Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:4 - ಪರಿಶುದ್ದ ಬೈಬಲ್‌

4 ನೀವು ಹರಕೆ ಮಾಡಿಕೊಂಡರೆ ತಡಮಾಡದೆ ಅದನ್ನು ನೆರವೇರಿಸಿ. ಮೂಢರ ವಿಷಯದಲ್ಲಿ ದೇವರಿಗೆ ಸಂತೋಷವಿಲ್ಲ. ನೀವು ದೇವರಿಗೆ ಹರಕೆ ಮಾಡಿಕೊಂಡದ್ದನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ದೇವರಿಗೆ ನೀನು ಹರಕೆಯನ್ನು ಹೊತ್ತರೆ ತೀರಿಸಲು ತಡಮಾಡಬೇಡ. ದೇವರು ಮೂಢರಿಗೆ ಒಲಿಯುವುದಿಲ್ಲ. ನಿನ್ನ ಹರಕೆಯನ್ನು ತಪ್ಪದೆ ತೀರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ದೇವರಿಗೆ ಹರಕೆಯನ್ನು ಕಟ್ಟಿದರೆ ಅದನ್ನು ತೀರಿಸಲು ತಡಮಾಡಬೇಡ; ಆತನು ಮೂಢರಿಗೆ ಒಲಿಯನು; ನಿನ್ನ ಹರಕೆಯನ್ನು ಒಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:4
20 ತಿಳಿವುಗಳ ಹೋಲಿಕೆ  

“ಯಾವನಾದರೂ ಯೆಹೋವನಿಗೆ ಇಂಥದ್ದನ್ನು ಕೊಡುತ್ತೇನೆಂದು ಹರಕೆ ಮಾಡಿದರೆ ಅಥವಾ ತಾನು ಇಂಥದ್ದನ್ನು ಮಾಡುವುದಿಲ್ಲ ಎಂದು ಆಣೆಯಿಟ್ಟುಕೊಂಡರೆ, ಅವನು ತನ್ನ ಮಾತನ್ನು ಮೀರದೆ ತಾನು ಹೇಳಿದಂತೆಯೇ ನೆರವೇರಿಸಬೇಕು.


“‘ನೀವಿಟ್ಟ ಆಣೆಯನ್ನು ಮೀರಬೇಡಿರಿ. ಪ್ರಭುವಿಗೆ ನೀವಿಟ್ಟ ಆಣೆಗಳನ್ನು ಕೈಗೊಳ್ಳಲೇಬೇಕು’ ಎಂದು ನಮ್ಮ ಪೂರ್ವಿಕರಿಗೆ ಹೇಳಿದ್ದನ್ನು ನೀವು ಕೇಳಿದ್ದೀರಿ.


ದೇವರಾದ ಯೆಹೋವನಿಗೆ ಹರಕೆಗಳನ್ನು ಮಾಡಿದವರೇ, ನಿಮ್ಮ ಹರಕೆಗಳನ್ನು ಸಲ್ಲಿಸಿರಿ. ಸರ್ವಭೂನಿವಾಸಿಗಳೇ, ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಕೃತಜ್ಞತಾಯಜ್ಞಗಳನ್ನು ದೇವರಿಗೆ ಅರ್ಪಿಸಿರಿ. ನೀವು ಮಾಡಿಕೊಂಡ ಹರಕೆಗಳನ್ನು ಮಹೋನ್ನತನಿಗೆ ಸಲ್ಲಿಸಿರಿ.


ನಾನು ಯೆಹೋವನಿಗೆ ಮಾಡಿದ ಹರಕೆಗಳನ್ನು ಜನರ ಮುಂದೆ ಆತನಿಗೆ ಸಲ್ಲಿಸುವೆನು.


ನೀನು ಸರ್ವಾಂಗಹೋಮಗಳಲ್ಲಿಯೂ ಪಾಪಪರಿಹಾರಕ ಯಜ್ಞಗಳಲ್ಲಿಯೂ ಸಂತೋಷಪಡಲಿಲ್ಲ.


“ನಿಮ್ಮಲ್ಲಿ ಕೆಲವು ಯಾಜಕರು ಆಲಯದ ಬಾಗಿಲುಗಳನ್ನು ಮುಚ್ಚಿ ಬೆಂಕಿಯನ್ನು ಸರಿಯಾದ ರೀತಿಯಲ್ಲಿ ಹಚ್ಚುವರು. ಆದರೆ ನಾನು ನಿಮ್ಮನ್ನು ಮೆಚ್ಚುವದಿಲ್ಲ. ನಿಮ್ಮ ಕಾಣಿಕೆಗಳನ್ನು ಸ್ವೀಕರಿಸುವದಿಲ್ಲ” ಇದು ಸರ್ವಶಕ್ತನಾದ ಯೆಹೋವನ ನುಡಿ.


ರಕ್ಷಣೆಯು ಯೆಹೋವನಿಂದಲೇ ಉಂಟಾಗುವದು. ಯೆಹೋವನೇ, ನಾನು ನಿನಗೆ ಯಜ್ಞವನ್ನರ್ಪಿಸುವೆನು. ನಾನು ನಿನ್ನನ್ನು ಕೊಂಡಾಡಿ ಸ್ತೋತ್ರಸಲ್ಲಿಸುವೆನು. ನಾನು ನಿನಗೆ ವಿಶೇಷವಾದ ಹರಕೆಗಳನ್ನು ಮಾಡುವೆನು. ನಾನು ಕೊಟ್ಟ ವಚನಗಳನ್ನು ಪಾಲಿಸುವೆನು.”


ನಿನ್ನ ವಿಧಿನಿಯಮಗಳು ಒಳ್ಳೆಯವೇ. ಅವುಗಳಿಗೆ ವಿಧೇಯನಾಗಿರುವುದಾಗಿ ಪ್ರಮಾಣಮಾಡಿದ್ದೇನೆ, ಅದನ್ನು ನೆರವೇರಿಸುವೆನು.


ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.


ದೇವರು ಯಾಕೋಬನಿಗೆ, “ನೀನು ಬೇತೇಲ್ ಪಟ್ಟಣಕ್ಕೆ ಹೋಗಿ ಅಲ್ಲೇ ವಾಸಿಸು ಮತ್ತು ಆರಾಧನೆಗಾಗಿ ಒಂದು ಯಜ್ಞವೇದಿಕೆಯನ್ನು ಕಟ್ಟಿಸು. ನೀನು ನಿನ್ನ ಅಣ್ಣನಾದ ಏಸಾವನ ಬಳಿಯಿಂದ ಓಡಿಹೋಗುತ್ತಿದ್ದಾಗ ದೇವರಾದ ‘ಏಲ್’ ನಿನಗೆ ಅಲ್ಲಿ ಕಾಣಿಸಿಕೊಳ್ಳಲಿಲ್ಲವೇ! ಆತನ ಆರಾಧನೆಗಾಗಿ ಅಲ್ಲಿ ಯಜ್ಞವೇದಿಕೆಯನ್ನು ಕಟ್ಟಿಸು” ಎಂದು ಹೇಳಿದನು.


ಆ ಸಮಯದಲ್ಲಿ ಈಜಿಪ್ಟಿನ ಜನರು ಯೆಹೋವನನ್ನು ನಿಜವಾಗಿಯೂ ಅರಿತುಕೊಳ್ಳುವರು. ಅವರು ದೇವರನ್ನು ಪ್ರೀತಿಸುವರು. ಅವರು ಯೆಹೋವನನ್ನು ಸೇವಿಸಿ ಅನೇಕ ಯಜ್ಞಗಳನ್ನು ಸಮರ್ಪಿಸುವರು. ಯೆಹೋವನಿಗೆ ಹರಕೆ ಹೊತ್ತು ಸಲ್ಲಿಸುವರು.


ನಂತರ ಯಾಕೋಬನು ಈ ಪ್ರಮಾಣವನ್ನು ಮಾಡಿದನು: “ದೇವರು ನನ್ನ ಸಂಗಡವಿದ್ದು ನಾನು ಹೋದಲ್ಲೆಲ್ಲ ನನ್ನನ್ನು ಕಾಪಾಡಿ ಊಟಕ್ಕೆ ಆಹಾರವನ್ನೂ, ಉಡಲು ಬಟ್ಟೆಗಳನ್ನೂ ಕೊಟ್ಟು,


ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.


ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.


ನೀನು ದೇವರಿಗೆ ಹರಕೆ ಮಾಡುವ ಮೊದಲೇ ಎಚ್ಚರಿಕೆಯಿಂದ ಯೋಚಿಸು. ಹರಕೆ ಮಾಡಿದ ಮೇಲೆ ಹರಕೆ ಮಾಡಬಾರದಾಗಿತ್ತು ಎಂದು ಹೇಳಬೇಡ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು