ಪ್ರಸಂಗಿ 5:13 - ಪರಿಶುದ್ದ ಬೈಬಲ್13 ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಡುತ್ತಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸೂರ್ಯನ ಕೆಳಗೆ ನಾನು ಮತ್ತೊಂದು ಕೇಡನ್ನು ಕಂಡೆನು. ಯಜಮಾನನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲಿಯೇ ಕೊರಗುತ್ತಿರುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಲೋಕದಲ್ಲಿ ನಾನು ಮತ್ತೊಂದು ಕೇಡನ್ನು ಕಂಡೆ. ಅದೇನೆಂದರೆ, ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವುದರಲ್ಲೇ ಕೊರಗುತ್ತಿರುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಲೋಕದಲ್ಲಿ ಕೇವಲ ಈ ದುರ್ದಶೆಯನ್ನು ನೋಡಿದೆನು; ಆಸ್ತಿವಂತನು ತನ್ನ ಆಸ್ತಿಯನ್ನು ಕಾಪಾಡುವದರಲ್ಲಿಯೇ ಕೊರಗುತ್ತಿರುವನು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸೂರ್ಯನ ಕೆಳಗೆ ವ್ಯಸನಕರವಾದ ಕೇಡನ್ನು ನಾನು ನೋಡಿದೆ. ಅದು ಯಾವುದೆಂದರೆ: ಸಂಗ್ರಹಿಸಿದ ಆಸ್ತಿ ಯಜಮಾನನಿಗೆ ಹಾನಿ. ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.