Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:2 - ಪರಿಶುದ್ದ ಬೈಬಲ್‌

2 ಔತಣಕೂಟಕ್ಕೆ ಹೋಗುವುದಕ್ಕಿಂತ ಶವಸಂಸ್ಕಾರಕ್ಕೆ ಹೋಗುವುದು ಇನ್ನೂ ಉತ್ತಮ. ಯಾಕೆಂದರೆ ಎಲ್ಲರೂ ಒಂದು ದಿನ ಸಾಯಲೇಬೇಕು. ಸಾವನ್ನು ಕಂಡ ಪ್ರತಿಯೊಬ್ಬನು ಇದನ್ನು ಸ್ಮರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವುದು ಲೇಸು. ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ, ಜೀವಂತನು ಇದನ್ನು ನೋಡಿ ತನ್ನ ಹೃದಯದಲ್ಲಿ ಸ್ಮರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಜನನ ದಿನಕ್ಕಿಂತ ಮರಣ ದಿನ ಮೇಲು. ಔತಣದ ಮನೆಗಿಂತ ಮರಣದುಃಖದ ಮನೆಗೆ ಹೋಗುವದು ಲೇಸು; ಎಲ್ಲಾ ಮನುಷ್ಯರಿಗೂ ಕೊನೆಗೆ ಇದೇ ಗತಿ; ಜೀವಂತನು ಇದನ್ನು ನೋಡಿ ಸ್ಮರಿಸಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಔತಣದ ಮನೆಗೆ ಹೋಗುವುದಕ್ಕಿಂತ, ಶೋಕದ ಮನೆಗೆ ಹೋಗುವುದು ಲೇಸು. ಏಕೆಂದರೆ ಎಲ್ಲಾ ಮನುಷ್ಯರ ಅಂತ್ಯವು ಸಾವಾಗಿದೆ. ಇದರಿಂದ ಜೀವಂತರು ಇದನ್ನು ತಮ್ಮ ಹೃದಯದಲ್ಲಿ ಸ್ಮರಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:2
29 ತಿಳಿವುಗಳ ಹೋಲಿಕೆ  

ನಮ್ಮ ಜೀವಿತಗಳು ಕೊಂಚವೇ ಎಂಬುದನ್ನು ನಮಗೆ ಕಲಿಸು. ಆಗ ನಾವು ವಿವೇಕಿಗಳಾಗುವೆವು.


ಅವರು ಬುದ್ಧಿವಂತರಾಗಿದ್ದಲ್ಲಿ ಅವರಿಗೆ ಏನು ಸಂಭವಿಸುವುದೆಂದು ಅವರು ತಿಳಿಯುತ್ತಿದ್ದರು.


ಪ್ರತಿಯೊಬ್ಬರೂ ಒಂದೇಸಾರಿ ಸಾಯುವರು. ಅನಂತರ ಅವರಿಗೆ ನ್ಯಾಯತೀರ್ಪಾಗುವುದು.


ಹೀಗೆ ಹೇಳಿದನು: “ನಾನು ಈ ದಿನ ಹೇಳಿದ ಎಲ್ಲಾ ಆಜ್ಞೆಗಳನ್ನು ಅನುಸರಿಸಲು ಜಾಗರೂಕರಾಗಿರಿ. ಅವುಗಳನ್ನು ನಿಮ್ಮ ಮಕ್ಕಳಿಗೂ ತಿಳಿಸಿ; ಕಟ್ಟಳೆಗಳನ್ನು ಸಂಪೂರ್ಣವಾಗಿ ಕೈಗೊಳ್ಳುವಂತೆ ಅವರಿಗೆ ಬೋಧಿಸಿರಿ, ಕಲಿಸಿರಿ.


ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.


ಈಗ ದು:ಖದಿಂದಿರುವವರು ಧನ್ಯರು. ದೇವರು ಅವರನ್ನು ಸಂತೈಸುವನು.


ಸರ್ವಶಕ್ತನಾದ ಯೆಹೋವನು ಹೇಳುವುದೇನೆಂದರೆ, ‘ಏನು ನಡೆಯುತ್ತಿದೆಂಬುದರ ಬಗ್ಗೆ ಯೋಚಿಸಿರಿ.


‘ನಾನು ನಿತ್ಯಕಾಲಕ್ಕೂ ವಾಸಿಸುತ್ತೇನೆ. ನಾನು ಯಾವಾಗಲೂ ರಾಣಿಯಾಗಿಯೇ ಇರುವೆನು’ ಎಂದು ನೀನು ಹೇಳುವೆ. ಅವರಿಗೆ ನೀನು ಮಾಡಿದ ದುಷ್ಟಕ್ರಿಯೆಗಳನ್ನು ನೀನು ಗಮನಿಸಲೇ ಇಲ್ಲ. ಅದರ ಪರಿಣಾಮವನ್ನು ನೀನು ಆಲೋಚಿಸಲೇ ಇಲ್ಲ.


ಧೂಳಿನಷ್ಟು ಅಸಂಖ್ಯವಾದ ಯಾಕೋಬ್ಯರನ್ನು ಲೆಕ್ಕಿಸುವುದಕ್ಕೆ ಯಾರಿಂದಾದೀತು; ಇಸ್ರೇಲರ ಕಾಲು ಭಾಗವನ್ನಾದರೂ ಯಾರೂ ಲೆಕ್ಕಿಸಲಾರರು. ಸಜ್ಜನರಾದ ಅವರು ಸಾಯುವ ರೀತಿಯಲ್ಲೇ ನಾನೂ ಸಾಯಲು ಬಯಸುವೆ. ಅವರಿಗುಂಟಾಗುವ ಅಂತ್ಯ ನನಗೂ ಉಂಟಾಗಲಿ.”


ನನ್ನ ನಾಮವನ್ನು ಘನಪಡಿಸದೆ ಹೋದರೆ ಕೆಟ್ಟ ವಿಷಯಗಳು ನಿಮಗೆ ಪ್ರಾಪ್ತಿಯಾಗುವವು. ನೀವು ಆಶೀರ್ವದಿಸುವಿರಿ. ಆದರೆ ಅದು ಶಾಪವಾಗುವದು. ಕೆಟ್ಟ ವಿಷಯಗಳು ನೆರವೇರುವಂತೆ ನಾನು ಮಾಡುವೆನು. ಯಾಕೆಂದರೆ ನೀವು ನನ್ನ ಹೆಸರನ್ನು ಘನಪಡಿಸುವದಿಲ್ಲ.” ಇದನ್ನು ಸರ್ವಶಕ್ತನಾದ ಯೆಹೋವನು ನುಡಿದಿದ್ದಾನೆ.


ಅದು ಈ ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೋ ಕತ್ತಲೆಯಲ್ಲಿ ನಡೆದುಹೋಗುವನು. ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು; ಅವರಿಬ್ಬರೂ ಸಾಯುವರು.


ಯಾಕೆಂದರೆ ಮೂಢನು ಸಾಯುವಂತೆ ಜ್ಞಾನಿಯೂ ಸಾಯುವುದರಿಂದ ಜನರು ಜ್ಞಾನಿಯನ್ನಾಗಲಿ ಮೂಢನನ್ನಾಗಲಿ ಸದಾಕಾಲ ಜ್ಞಾಪಿಸಿಕೊಳ್ಳುವುದಿಲ್ಲ. ಅವರ ಕಾರ್ಯಗಳನ್ನು ಮುಂದಿನ ಕಾಲದ ಜನರು ಮರೆತುಬಿಡುವರು. ಆದ್ದರಿಂದ ಜ್ಞಾನಿಗೂ ಮೂಢನಿಗೂ ಯಾವ ವ್ಯತ್ಯಾಸವೂ ಇಲ್ಲ.


ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ ‘ಉಸಿರು.’ ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ.


ಮನುಷ್ಯರ ಮತ್ತು ಪ್ರಾಣಿಗಳ ದೇಹಗಳೆಲ್ಲ ಒಂದೇ ಸ್ಥಳಕ್ಕೆ ಹೋಗುತ್ತವೆ. ಮನುಷ್ಯರು ಮಣ್ಣಿನಿಂದ ಬಂದರು. ಕೊನೆಗೆ ಅವರು ಮಣ್ಣಿಗೇ ಹೋಗುವರು. ಪ್ರಾಣಿಗಳು ಮಣ್ಣಿನಿಂದ ಬಂದವು; ಕೊನೆಗೆ ಅವು ಮಣ್ಣಿಗೆ ಹೋಗುತ್ತವೆ.


ಅವನು ಎರಡು ಸಾವಿರ ವರ್ಷಗಳ ಕಾಲ ಬದುಕಿಯೂ ಜೀವನದಲ್ಲಿ ಸಂತೋಷಪಡದಿದ್ದರೆ ಏನು ಪ್ರಯೋಜನ? ಆ ಮಗುವೂ ಅವನೂ ಕತ್ತಲೆ ಗುಂಡಿಗೇ ಹೋಗುವರು.


ಆದರೆ ಎಲ್ಲರಿಗೂ ಸಂಭವಿಸುವುದು ಒಂದೇ. ಅದೇ ಮರಣ. ಒಳ್ಳೆಯವರಿಗೂ ಕೆಟ್ಟವರಿಗೂ ಶುದ್ಧರಿಗೂ ಅಶುದ್ಧರಿಗೂ ಯಜ್ಞಗಳನ್ನು ಅರ್ಪಿಸುವವರಿಗೂ ಅರ್ಪಿಸದವರಿಗೂ ಮರಣವಾಗುತ್ತದೆ. ಒಳ್ಳೆಯವನು ಸಹ ಕೇವಲ ಪಾಪಿಯಂತೆ ಸಾಯುವನು. ದೇವರಿಗೆ ವಿಶೇಷವಾದ ಹರಕೆಗಳನ್ನು ಮಾಡುವವನು ಸಹ ಆ ಹರಕೆಗಳನ್ನು ಮಾಡಲು ಭಯಪಡುವ ವ್ಯಕ್ತಿಯಂತೆ ಸಾಯುವನು.


ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ.


“ಯೆರೆಮೀಯನೇ, ಔತಣವನ್ನು ಏರ್ಪಡಿಸಿದ ಮನೆಗೆ ಹೋಗಬೇಡ. ಆ ಮನೆಗೆ ಹೋಗಿ ಊಟಮಾಡುತ್ತಾ ಪಾನಮಾಡುತ್ತಾ ಕುಳಿತುಕೊಳ್ಳಬೇಡ.


ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳುವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು