Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 6:5 - ಪರಿಶುದ್ದ ಬೈಬಲ್‌

5 ಅದು ಸೂರ್ಯನನ್ನು ನೋಡಲೇ ಇಲ್ಲ. ಅದಕ್ಕೆ ತಿಳಿವಳಿಕೆಯೂ ಇಲ್ಲ. ಆದರೆ ದೇವರು ಅನುಗ್ರಹಿಸಿದವುಗಳಲ್ಲಿ ಸಂತೋಷಪಡದವನಿಗಿಂತ ಆ ಮಗುವೇ ಹೆಚ್ಚು ವಿಶ್ರಾಂತಿಯನ್ನು ಪಡೆದುಕೊಳ್ಳುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದು ಸೂರ್ಯನನ್ನು ಕಂಡಿಲ್ಲ. ಅದಕ್ಕೆ ತಿಳಿವಳಿಕೆಯೇ ಇಲ್ಲ. ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅದು ಸೂರ್ಯನನ್ನು ಕಂಡಿಲ್ಲ. ತಿಳುವಳಿಕೆಯೆಂಬುದು ಅದಕ್ಕೆ ಇಲ್ಲವೇ ಇಲ್ಲ. ಆದರೂ ಅದರ ನೆಮ್ಮದಿ ಸುಖಾನುಭವ ಇಲ್ಲದವನ ಪರಿಸ್ಥಿತಿಗಿಂತ ಮಿಗಿಲಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದು ಸೂರ್ಯನನ್ನು ಕಂಡಿಲ್ಲ, ಅದಕ್ಕೆ ತಿಳುವಳಿಕೆಯೇ ಇಲ್ಲ; ಆದರೂ ಅವನಿಗಿಂತ ಅದರ ಶಾಂತಿಯೇ ಹೆಚ್ಚು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇದಲ್ಲದೆ ಅದು ಸೂರ್ಯನನ್ನು ನೋಡಲಿಲ್ಲ, ಯಾವುದನ್ನು ಅರಿತಿರಲಿಲ್ಲ. ಆದರೂ ಅದು ಆ ಮನುಷ್ಯನಿಗಿಂತ ಹೆಚ್ಚು ವಿಶ್ರಾಂತಿ ಹೊಂದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 6:5
8 ತಿಳಿವುಗಳ ಹೋಲಿಕೆ  

ಬಸವನಹುಳಗಳು ದಾರಿಯಲ್ಲೇ ಕರಗಿಹೋಗುವಂತೆ ಅವರೂ ಕರಗಿಹೋಗಲಿ. ಗರ್ಭದಲ್ಲೇ ಸತ್ತುಹೋದ ಮಗುವಿನಂತೆ ಅವರು ಹಗಲನ್ನು ಕಾಣದಂತಾಗಲಿ.


ಯೋಬನು ಹೇಳಿದನು: “ನಾವು ಮನುಷ್ಯರಷ್ಟೇ. ನಮ್ಮ ಅಲ್ಪಜೀವಿತವು ಕಷ್ಟಗಳಿಂದ ತುಂಬಿಕೊಂಡಿದೆ.


ಮಗುವು ಹುಟ್ಟುವಾಗಲೇ ಸತ್ತುಹೋದರೆ ಅದಕ್ಕೆ ನಿಜವಾಗಿಯೂ ಅರ್ಥವಿಲ್ಲ. ಅದು ಹೆಸರನ್ನೂ ಹೊಂದಿಲ್ಲದೆ ಕತ್ತಲೆಯ ಗುಂಡಿಯಲ್ಲಿ ಹೂಳಲ್ಪಡುವುದು.


ಅವನು ಎರಡು ಸಾವಿರ ವರ್ಷಗಳ ಕಾಲ ಬದುಕಿಯೂ ಜೀವನದಲ್ಲಿ ಸಂತೋಷಪಡದಿದ್ದರೆ ಏನು ಪ್ರಯೋಜನ? ಆ ಮಗುವೂ ಅವನೂ ಕತ್ತಲೆ ಗುಂಡಿಗೇ ಹೋಗುವರು.


ಬೆಳಕು ಹಿತ! ಸೂರ್ಯನ ಬೆಳಕು ನೋಡಲು ಚೆಂದ.


ಹುಟ್ಟುವಾಗಲೇ ಸತ್ತು ಹೋದವರಿಗೆ ಒಳ್ಳೆಯದೇ ಆಯಿತು! ಯಾಕೆಂದರೆ ಈ ಲೋಕದಲ್ಲಿ ನಡೆಯುವ ಕೆಟ್ಟದ್ದನ್ನು ಅವರು ನೋಡಲೇ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು