Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:3 - ಪರಿಶುದ್ದ ಬೈಬಲ್‌

3 ಒಬ್ಬನು ಬಹುಕಾಲ ಬದುಕಬಹುದು. ಅವನಿಗೆ ನೂರು ಮಂದಿ ಮಕ್ಕಳಿರಬಹುದು. ಆದರೆ ಅವನಿಗೆ ಸುಖತೃಪ್ತಿಯೂ ಸತ್ತ ಮೇಲೆ ಉತ್ತರಕ್ರಿಯೆಯೂ ಇಲ್ಲದಿದ್ದರೆ ಹುಟ್ಟುವಾಗಲೇ ಸಾಯುವ ಮಗು ಅವನಿಗಿಂತಲೂ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹಳ ವರ್ಷ ಬದುಕಿದವನಿಗೆ ಸಂತೃಪ್ತಿಯೂ, ಉತ್ತರಕ್ರಿಯೆಯೂ ಇಲ್ಲದಿದ್ದರೆ, ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಒಬ್ಬನು ನೂರಾರು ಮಕ್ಕಳನ್ನು ಪಡೆಯಬಹುದು, ಹಣ್ಣುಹಣ್ಣು ಮುದುಕನಾಗುವ ತನಕ ಬದುಕಬಹುದು. ಆದರೆ ಜೀವನದಲ್ಲಿ ಸುಖಾನುಭವ ಇಲ್ಲದೆ, ಉತ್ತರಕ್ರಿಯೆಯೂ ಇಲ್ಲದೆಹೋದರೆ ಏನು ಪ್ರಯೋಜನ? ಅವನಿಗಿಂತ ಗರ್ಭಸ್ರಾವದ ಪಿಂಡವೇ ಮೇಲು ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೂರಾರು ಮಕ್ಕಳನ್ನು ಪಡೆದು ಮುಪ್ಪಿನ ಮುದುಕನಾಗುವ ತನಕ ಬಹು ವರುಷ ಬದುಕಿದವನಿಗೆ ಸುಖ ತೃಪ್ತಿಯೂ ಉತ್ತರಕ್ರಿಯೆಯೂ ಇಲ್ಲದಿದ್ದರೆ ಇವನಿಗಿಂತಲೂ ಗರ್ಭಸ್ರಾವದ ಪಿಂಡವೇ ಉತ್ತಮ ಅಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಒಬ್ಬ ಮನುಷ್ಯನಿಗೆ ನೂರು ಮಕ್ಕಳಿರಬಹುದು ಮತ್ತು ಅವನು ಬಹಳ ವರ್ಷ ಬದುಕಿರಬಹುದು. ಅವನು ತನ್ನ ಐಶ್ವರ್ಯವನ್ನು ಅನುಭವಿಸದೆ, ಸರಿಯಾದ ಶವಸಂಸ್ಕಾರ ಇಲ್ಲದೆ ಹೋದರೆ ಅವನಿಗಿಂತಲೂ ಮೃತ ಸ್ಧಿತಿಯಲ್ಲಿ ಹುಟ್ಟಿರುವ ಕೂಸೇ ಮೇಲು ಎಂದುಕೊಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:3
23 ತಿಳಿವುಗಳ ಹೋಲಿಕೆ  

ನಾನು ಮಗುವಾಗಿ ಹುಟ್ಟುವಾಗಲೇ ಸತ್ತು ನೆಲದಲ್ಲಿ ಸಮಾಧಿಯಾಗಲಿಲ್ಲವೇಕೆ? ಹಗಲಿನ ಬೆಳಕನ್ನು ಎಂದೂ ಕಂಡಿಲ್ಲದ ಮಗುವಿನಂತೆ ನಾನಿರಬೇಕಿತ್ತು.


ಜೆರುಸಲೇಮಿನ ಜನರು ಯೆಹೋಯಾಕೀಮನನ್ನು ಒಂದು ಕತ್ತೆಯನ್ನು ಹೂಳಿದಂತೆ ಹೂಳಿಬಿಡುತ್ತಾರೆ. ಅವರು ಅವನ ಶವವನ್ನು ದೂರ ಎಳೆದುಕೊಂಡು ಹೋಗುತ್ತಾರೆ. ಅವನ ಶವವನ್ನು ಜೆರುಸಲೇಮಿನ ದ್ವಾರಗಳ ಹೊರಗೆ ಎಸೆದುಬಿಡುತ್ತಾರೆ.


ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ.


ಈಜೆಬೆಲಳನ್ನು ಸಮಾಧಿಮಾಡಲು ಜನರು ಹೋದರು. ಆದರೆ ಅವರಿಗೆ ಅವಳ ದೇಹವು ಸಿಗಲಿಲ್ಲ. ಅವರಿಗೆ ಅವಳ ತಲೆಬುರುಡೆ, ಕೈಕಾಲುಗಳು ಮಾತ್ರ ಸಿಕ್ಕಿದವು.


ಯಾಕೋಬನು ಫರೋಹನಿಗೆ, “ನಾನು ನನ್ನ ಅಲ್ಪಕಾಲದ ಜೀವನದಲ್ಲಿ ಅನೇಕ ತೊಂದರೆಗಳನ್ನು ಅನುಭವಿಸಿದೆನು. ಈಗ ನನಗೆ ನೂರಮೂವತ್ತು ವರ್ಷ. ನನ್ನ ತಂದೆಯೂ ಅವನ ಪೂರ್ವಿಕರೂ ನನಗಿಂತ ಹೆಚ್ಚು ವರ್ಷ ಜೀವಿಸಿದರು” ಎಂದು ಹೇಳಿದನು.


ಪವಿತ್ರ ಗ್ರಂಥದಲ್ಲಿ ಬರೆದಿರುವ ಪ್ರಕಾರ ಮನುಷ್ಯಕುಮಾರನು ಹೊರಟುಹೋಗಿ ಮರಣ ಹೊಂದುತ್ತಾನೆ. ಆದರೆ ಆತನನ್ನು ಕೊಲ್ಲಲು ಒಪ್ಪಿಸುವವನಿಗೆ ಬಹಳ ಕೇಡಾಗುತ್ತದೆ. ಅವನು ಹುಟ್ಟದೆ ಇದ್ದಿದ್ದರೆ ಎಷ್ಟೋ ಚೆನ್ನಾಗಿತ್ತು!” ಎಂದು ಹೇಳಿದನು.


ಇಗೋ ಯೆಹೂದದ ರಾಜನಾದ ಯೆಹೋಯಾಕೀಮನ ಬಗ್ಗೆ ಯೆಹೋವನು ಹೀಗೆ ಹೇಳುತ್ತಾನೆ: ಯೆಹೋಯಾಕೀಮನ ಸಂತಾನದವರು ದಾವೀದನ ಸಿಂಹಾಸನದ ಮೇಲೆ ಕುಳಿತುಕೊಳ್ಳಲಾಗದು. ಯೆಹೋಯಾಕೀಮನು ಸತ್ತರೆ ರಾಜ ಮರ್ಯಾದೆಯಿಂದ ಅವನ ಶವಸಂಸ್ಕಾರ ಮಾಡಲಾಗುವದಿಲ್ಲ. ಅವನ ಶವವನ್ನು ನೆಲದ ಮೇಲೆ ಎಸೆಯಲಾಗುವುದು. ಅವನ ಶವ ಹಗಲಿನ ತಾಪದಲ್ಲಿ ಮತ್ತು ರಾತ್ರಿಯ ಚಳಿಯಲ್ಲಿ ಹೊರಗೆ ಬಿದ್ದಿರುವದು.


ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.


ಮೊಮ್ಮಕ್ಕಳು ವೃದ್ಧರಿಗೆ ಸಂತೋಷ. ಮಕ್ಕಳಿಗೆ ತಮ್ಮ ತಂದೆತಾಯಿಗಳ ಬಗ್ಗೆ ಹೆಮ್ಮೆ.


ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ.


ಮೊರ್ದೆಕೈಗೋಸ್ಕರ ಸಿದ್ಧಮಾಡಿದ್ದ ಗಲ್ಲುಮರಕ್ಕೆ ಸೇವಕರು ಹಾಮಾನನನ್ನು ತೂಗುಹಾಕಿದರು. ಅನಂತರ ರಾಜನ ಸಿಟ್ಟು ಇಳಿಯಿತು.


ತನ್ನ ಸಂಪತ್ತಿನ ವಿಷಯ ಕೊಚ್ಚಿಗೊಂಡನು. ತನ್ನ ಸ್ನೇಹಿತರಲ್ಲಿ ತನ್ನ ಮಕ್ಕಳ ವಿಚಾರವಾಗಿ ಹೆಗ್ಗಳಿಕೆಯಿಂದ ಮಾತಾಡುತ್ತಿದ್ದನು. ಮಾತ್ರವಲ್ಲದೆ ಅರಸನು ತನ್ನನ್ನು ಅತ್ಯುನ್ನತ ಸ್ಥಾನಕ್ಕೆ ಏರಿಸಿ ಇತರ ಎಲ್ಲಾ ನಾಯಕರುಗಳ ಮೇಲೆ ನೇಮಿಸಿದನು.


ರೆಹಬ್ಬಾಮನು ತನ್ನ ಬೇರೆ ಪತ್ನಿಯರಿಗಿಂತಲೂ ಉಪಪತ್ನಿಯರಿಗಿಂತಲೂ ಮಾಕಳನ್ನು ಹೆಚ್ಚಾಗಿ ಪ್ರೀತಿಸಿದನು. ಮಾಕಳು ಅಬ್ಷಾಲೋಮನ ಮಗಳಾಗಿದ್ದಳು. ರೆಹಬ್ಬಾಮನಿಗೆ ಹದಿನೆಂಟು ಮಂದಿ ಪತ್ನಿಯರೂ ಅರವತ್ತು ಮಂದಿ ಉಪಪತ್ನಿಯರೂ ಇದ್ದರು. ಅವನಿಗೆ ಇಪ್ಪತ್ತೆಂಟು ಗಂಡುಮಕ್ಕಳೂ ಅರವತ್ತು ಹೆಣ್ಣುಮಕ್ಕಳೂ ಇದ್ದರು.


ಯೆಹೋವನು ನನಗೆ ಅನೇಕ ಮಕ್ಕಳನ್ನು ಕೊಟ್ಟನು. ಆ ಮಕ್ಕಳಲ್ಲಿ ಯೆಹೋವನು ಸೊಲೊಮೋನನನ್ನು ನನ್ನ ನಂತರ ಇಸ್ರೇಲರ ಅರಸನನ್ನಾಗಿ ಆರಿಸಿಕೊಂಡಿದ್ದಾನೆ. ಆದರೆ ನಿಜವಾಗಿಯೂ, ಇಸ್ರೇಲ್, ದೇವರಾದ ಯೆಹೋವನ ರಾಜ್ಯವಾಗಿದೆ.


ಸಮಾರ್ಯದಲ್ಲಿ ಅಹಾಬನಿಗೆ ಎಪ್ಪತ್ತು ಮಂದಿ ಮಕ್ಕಳಿದ್ದರು. ಯೇಹುವು ಇಜ್ರೇಲಿನ ನಾಯಕರಿಗೆ ಮತ್ತು ಅಧಿಕಾರಿಗಳಿಗೆ ಪತ್ರಗಳನ್ನು ಬರೆದು ಸಮಾರ್ಯಕ್ಕೆ ಕಳುಹಿಸಿದನು. ಅಹಾಬನ ಮಕ್ಕಳನ್ನು ಬೆಳೆಸಿದ ಪಾಲಕರಿಗೂ ಅವನು ಪತ್ರಗಳನ್ನು ಕಳುಹಿಸಿದನು. ಯೇಹುವು ಪತ್ರಗಳಲ್ಲಿ,


ಏಸಾವನು ಸ್ತ್ರೀಯರನ್ನು ಮತ್ತು ಮಕ್ಕಳನ್ನು ಕಣ್ಣೆತ್ತಿ ನೋಡಿ, “ನಿನ್ನೊಡನೆ ಇರುವ ಈ ಜನರು ಯಾರು?” ಎಂದು ಕೇಳಿದನು. ಯಾಕೋಬನು, “ದೇವರು ನನಗೆ ಕೊಟ್ಟ ಮಕ್ಕಳೇ ಇವರು. ದೇವರು ನನಗೆ ಒಳ್ಳೆಯವನಾಗಿದ್ದನು” ಎಂದು ಹೇಳಿದನು.


ಮಗುವು ಹುಟ್ಟುವಾಗಲೇ ಸತ್ತುಹೋದರೆ ಅದಕ್ಕೆ ನಿಜವಾಗಿಯೂ ಅರ್ಥವಿಲ್ಲ. ಅದು ಹೆಸರನ್ನೂ ಹೊಂದಿಲ್ಲದೆ ಕತ್ತಲೆಯ ಗುಂಡಿಯಲ್ಲಿ ಹೂಳಲ್ಪಡುವುದು.


ನಾನು ಹುಟ್ಟಿದಾಗಲೇ ಯಾಕೆ ಸಾಯಲಿಲ್ಲ? ತಾಯಿಯ ಗರ್ಭದಿಂದ ಬರುತ್ತಿರುವಾಗಲೇ ನಾನೇಕೆ ಸಾಯಲಿಲ್ಲ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು