Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:2 - ಪರಿಶುದ್ದ ಬೈಬಲ್‌

2 ದೇವರು ಒಬ್ಬನಿಗೆ ಐಶ್ವರ್ಯವನ್ನು, ಆಸ್ತಿಪಾಸ್ತಿಯನ್ನು ಮತ್ತು ಘನತೆಯನ್ನು ಕೊಡುವನು. ಅವನು ತನಗೆ ಈಗ ಬೇಕಾಗಿರುವ ಮತ್ತು ಮುಂದೆ ಬೇಕಾಗುವ ಎಲ್ಲವನ್ನೂ ಹೊಂದಿರುವನು. ಆದರೆ ಅವುಗಳನ್ನು ಅನುಭವಿಸಲು ದೇವರು ಅವನಿಗೆ ಅವಕಾಶಕೊಡುವುದಿಲ್ಲ. ಮತ್ತೊಬ್ಬನು ಬಂದು ಎಲ್ಲವನ್ನೂ ತೆಗೆದುಕೊಳ್ಳುವನು. ಇದು ಸಹ ತುಂಬ ಕೆಟ್ಟದ್ದೂ ಅರ್ಥವಿಲ್ಲದ್ದೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದೇನೆಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನವನ್ನು, ಸಂಪತ್ತನ್ನು ಹಾಗು ಘನತೆಯನ್ನು ಅನುಗ್ರಹಿಸುವನು. ಆದರೆ ಅದನ್ನು ಅನುಭವಿಸುವುದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವುದಿಲ್ಲ. ಅದನ್ನು ಮತ್ತೊಬ್ಬನು ಅನುಭವಿಸುವನು. ಇದು ಸಹ ವ್ಯರ್ಥವೂ, ದುಃಖಕರವಾದ ಕೆಟ್ಟತನವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಏನಂದರೆ ದೇವರು ಒಬ್ಬನಿಗೆ ಯಾವ ಇಷ್ಟಾರ್ಥಕ್ಕೂ ಕೊರತೆಯಿಲ್ಲದಂತೆ ಧನಸಂಪತ್ತನ್ನೂ ಘನತೆಯನ್ನೂ ಅನುಗ್ರಹಿಸುವನು; ಆದರೆ ಅದನ್ನು ಅನುಭವಿಸುವದಕ್ಕೆ ದೇವರು ಅವನನ್ನು ಶಕ್ತಿಗೊಳಿಸುವದಿಲ್ಲ; ಅದನ್ನು ಮತ್ತೊಬ್ಬನು ಅನುಭವಿಸುವನು; ಇದು ಸಹ ವ್ಯರ್ಥವೂ ದೊಡ್ಡ ರೋಗವೂ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದೇನೆಂದರೆ, ಮನುಷ್ಯನು ಹೃದಯದಲ್ಲಿ ಬಯಸಿದ್ದನ್ನು ಕೊರತೆಯಾಗದಂತೆ ದೇವರು ಅವನಿಗೆ ಧನ, ಐಶ್ವರ್ಯ, ಸನ್ಮಾನವನ್ನು ಕೊಡುತ್ತಾರೆ. ಆದರೆ ಅದನ್ನು ಅನುಭವಿಸುವಂತೆ ದೇವರು ಸಾಮರ್ಥ್ಯವನ್ನು ಕೊಡುವುದಿಲ್ಲ. ಆದುದರಿಂದ ಪರರು ಅದನ್ನು ಅನುಭವಿಸುತ್ತಾರೆ. ಇದು ವ್ಯರ್ಥವೂ ವ್ಯಸನಕರವಾದ ಕೇಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:2
24 ತಿಳಿವುಗಳ ಹೋಲಿಕೆ  

ದೇವರು ಒಬ್ಬನಿಗೆ ಐಶ್ವರ್ಯವನ್ನೂ ಆಸ್ತಿಯನ್ನೂ ಮತ್ತು ಅವುಗಳನ್ನು ಅನುಭವಿಸುವ ಭಾಗ್ಯವನ್ನೂ ಕೊಟ್ಟಿದ್ದರೆ ಅವನು ಅವುಗಳನ್ನು ಅನುಭವಿಸಲಿ. ಅವನು ತನಗಿರುವಂಥವುಗಳನ್ನು ಹೊಂದಿಕೊಂಡು ತನ್ನ ದುಡಿಮೆಯಲ್ಲಿ ಸಂತೋಷಿಸಲಿ. ಅದು ದೇವರ ಅನುಗ್ರಹವಷ್ಟೇ.


ಯೆಹೋವನೇ, ಈ ಲೋಕಕ್ಕಾಗಿಯೇ ಜೀವಿಸುವ ಜನರಿಂದ ನನ್ನನ್ನು ತಪ್ಪಿಸಿ ಕಾಪಾಡು. ನಿನ್ನ ಸಹಾಯಕ್ಕಾಗಿ ಮೊರೆಯಿಡುವ ಅನೇಕರು ಕೊರತೆಯಲ್ಲಿದ್ದಾರೆ. ಅವರಿಗೆ ಆಹಾರವನ್ನು ಹೇರಳವಾಗಿ ದಯಪಾಲಿಸು. ಅವರ ಮಕ್ಕಳಿಗೂ ಮೊಮ್ಮಕ್ಕಳಿಗೂ ಬೇಕಾದದ್ದನ್ನೆಲ್ಲಾ ಒದಗಿಸಿಕೊಡು.


ಅವರ ಕಣ್ಣುಗಳು ಕೊಬ್ಬಿವೆ; ಅವರ ಮನಸ್ಸು ದುಷ್ಕಲ್ಪನೆಗಳಿಂದ ತುಂಬಿತುಳುಕುತ್ತದೆ.


ನೀನು ಕೇಳದೆಹೋದ ಬಿನ್ನಹಗಳನ್ನು ನಾನು ನಿನಗೆ ಅನುಗ್ರಹಿಸುತ್ತೇನೆ. ನಿನ್ನ ಜೀವವಿರುವವರೆಗೆ ನೀನು ಶ್ರೀಮಂತನಾಗಿದ್ದು ಘನಮಾನವನ್ನು ಹೊಂದುವಿ. ಪ್ರಪಂಚದಲ್ಲಿ ನಿನ್ನಂತಹ ಉನ್ನತವಾದ ಬೇರೊಬ್ಬ ರಾಜನು ಇರುವುದಿಲ್ಲ.


ನಮ್ಮ ದೇಶವು ಬೇರೆ ಜನಾಂಗಗಳವರ ಪಾಲಾಗಿದೆ. ನಮ್ಮ ಮನೆಗಳು ಪರದೇಶಿಗಳಿಗೆ ಕೊಡಲ್ಪಟ್ಟಿವೆ.


ನಮ್ಮ ಜೀವಿತವು ಕೇವಲ ಕನ್ನಡಿಯ ಪ್ರತಿಬಿಂಬದಂತಿದೆ. ನಾವು ಗಡಿಬಿಡಿಯಿಂದ ಆಸ್ತಿಯನ್ನು ಕೂಡಿಸಿಟ್ಟುಕೊಳ್ಳುತ್ತೇವೆ. ನಾವು ಸತ್ತ ಮೇಲೆ ಅವು ಯಾರ ಪಾಲಾಗುವುದೋ ನಮಗೆ ತಿಳಿಯದು.


ಅನ್ಯರು ಎಫ್ರಾಯೀಮನ ಶಕ್ತಿಯನ್ನು ಮುರಿಯುವರು. ಆದರೆ ಅವನಿಗೆ ಅದು ತಿಳಿದಿರುವದಿಲ್ಲ. ಎಫ್ರಾಯೀಮನ ತಲೆಯಲ್ಲಿ ನರೆಕೂದಲು ಬಂದಾಗ್ಯೂ ಅದಕ್ಕೆ ತಿಳಿವಳಿಕೆ ಬಂದಿರುವುದಿಲ್ಲ.


“ರಾಜನೇ, ಮಹೋನ್ನತನಾದ ದೇವರು ನಿನ್ನ ತಂದೆಯಾದ ನೆಬೂಕದ್ನೆಚ್ಚರನನ್ನು ಮಹಾ ದೊಡ್ಡ ರಾಜನನ್ನಾಗಿಯೂ ಬಲಿಷ್ಠನಾದ ರಾಜನನ್ನಾಗಿಯೂ ಪ್ರಮುಖನಾದ ರಾಜನನ್ನಾಗಿಯೂ ಮಾಡಿದ್ದನು.


ಅದು ಸಹ ತುಂಬ ದುಃಖಕರ. ಅವನು ಬಂದ ರೀತಿಯಲ್ಲಿಯೇ ಈ ಲೋಕವನ್ನು ಬಿಟ್ಟುಹೋಗುವನು. “ಗಾಳಿಯನ್ನು ಹಿಂದಟ್ಟುವುದರಿಂದ” ಅವನಿಗಾಗುವ ಪ್ರಯೋಜನವೇನು?


ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.


ಆಮೇಲೆ ನಾನು, “ಜನರು ಪ್ರಯಾಸಪಟ್ಟು ಕೆಲಸ ಮಾಡುವುದೇಕೆ?” ಎಂದು ಆಲೋಚಿಸಿದೆ. ಜನರು ಏಳಿಗೆ ಹೊಂದಲು ಮತ್ತು ಬೇರೆಯವರಿಗಿಂತ ಹೆಚ್ಚು ಅಭಿವೃದ್ಧಿಯಾಗಲು ಪ್ರಯತ್ನಿಸುವರು; ಅದಕ್ಕೆ ಅವರ ಮತ್ಸರವೇ ಕಾರಣ. ಇದೂ ಗಾಳಿಯನ್ನು ಹಿಂದಟ್ಟಿದ್ದ ಹಾಗೆ ವ್ಯರ್ಥ.


ಆಗ ದೇವರು ಸೊಲೊಮೋನನಿಗೆ, “ನಿನ್ನ ಕೋರಿಕೆ ಒಳ್ಳೆಯದಾಗಿದೆ. ನೀನು ಐಶ್ವರ್ಯವನ್ನಾಗಲಿ ಗೌರವವನ್ನಾಗಲಿ ಬೆಳ್ಳಿಬಂಗಾರಗಳನ್ನಾಗಲಿ ಕೇಳಲಿಲ್ಲ. ನಿನ್ನ ವೈರಿಗಳನ್ನು ನಿರ್ಮೂಲ ಮಾಡುವಂತಾಗಲಿ ಅಥವಾ ನಿನಗೆ ದೀರ್ಘಾಯುಷ್ಯವನ್ನು ಕೊಡು ಎಂದಾಗಲಿ ನೀನು ಕೇಳಿಕೊಳ್ಳದೆ ರಾಜ್ಯವನ್ನು ನ್ಯಾಯವಾಗಿ ಆಳಲು ಬೇಕಾದ ಜ್ಞಾನವಿವೇಕಗಳನ್ನು ಕೇಳಿಕೊಂಡೆ. ನಾನು ಆರಿಸಿಕೊಂಡಿರುವ ಜನಾಂಗದ ಮೇಲೆ ಆಡಳಿತ ನಡಿಸುವಾಗ ಯೋಗ್ಯವಾದ ಸಲಹೆ ಕೊಡುವಂತೆ ಜ್ಞಾನವನ್ನು ಕೇಳಿರುತ್ತೀ.


ಅವನು ಬಹಳ ಮುದುಕನಾಗಿ ಸತ್ತನು. ಅವನ ದೀರ್ಘಾಯುಷ್ಯದಲ್ಲಿ ಹೆಚ್ಚಾದ ಗೌರವ ಸನ್ಮಾನಗಳು ದೊರೆತವು. ಅವನ ನಂತರ ಮಗನಾದ ಸೊಲೊಮೋನನು ಅರಸನಾದನು.


ಯೆಹೋವನು ಸೊಲೊಮೋನನನ್ನು ಆಶೀರ್ವದಿಸಿ ಅಭಿವೃದ್ಧಿಪಡಿಸಿದನು. ಇಸ್ರೇಲಿನಲ್ಲಿದ್ದ ಯಾವ ಅರಸನಿಗೂ ಸೊಲೊಮೋನನಿಗಿದ್ದಷ್ಟು ಗೌರವವೂ ವೈಭವವೂ ಇರಲಿಲ್ಲ.


ನೀವು ಆ ಸ್ಥಳಕ್ಕೆ ಬಂದಮೇಲೆ ಅಲ್ಲಿ ಸಾಕಷ್ಟು ಭೂಮಿ ಇದೆ ಎಂಬುದನ್ನು ಅರಿತುಕೊಳ್ಳುತ್ತೀರಿ. ಅಲ್ಲಿ ಎಲ್ಲವೂ ಸಮೃದ್ಧಿಕರವಾಗಿದೆ. ಅಲ್ಲಿಯ ಜನರಿಗೆ ಶತ್ರುಗಳು ಧಾಳಿ ಮಾಡಬಹುದೆಂಬ ಭಯವೇ ಇಲ್ಲ. ಖಂಡಿತವಾಗಿಯೂ ದೇವರು ಆ ಭೂಮಿಯನ್ನು ನಮಗೆ ಕೊಟ್ಟಿದ್ದಾನೆ” ಎಂದು ಉತ್ತರಿಸಿದರು.


ನಿಮ್ಮ ಮಧ್ಯದಲ್ಲಿ ವಾಸಿಸುವ ಅನ್ಯರು ಬಲಿಷ್ಠರಾಗುವರು. ನೀವಾದರೋ ಬಲಹೀನರಾಗುವಿರಿ.


“ನೀವು ಅರಿಯದಿರುವ ದೇಶದವರು ಬಂದು ನಿಮ್ಮ ಪೈರನ್ನು ಕೊಯ್ದುಕೊಂಡು ಹೋಗುವರು; ನೀವು ದುಡಿದು ಸಂಪಾದಿಸಿದವುಗಳನ್ನು ಎತ್ತಿಕೊಂಡು ಹೋಗುವರು. ಜನರು ನಿಮ್ಮನ್ನು ಕುಗ್ಗಿಸಿ ಬಲಹೀನರನ್ನಾಗಿ ಮಾಡುವರು.


ಈ ಲೋಕದಲ್ಲಿ ದುರ್ಗತಿಯೊಂದನ್ನು ನೋಡಿದ್ದೇನೆ. ಒಬ್ಬನು ತನ್ನ ಭವಿಷ್ಯತ್ತಿಗಾಗಿ ಹಣವನ್ನು ಕೂಡಿಡುತ್ತಾನೆ.


ಆಹಾರವಲ್ಲದ್ದಕ್ಕಾಗಿ ಹಣವನ್ನು ಯಾಕೆ ವೆಚ್ಚ ಮಾಡುತ್ತೀರಿ? ತೃಪ್ತಿಗೊಳಿಸದ ಆಹಾರಕ್ಕಾಗಿ ನೀವು ಯಾಕೆ ಶ್ರಮಿಸುತ್ತೀರಿ? ಗಮನವಿಟ್ಟು ಕೇಳಿರಿ. ನೀವು ಒಳ್ಳೆಯ ಆಹಾರವನ್ನು ತಿನ್ನುವಿರಿ; ನಿಮ್ಮ ಊಟದಲ್ಲಿ ಆನಂದಿಸುವಿರಿ. ಅವು ನಿಮ್ಮ ಆತ್ಮವನ್ನು ತೃಪ್ತಿಗೊಳಿಸುತ್ತವೆ.


ನಾನು ಕಂಡುಕೊಂಡದ್ದೇನೆಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು