ಪ್ರಸಂಗಿ 5:8 - ಪರಿಶುದ್ದ ಬೈಬಲ್8 ದೇಶದಲ್ಲಿ ಬಡವರಿಂದ ಬಲವಂತ ಸೇವೆಮಾಡಿಸುವುದನ್ನು ಕಂಡು ಅವರಿಗೆ ಅನ್ಯಾಯವಾಗಿದೆಯೆಂದೂ ಹಕ್ಕಿಗೆ ಚ್ಯುತಿಯಾಗಿದೆಯೆಂದೂ ಆಶ್ಚರ್ಯಪಡಬೇಡಿ. ಅವರಿಂದ ಬಲವಂತವಾಗಿ ದುಡಿಸುವ ಅಧಿಪತಿಗೆ ಬಲವಂತದಿಂದ ದುಡಿಸುವ ಮತ್ತೊಬ್ಬ ಅಧಿಪತಿಯಿರುವನು. ಈ ಇಬ್ಬರು ಅಧಿಪತಿಗಳಿಗೂ ಮತ್ತೊಬ್ಬ ಅಧಿಪತಿಯಿರುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ, ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಹೆಚ್ಚಿನ ಅಧಿಕಾರವುಳ್ಳವನಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಸಂಸ್ಥಾನದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯಗಳ ನಾಶನವನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ; ಉನ್ನತೋನ್ನತನು ಲಕ್ಷ್ಯಕ್ಕೆ ತರುವನು; ಆ ಹಿಂಸಕರಿಗಿಂತ ಮಹೋನ್ನತನು ಇದ್ದಾನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ದೇಶದಲ್ಲಿ ಬಡವರ ಹಿಂಸೆಯನ್ನೂ ನೀತಿನ್ಯಾಯ ನಿರಾಕರಿಸಿದ್ದನ್ನೂ ನೀನು ನೋಡಿದರೆ, ಆಶ್ಚರ್ಯಪಡಬೇಡ. ಏಕೆಂದರೆ ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬನಿದ್ದಾನೆ. ಅವರಿಬ್ಬರ ಮೇಲೆ ಮತ್ತೊಬ್ಬ ಉನ್ನತ ಅಧಿಕಾರಿಗಳು ಇದ್ದಾರೆ. ಅಧ್ಯಾಯವನ್ನು ನೋಡಿ |
ಆಗ ನಾನು ನಿಮ್ಮ ಬಳಿಗೆ ಬಂದು ಯೋಗ್ಯವಾದ ಕಾರ್ಯವನ್ನು ಮಾಡುವೆನು. ದುಷ್ಟ ಕ್ರಿಯೆಗಳನ್ನು ಮಾಡಿದ ಜನರ ಬಗ್ಗೆ ನ್ಯಾಯಾಧೀಶರೊಡನೆ ದೂರು ಹೇಳುವ ಮನುಷ್ಯನಂತಿರುವೆನು. ಕೆಲವರು ಮಾಟಮಂತ್ರ ಮಾಡುವರು; ಕೆಲವರು ವ್ಯಭಿಚಾರ ಮಾಡುವರು; ಕೆಲವರು ಸುಳ್ಳು ವಾಗ್ದಾನಗಳನ್ನು ಮಾಡುವರು; ಕೆಲವರು ಕೂಲಿಯಾಳುಗಳಿಗೆ ಹೇಳಿದ ಕೂಲಿಯನ್ನು ಕೊಡದೆ ಅವರಿಗೆ ಮೋಸಮಾಡುವರು. ಜನರು ವಿಧವೆಯರಿಗೂ ಅನಾಥರಿಗೂ ಸಹಾಯ ಮಾಡುವದಿಲ್ಲ. ಪರದೇಶಿಗಳಿಗೆ ಸಹಾಯ ಮಾಡುವದಿಲ್ಲ. ನನಗೆ ಗೌರವ ಸಲ್ಲಿಸುವದಿಲ್ಲ.” ಇದು ಸರ್ವಶಕ್ತನಾದ ಯೆಹೋವನ ನುಡಿ.
ದೇವರು ಉನ್ನತಸ್ಥಾನದಲ್ಲಿ ಎತ್ತಲ್ಪಟ್ಟಿದ್ದಾನೆ. ಆತನು ಸದಾಕಾಲ ಜೀವಿಸುತ್ತಾನೆ. ಆತನ ಹೆಸರು ಪರಿಶುದ್ಧವಾದದ್ದು. ದೇವರು ಹೇಳುವುದೇನೆಂದರೆ, “ನಾನು ಉನ್ನತಲೋಕವೆಂಬ ಪವಿತ್ರಸ್ಥಳದಲ್ಲಿ ವಾಸಿಸುತ್ತೇನೆ. ಅದೇ ಸಮಯದಲ್ಲಿ ದುಃಖಪಡುವವರೂ ದೀನರೂ ಆಗಿರುವ ಜನರೊಂದಿಗೆ ವಾಸಮಾಡುತ್ತೇನೆ. ಆತ್ಮದಲ್ಲಿ ದೀನರಾಗಿರುವವರಿಗೆ ನಾನು ಹೊಸಜನ್ಮ ಕೊಡುತ್ತೇನೆ. ಹೃದಯದಲ್ಲಿ ದುಃಖಿಸುವವರಿಗೆ ನಾನು ಹೊಸ ಜೀವ ಕೊಡುತ್ತೇನೆ.
ಮರುಭೂಮಿಯಲ್ಲಿಯೂ ಬುರುಜುಗಳನ್ನು ಕಟ್ಟಿಸಿದನು; ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ಬಯಲಿನಲ್ಲಿಯೂ ಬೆಟ್ಟಪ್ರದೇಶಗಳಲ್ಲಿಯೂ ಅಸಂಖ್ಯಾತ ಪಶುಗಳಿದ್ದವು. ಪರ್ವತ ಪ್ರಾಂತ್ಯಗಳಲ್ಲಿ ಮತ್ತು ಬೇರೆ ಸ್ಥಳಗಳಲ್ಲಿ ಹುಲುಸಾದ ಬೆಳೆಯನ್ನು ಬೆಳೆಯಿಸಿದನು. ಬಯಲುಗಳಲ್ಲಿ ಕೆಲಸಮಾಡಲು ಅವನು ರೈತರನ್ನು ಕೂಲಿಗೆ ನೇಮಿಸಿಕೊಂಡನು; ಬೆಟ್ಟಗಳಲ್ಲಿಯೂ ಕಾರ್ಮೆಲಿನಲ್ಲಿಯೂ ಇದ್ದ ತನ್ನ ದ್ರಾಕ್ಷಿತೋಟಗಳನ್ನು ನೋಡಿಕೊಳ್ಳಲು ಕೆಲಸಗಾರರನ್ನು ಕೂಲಿಗೆ ತೆಗೆದುಕೊಂಡನು.