ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.
“ಫರಿಸಾಯರೇ, ನಿಮ್ಮ ಗತಿಯನ್ನು ಏನು ಹೇಳಲಿ! ನೀವು ದೇವರಿಗೆ ನಿಮ್ಮಲ್ಲಿರುವ ಪ್ರತಿಯೊಂದರಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ನಿಮ್ಮ ತೋಟದಲ್ಲಿ ಬೆಳೆಯುವ ಮರುಗ, ಸದಾಪು ಮುಂತಾದ ಚಿಕ್ಕ ಸಸಿಗಳಲ್ಲಿಯೂ ಹತ್ತನೆಯ ಒಂದು ಭಾಗವನ್ನು ಕೊಡುತ್ತೀರಿ. ಆದರೆ ಬೇರೆಯವರಿಗೆ ನ್ಯಾಯತೋರಿಸುವುದನ್ನೂ ದೇವರನ್ನು ಪ್ರೀತಿಸುವುದನ್ನೂ ಮರೆತುಬಿಟ್ಟಿದ್ದೀರಿ. ನೀವು ಮೊದಲು ಇವುಗಳನ್ನು ಮಾಡಬೇಕು ಮತ್ತು ಉಳಿದವುಗಳನ್ನು ಕಡೆಗಣಿಸಬಾರದು.
“ನನ್ನನ್ನು ಹಿಂಬಾಲಿಸುವವರ ಮೇಲೆ ಸೂರ್ಯನ ಪ್ರಕಾಶದಂತೆ ಶುಭವು ಪ್ರಕಾಶಿಸುವದು. ಸೂರ್ಯನ ಕಿರಣಗಳಂತೆ ಅದು ಗುಣಪಡಿಸುವ ಶಕ್ತಿಯನ್ನು ಹೊಂದುವದು. ಕೊಟ್ಟಿಗೆಯಿಂದ ಬಿಟ್ಟ ಕರುಗಳಂತೆ ನೀವು ಸ್ವತಂತ್ರರಾಗಿಯೂ ಸಂತೋಷವಾಗಿಯೂ ಇರುವಿರಿ.
ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದ ತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು.
“‘ನಾನು ಇಸ್ರೇಲರ ಮತ್ತು ಯೆಹೂದ್ಯರ ಸಂಗಡ ಶಾಶ್ವತವಾದ ಒಂದು ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಈ ಒಡಂಬಡಿಕೆಗನುಸಾರವಾಗಿ ನಾನು ಅವರಿಗೆ ವಿಮುಖನಾಗುವುದೇ ಇಲ್ಲ. ನಾನು ಯಾವಾಗಲೂ ಅವರಿಗೆ ಒಳ್ಳೆಯವನಾಗಿರುತ್ತೇನೆ. ನನ್ನನ್ನು ಗೌರವಿಸಬೇಕೆಂಬ ಇಚ್ಛೆಯನ್ನು ಅವರಲ್ಲಿ ಬರಮಾಡುತ್ತೇನೆ. ಆಗ ಅವರೆಂದಿಗೂ ನನಗೆ ವಿಮುಖರಾಗುವದಿಲ್ಲ.
ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ.