ಪ್ರಸಂಗಿ 5:16 - ಪರಿಶುದ್ದ ಬೈಬಲ್16 ಅದು ಸಹ ತುಂಬ ದುಃಖಕರ. ಅವನು ಬಂದ ರೀತಿಯಲ್ಲಿಯೇ ಈ ಲೋಕವನ್ನು ಬಿಟ್ಟುಹೋಗುವನು. “ಗಾಳಿಯನ್ನು ಹಿಂದಟ್ಟುವುದರಿಂದ” ಅವನಿಗಾಗುವ ಪ್ರಯೋಜನವೇನು? ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಇದು ಸಹ ದುರದೃಷ್ಟಕರವೇ. ಮನುಷ್ಯನು ಹೇಗೆ ಬಂದನೋ ಹಾಗೆಯೇ ಹೋಗುವನು. ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಬಂದಂತೆಯೇ ಹಿಂದಿರುಗಿ ಹೋಗುವನು. ಅವನು ಪಟ್ಟ ಪ್ರಯಾಸವೆಲ್ಲ ಗಾಳಿಗೆ ತೂರಿದಂತೆ ನಿರರ್ಥಕ, ಇದು ದುರದೃಷ್ಟಕರ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಬಂದಂತೆಯೇ ಗತಿಸುವನು; ಗಾಳಿಗಾಗಿ ಪಟ್ಟ ಪ್ರಯಾಸದಿಂದ ಅವನಿಗೆ ಲಾಭವೇನು? ಇದೇ ಕೇವಲ ದುರ್ದಶೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದು ಕೂಡ ವ್ಯಸನಕರವಾದ ಕೇಡು: ಮನುಷ್ಯನು ಹೇಗೆ ಬಂದನೋ, ಹಾಗೆಯೇ ಹೋಗುವನು. ಗಾಳಿಗಾಗಿ ಪ್ರಯಾಸಪಟ್ಟವನಿಗೆ ಲಾಭವೇನಿದೆ? ಅಧ್ಯಾಯವನ್ನು ನೋಡಿ |
ಈ ಲೋಕದ ಆಹಾರವು ಕೆಟ್ಟುಹೋಗುತ್ತದೆ ಮತ್ತು ಹಾಳಾಗುತ್ತದೆ. ಆದ್ದರಿಂದ ಅಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಬೇಡಿರಿ. ಆದರೆ ಎಂದಿಗೂ ಕೆಟ್ಟುಹೋಗದಂಥ ಮತ್ತು ನಿಮಗೆ ನಿತ್ಯಜೀವವನ್ನು ಕೊಡುವಂಥ ಆಹಾರವನ್ನು ಪಡೆದುಕೊಳ್ಳಲು ದುಡಿಯಿರಿ. ಮನುಷ್ಯಕುಮಾರನು ಆ ಆಹಾರವನ್ನು ನಿಮಗೆ ಕೊಡುವನು. ತಂದೆಯಾದ ದೇವರು ಆತನ ಮೇಲೆ ತನ್ನ ಅಧಿಕಾರದ ಮುದ್ರೆಯನ್ನು ಒತ್ತಿದ್ದಾನೆ” ಎಂದು ಹೇಳಿದನು.