Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:18 - ಪರಿಶುದ್ದ ಬೈಬಲ್‌

18 ನಾನು ಕಂಡುಕೊಂಡದ್ದೇನೆಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:18
16 ತಿಳಿವುಗಳ ಹೋಲಿಕೆ  

ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.


ಆದ್ದರಿಂದ ಮನುಷ್ಯನಿಗೆ ತನ್ನ ಕಾರ್ಯದಲ್ಲಿ ಸಂತೋಷಪಡುವುದಕ್ಕಿಂತ ಬೇರೆ ಯಾವ ಮೇಲೂ ಇಲ್ಲ. ಇದೇ ಅವನ ಪಾಲು ಎಂದು ಗ್ರಹಿಸಿಕೊಂಡೆನು. ಅಲ್ಲದೆ ಮುಂದಿನ ಕಾಲವನ್ನು ಕುರಿತು ಮನುಷ್ಯನು ಚಿಂತಿಸಬಾರದು. ಯಾಕೆಂದರೆ ಅವನ ಜೀವಮಾನದ ನಂತರ ಸಂಭವಿಸುವಂಥವುಗಳನ್ನು ನೋಡಲು ಈ ಲೋಕಕ್ಕೆ ಅವನನ್ನು ಯಾರು ಬರಮಾಡುವರು?


ಇಹಲೋಕದ ವಿಷಯಗಳಲ್ಲಿ ಶ್ರೀಮಂತರಾಗಿರುವ ಜನರಿಗೆ ಈ ಆಜ್ಞೆಗಳನ್ನು ತಿಳಿಸು. ಗರ್ವಪಡದಂತೆಯೂ ಹಣವನ್ನು ಅವಲಂಬಿಸಿಕೊಳ್ಳದೆ ದೇವರಲ್ಲೇ ನಿರೀಕ್ಷೆಯಿಡುವಂತೆಯೂ ಅವರಿಗೆ ತಿಳಿಸು. ಹಣವು ಭರವಸೆಗೆ ಯೋಗ್ಯವಲ್ಲ. ದೇವರಾದರೋ ನಮ್ಮ ಸಂತೋಷಕ್ಕಾಗಿ ಸಮಸ್ತವನ್ನು ನಮಗೆ ಧಾರಾಳವಾಗಿ ದಯಪಾಲಿಸುತ್ತಾನೆ.


ಆದ್ದರಿಂದ ಹೋಗು, ಊಟಮಾಡಿ ಸಂತೋಷಪಡು; ದ್ರಾಕ್ಷಾರಸವನ್ನು ಕುಡಿದು ಉಲ್ಲಾಸಿಸು; ನಿನ್ನ ಈ ನಡತೆಯು ದೇವರಿಗೆ ಮೆಚ್ಚಿಕೆಯಾಗಿದೆ.


ಆದ್ದರಿಂದ ಜೀವನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ಸಂತೋಷಪಡುವುದೇ ಉತ್ತಮವೆಂದು ನಿರ್ಧರಿಸಿದೆನು. ಯಾಕೆಂದರೆ ದೇವರು ಮನುಷ್ಯನಿಗೆ ಈ ಲೋಕದಲ್ಲಿ ಅನುಗ್ರಹಿಸಿರುವ ಪ್ರಯಾಸಕರ ಕೆಲಸಗಳಲ್ಲಿಯೂ ಮನುಷ್ಯನು ಸಂತೋಷವಾಗಿರಬೇಕು.


ನನ್ನ ಕಣ್ಣುಗಳು ಬಯಸಿದ್ದನ್ನೆಲ್ಲ ನನಗೋಸ್ಕರ ಪಡೆದುಕೊಂಡೆನು. ಯಾವುದೇ ಸುಖದಿಂದಾಗಲಿ ನನ್ನ ಹೃದಯವನ್ನು ನಾನು ತಡೆಹಿಡಿಯಲಿಲ್ಲ; ಯಾಕೆಂದರೆ ನನ್ನ ಕಾರ್ಯಗಳಲ್ಲಿ ನನ್ನ ಹೃದಯವು ಸಂತೋಷಗೊಂಡಿತ್ತು. ನನ್ನ ಪ್ರಯಾಸದ ಫಲವು ಅದೊಂದೇ.


ಆದ್ದರಿಂದ ಯೌವನಸ್ಥರೇ, ನಿಮ್ಮ ಯೌವನ ಕಾಲದಲ್ಲಿ ಆನಂದಿಸಿರಿ! ಸಂತೋಷವಾಗಿರಿ! ನಿಮ್ಮ ಹೃದಯವು ನಿಮ್ಮನ್ನು ನಡೆಸಿದಂತೆ ಮಾಡಿರಿ. ನೀವು ಬಯಸುವುದನ್ನೆಲ್ಲಾ ಮಾಡಿರಿ. ಆದರೆ ನೀವು ಮಾಡುವ ಪ್ರತಿಯೊಂದಕ್ಕೂ ದೇವರು ನಿಮಗೆ ನ್ಯಾಯತೀರಿಸುವನು ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಿರಿ.


ಪ್ರತಿದಿನ ಬಾಬಿಲೋನಿನ ರಾಜನು ಯೆಹೋಯಾಖೀನನಿಗೆ ಭತ್ಯವನ್ನು ಕೊಡುತ್ತಿದ್ದನು. ಯೆಹೋಯಾಖೀನನು ಸಾಯುವವರೆಗೆ ಈ ಕ್ರಮ ಮುಂದುವರೆಯಿತು.


ಈ ರೀತಿಯ ಮುಂದಾಳುಗಳನ್ನು ಮತ್ತು ಅವರೊಂದಿಗೆ ಕೆಲಸ ಮಾಡುವವರನ್ನು ಹಾಗೂ ಸೇವೆ ಮಾಡುವವರನ್ನು ಹಿಂಬಾಲಿಸಿರಿ.


ನೀವೂ ಮತ್ತು ನಿಮ್ಮ ಕುಟುಂಬಗಳವರೂ ಅಲ್ಲಿ ಒಟ್ಟಿಗೆ ಊಟ ಮಾಡಬೇಕು. ನಿಮ್ಮ ದೇವರಾದ ಯೆಹೋವನು ನಿಮ್ಮೊಂದಿಗಿರುವನು. ನೀವು ದುಡಿದು ಸಂಪಾದಿಸಿದ ಎಲ್ಲಾ ವಸ್ತುಗಳನ್ನು ಇತರರೊಂದಿಗೆ ಹಂಚಿಕೊಂಡು ಆ ಸ್ಥಳದಲ್ಲಿ ಆನಂದಿಸುವಿರಿ. ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಶೀರ್ವದಿಸಿ ಆ ಎಲ್ಲಾ ಒಳ್ಳೆಯವುಗಳನ್ನು ನಿಮಗೆ ಕೊಟ್ಟನೆಂದು ನೀವು ಜ್ಞಾಪಿಸಿಕೊಳ್ಳುವಿರಿ.


ನಿಮ್ಮ ದೇವರಾದ ಯೆಹೋವನು ಆರಿಸಿಕೊಂಡಿರುವ ಮತ್ತು ಆತನು ನಿಮ್ಮೊಂದಿಗಿರುವ ಆ ವಿಶೇಷ ಸ್ಥಳದಲ್ಲಿಯೇ ನೀವು ಆ ಕಾಣಿಕೆಗಳನ್ನು ತಿನ್ನಬೇಕು. ನೀವು ಅಲ್ಲಿಗೆ ನಿಮ್ಮ ಗಂಡುಹೆಣ್ಣು ಮಕ್ಕಳೊಂದಿಗೆ, ನಿಮ್ಮ ಎಲ್ಲಾ ಸೇವಕರೊಂದಿಗೆ ಮತ್ತು ನಿಮ್ಮ ಊರುಗಳಲ್ಲಿ ವಾಸವಾಗಿರುವ ಲೇವಿಯರೊಂದಿಗೆ ಹೋಗಿ ನಿಮ್ಮ ದೇವರಾದ ಯೆಹೋವನೊಂದಿಗೆ ಆನಂದಿಸಿರಿ; ನೀವು ದುಡಿದು ಸಂಪಾದಿಸಿದವುಗಳನ್ನು ಅನುಭವಿಸಿರಿ.


ನೀವೂ ನಿಮ್ಮ ಹೆಂಡತಿ ಮಕ್ಕಳೂ ಸೇರಿ ಅಲ್ಲಿ ಊಟಮಾಡಿ ಸಂತೋಷಿಸಬೇಕು. ನಿಮ್ಮ ಊರಿನಲ್ಲಿರುವ ಲೇವಿಯರೊಂದಿಗೆ ಮತ್ತು ಪರದೇಶಸ್ಥರೊಂದಿಗೆ ನಿಮ್ಮ ಪ್ರಥಮ ಫಲಗಳನ್ನು ಹಂಚಿಕೊಳ್ಳಿರಿ.


ಹಗಲಲ್ಲಿ ಯೆಹೋವನು ನನಗೆ ನಿಜಪ್ರೀತಿಯನ್ನು ತೋರುವುದರಿಂದ ಜೀವಸ್ವರೂಪನಾದ ಆತನಿಗೆ ಪ್ರತಿ ರಾತ್ರಿಯಲ್ಲಿಯೂ ನೂತನ ಕೀರ್ತನೆಯನ್ನು ಹಾಡುವೆ; ಆತನಲ್ಲಿ ಪ್ರಾರ್ಥಿಸುವೆ.


ಮನುಷ್ಯರು ತಮ್ಮ ಕ್ಷಣಿಕ ಜೀವಮಾನದಲ್ಲಿ ಮಾಡತಕ್ಕ ಒಳ್ಳೆಯದನ್ನು ತಿಳಿದುಕೊಳ್ಳಬೇಕೆಂದು ನನ್ನ ಮನಸ್ಸನ್ನು ಜ್ಞಾನದಿಂದ ತುಂಬಿಸಿದೆ; ದೇಹವನ್ನು ದ್ರಾಕ್ಷಾರಸದಿಂದ ತುಂಬಿಸಿದೆ; ಮೂಢತನವನ್ನು ಅವಲಂಭಿಸಿಕೊಂಡೆ.


ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗುವ ಎಲ್ಲವನ್ನೂ ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು