ಪ್ರಸಂಗಿ 7:14 - ಪರಿಶುದ್ದ ಬೈಬಲ್14 ಸುಖದ ದಿನಗಳಲ್ಲಿ ಸಂತೋಷಿಸು. ದುಃಖದ ದಿನಗಳಲ್ಲಿ, ಸುಖದುಃಖಗಳನ್ನು ಕೊಡುವವನು ದೇವರೇ ಎಂಬುದನ್ನು ಜ್ಞಾಪಿಸಿಕೊ. ಮುಂದೆ ಏನಾಗುವುದೋ ಯಾರಿಗೂ ಗೊತ್ತಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಸುಖದ ದಿನದಲ್ಲಿ ಸುಖದಿಂದಿರು, ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವುದನ್ನೂ ಗ್ರಹಿಸಲಾರದಂತೆ, ದೇವರು ಇವುಗಳನ್ನು ಒಂದರ ಮೇಲೊಂದು ಬರಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಸುಖದ ದಿನದಲ್ಲಿ ಸುಖದಿಂದಿರು; ದುಃಖದ ದಿನದಲ್ಲಿ ಯೋಚಿಸು; ಮನುಷ್ಯನು ತನ್ನ ಕಾಲವಾದ ಮೇಲೆ ಸಂಭವಿಸುವ ಯಾವದನ್ನೂ ಗ್ರಹಿಸಲಾರದಂತೆ ದೇವರು ಇವುಗಳನ್ನು ದ್ವಂದ್ವ ಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಸುಖ ದಿನದಲ್ಲಿ ಸಂತೋಷವಾಗಿರು. ಆದರೆ ದುಃಖ ದಿನದಲ್ಲಿ ಇದನ್ನು ಯೋಚಿಸು: ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ. ಹೀಗೆ ಮನುಷ್ಯನು ತನ್ನ ಆಯುಸ್ಸನ್ನು ಕಳೆದ ಮೇಲೆ ಭವಿಷ್ಯವನ್ನು ಗ್ರಹಿಸಲಾರನು. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.
ಯೆಹೋವನು ನಿಮ್ಮನ್ನು ದೀನರನ್ನಾಗಿ ಮಾಡಿ ನಿಮಗೆ ಹಸಿವೆಯಾಗುವಂತೆ ಮಾಡಿದನು. ಆ ಬಳಿಕ ಮನ್ನದ ಮೂಲಕ ನಿಮ್ಮ ಹಸಿವೆಯನ್ನು ನೀಗಿದನು. ಇದರ ವಿಷಯವಾಗಿ ನೀವು ಹಿಂದೆಂದೂ ಕೇಳಿರಲಿಲ್ಲ. ನಿಮ್ಮ ಪೂರ್ವಿಕರೂ ನೋಡಿರಲಿಲ್ಲ. ಆತನು ಹೀಗೇಕೆ ಮಾಡಿದನು? ಯಾಕೆಂದರೆ ಕೇವಲ ರೊಟ್ಟಿ ತಿಂದ ಮಾತ್ರದಿಂದ ಮನುಷ್ಯರು ಬದುಕದೆ ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ಮಾತಿನಿಂದಲೇ ಬದುಕುವರೆಂಬುದನ್ನು ನೀವು ತಿಳಿಯಬೇಕೆಂದು ಹೀಗೆ ಮಾಡಿದನು.