ಪ್ರಸಂಗಿ 5:9 - ಪರಿಶುದ್ದ ಬೈಬಲ್9 ರಾಜನು ಸಹ ಸೇವಕನಾಗಿದ್ದಾನೆ; ಅವನ ದೇಶವು ಅವನನ್ನು ಗಳಿಸಿಕೊಂಡಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಭೂಮಿಯಿಂದ ಎಲ್ಲರಿಗೂ ಲಾಭವಿದೆ ಮತ್ತು ಹೊಲಗದ್ದೆಗಳಿಂದ ರಾಜನಿಗೆ ಲಾಭವಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 :ಸಾರ್ವಜನಿಕ ಒಳಿತು,” “ಅಧಿಪತಿಗಳ ಸೇವೆ” ಎಂದೆಲ್ಲ ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಭೂವಿುಯಿಂದ ಸರ್ವಕ್ಕೂ ಲಾಭವಿದೆ. ಹೊಲಗದ್ದೆಗಳಿಂದ ರಾಜನಿಗೂ ಸೇವೆಯಾಗುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಭೂಮಿಯಿಂದ ಲಾಭವು ಎಲ್ಲರಿಗೂ ಇದೆ. ಹೊಲಗದ್ದೆಗಳಿಂದ ಅರಸನಿಗೂ ಲಾಭವಿದೆ. ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.