ಪ್ರಸಂಗಿ 6:10 - ಪರಿಶುದ್ದ ಬೈಬಲ್10-11 ಮನುಷ್ಯನು ಕೇವಲ ಮನುಷ್ಯನಾಗಿ ಸೃಷ್ಟಿಸಲ್ಪಟ್ಟಿದ್ದಾನೆ. ಅದರ ಬಗ್ಗೆ ವಾದಮಾಡುವುದರಿಂದ ಉಪಯೋಗವಿಲ್ಲ. ಅಲ್ಲದೆ ಮನುಷ್ಯನು ದೇವರೊಂದಿಗೆ ವಾದಮಾಡಲಾರನು. ಯಾಕೆಂದರೆ ದೇವರು ಮನುಷ್ಯನಿಗಿಂತಲೂ ಬಲಿಷ್ಠನಾಗಿದ್ದಾನೆ. ಆದ್ದರಿಂದ ವಾದವು ಕೇವಲ ನಿರರ್ಥಕವಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಈಗ ಇರುವ ಪ್ರತಿಯೊಂದು ಹಿಂದಿನಿಂದಲೇ ಹೆಸರುವಾಸಿಯಾಗಿದೆ. ಮನುಷ್ಯನು ಯಾರೆಂದು ಗೊತ್ತಿದೆ. ತನಗಿಂತ ಬಲಿಷ್ಠನ ಸಂಗಡ ವಾದಿಸಲು ಅವನಿಂದಾಗದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಮನುಷ್ಯನು ಎಂಥವನಾದರೂ ಪೂರ್ವದಲ್ಲಿ ಅವನಿಗೆ ವಿಧಿಸಲ್ಪಟ್ಟ ಹೆಸರಿನಿಂದ ಅವನು ಮಣ್ಣಿನವನೇ ಎಂದು ಗೊತ್ತಾಗಿದೆ. ತನಗಿಂತ ಬಲಿಷ್ಠನ ಸಂಗಡ ಹೋರಾಡಲಾರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಜಗತ್ತಿನಲ್ಲಿ ಇರುವ ಎಲ್ಲದಕ್ಕೂ ಈಗಾಗಲೇ ಹೆಸರನ್ನು ಇಡಲಾಗಿದೆ. ಮನುಷ್ಯನು ಯಾರು ಎಂದೂ ಗೊತ್ತಾಗಿದೆ. ತನಗಿಂತ ಬಲಿಷ್ಟನೊಂದಿಗೆ ಯಾರೂ ಹೋರಾಡುವುದಿಲ್ಲ. ಅಧ್ಯಾಯವನ್ನು ನೋಡಿ |
“ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”