ಪ್ರಸಂಗಿ 5:15 - ಪರಿಶುದ್ದ ಬೈಬಲ್15 ಮನುಷ್ಯನು ತಾಯಿಯ ಗರ್ಭದಿಂದ ಬರಿದಾಗಿ ಈ ಲೋಕಕ್ಕೆ ಬರುವನು; ಸಾಯುವಾಗ ಅದೇ ರೀತಿ ಬರಿದಾಗಿ ಹೋಗುವನು; ತಾನು ಪ್ರಯಾಸಪಟ್ಟು ಸಂಪಾದಿಸಿದವುಗಳಲ್ಲಿ ಒಂದನ್ನೂ ಅವನು ತನ್ನೊಡನೆ ತೆಗೆದುಕೊಂಡು ಹೋಗಲಾರನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿ ಹೋಗುವನು. ಅವನು ಪ್ರಯಾಸಪಟ್ಟರೂ, ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ತಾಯಿಯ ಗರ್ಭದಿಂದ ಹೇಗೆ ಬರಿಗೈಯಲ್ಲಿ ಬಂದನೋ ಹಾಗೇ ಬರಿಗೈಯಲ್ಲಿ ಗತಿಸಿಹೋಗುತ್ತಾನೆ. ಅವನು ಪಟ್ಟ ಎಲ್ಲ ಪ್ರಯಾಸಕ್ಕಾಗಿ ತನ್ನ ಕೈಯಲ್ಲಿ ಏನನ್ನೂ ತೆಗೆದುಕೊಂಡು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ತಾಯಿಯ ಗರ್ಭದಿಂದ ಹೇಗೆ ಬಂದನೋ ಹಾಗೆಯೇ ಏನೂ ಇಲ್ಲದವನಾಗಿ ಗತಿಸಿಹೋಗುವನು; ಅವನು ಪ್ರಯಾಸಪಟ್ಟದ್ದಕ್ಕೆಲ್ಲಾ ತನ್ನ ಕೈಯಲ್ಲಿ ಏನೂ ತೆಗೆದುಕೊಂಡು ಹೋಗನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತಾಯಿಯ ಗರ್ಭದಿಂದ ಅವನು ಹೇಗೆ ಬರಿಗೈಯಲ್ಲಿ ಬಂದನೋ, ಹಾಗೆ ಬರಿಗೈಯಲ್ಲಿ ಗತಿಸಿ ಹೋಗುವನು. ಅವನು ಪ್ರಯಾಸ ಪಟ್ಟದ್ದಕ್ಕಾಗಿ ಯಾವುದನ್ನು ತೆಗೆದುಕೊಂಡು ಹೋಗುವುದಿಲ್ಲ. ಅಧ್ಯಾಯವನ್ನು ನೋಡಿ |