತ್ತದೆ. ಯಜಮಾನನಿಗೆ ತಾನು ಐಶ್ವರ್ಯವಂತನೆಂಬ ಭಾವನೆಯ ಹೊರತು ಮತ್ತಾವ ಲಾಭವು ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೊತ್ತು ಹೆಚ್ಚಿದರೆ ಅನುಭವಿಸುವವರ ಸಂಖ್ಯೆಯೂ ಹೆಚ್ಚುವದು; ಅದನ್ನು ಕಣ್ಣಿಂದ ನೋಡುವದೇ ಹೊರತು ಯಜಮಾನನಿಗೆ ಇನ್ನಾವ ಲಾಭವೂ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸೊತ್ತು ಹೆಚ್ಚಿದರೆ, ಅದನ್ನು ಅನುಭವಿಸುವವರು ಹೆಚ್ಚಾಗುವರು. ಯಜಮಾನರು ಅದನ್ನು ತಮ್ಮ ಕಣ್ಣಿಂದ ನೋಡುವುದೇ ಅವರಿಗಾಗುವ ಲಾಭ, ಬೇರೆ ಯಾವ ಪ್ರಯೋಜನವಿದೆ? ಅಧ್ಯಾಯವನ್ನು ನೋಡಿ |