Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:26 - ಪರಿಶುದ್ದ ಬೈಬಲ್‌

26 ಇದಲ್ಲದೆ ಕೆಲವು ಸ್ತ್ರೀಯರು ಅಪಾಯಕರವಾದ ಬೋನುಗಳಂತಿರುವರು ಎಂಬುದನ್ನು ನಾನು ಕಂಡುಕೊಂಡೆ. ಅವರ ಹೃದಯಗಳು ಬಲೆಗಳಂತಿವೆ; ಅವರ ಕೈಗಳು ಸರಪಣಿಗಳಂತಿವೆ. ಆ ಸ್ತ್ರೀಯರಿಗೆ ಸಿಕ್ಕಿಬೀಳುವುದು ಮರಣಕ್ಕಿಂತಲೂ ಅಪಾಯಕರ. ದೇವರ ಭಕ್ತನು ಆ ಸ್ತ್ರೀಯರ ಬಳಿಯಿಂದ ಓಡಿಹೋಗುವನು; ಪಾಪಿಯಾದರೋ ಅವರಿಗೆ ಸಿಕ್ಕಿಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು. ಯಾವುದೆಂದರೆ ಕೆಟ್ಟ ಹೆಂಗಸೇ. ಅವಳ ಹೃದಯವು ಉರುಲುಗಳೂ, ಬಲೆಗಳೂ, ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸಾವಿಗಿಂತ ಹೆಚ್ಚು ವಿಷಕರವಾದ ವಿಷಯವೊಂದು ನನಗೆ ಕಂಡುಬಂದಿತು. ಅದು ಯಾವುದೆಂದರೆ - ಕೆಟ್ಟ ಹೆಂಗಸು. ಅವಳು ತೋರಿಸುವ ಪ್ರೀತಿ ಒಂದು ಬೋನು, ಸಿಕ್ಕಿಸಿಕೊಳ್ಳುವ ಒಂದು ಬಲೆ; ಅವಳ ತೋಳುಗಳು ಸಂಕೋಲೆಗಳು. ದೇವರು ಒಲಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯಾದರೋ ಅವಳ ಕೈಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಗ ಮರಣಕ್ಕಿಂತ ಹೆಚ್ಚು ವಿಷವೊಂದು ಕಂಡುಬಂತು, ಯಾವದಂದರೆ, ಕೆಟ್ಟ ಹೆಂಗಸೇ. ಅವಳು ಬೋನು, ಅವಳ ಹೃದಯ ಬಲೆ, ಅವಳ ಕೈ ಪಾಶ; ದೇವರು ಒಲಿದವನು ಇವಳಿಂದ ತಪ್ಪಿಸಿಕೊಳ್ಳುವನು; ಪಾಪಿಯೋ ಅವಳ ಕೈಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಕೆಟ್ಟ ಹೆಂಗಸಿನ ಹೃದಯವು ಬೋನೂ ಬಲೆಯೂ ಆಗಿರುತ್ತದೆ. ಅವಳ ಕೈ ಸಂಕೋಲೆ ಆಗಿರುತ್ತದೆ. ಇದು ಮರಣಕ್ಕಿಂತಲೂ ಕಠೋರವಾದದ್ದು ಎಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸುವವನು, ಅವಳಿಂದ ತಪ್ಪಿಸಿಕೊಳ್ಳುವನು. ಆದರೆ ಪಾಪಿಯು ಅವಳ ಕೈಗೆ ಸಿಕ್ಕಿಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:26
15 ತಿಳಿವುಗಳ ಹೋಲಿಕೆ  

ಕಾಮುಕಿಯ ಬಾಯಿ ಆಳವಾದ ಗುಂಡಿಯಂತಿದೆ. ಯೆಹೋವನಿಂದ ಶಪಿಸಲ್ಪಟ್ಟವರು ಆ ಗುಂಡಿಯೊಳಗೆ ಬೀಳುವರು.


ದೇವರು ತಾನು ಮೆಚ್ಚಿಕೊಂಡವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ಕೊಡುವನು. ಪಾಪಿಗಾದರೋ ಪ್ರಯಾಸದಿಂದ ಸಂಪಾದಿಸುವ ಮತ್ತು ಕೂಡಿಸಿಡುವ ಕೆಲಸವನ್ನು ಕೊಡುವನು. ಅವನು ಕೂಡಿಸಿಟ್ಟವುಗಳನ್ನು ದೇವರು ತನ್ನ ಮೆಚ್ಚಿಕೆಗೆ ಪಾತ್ರನಾದವನಿಗೆ ಕೊಡುವನು. ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥ.


ವ್ಯಭಿಚಾರಿಣಿಯು ನಿನ್ನೊಡನೆ ಸವಿಮಾತುಗಳನ್ನಾಡಿ ತನ್ನೊಡನೆ ಪಾಪ ಮಾಡುವಂತೆ ನಿನ್ನನ್ನು ಒತ್ತಾಯಿಸಬಹುದು.


ಆದರೆ ಆ ಮೂಢರಿಗೆ, ಅವಳ ಮನೆ ಕೇವಲ ದೆವ್ವಗಳಿಂದ ತುಂಬಿರುವುದಾಗಲಿ ಆಕೆಯ ಅತಿಥಿಗಳು ಅಗಾಧವಾದ ಪಾತಾಳದಲ್ಲಿ ಬಿದ್ದಿರುವುದಾಗಲಿ ತಿಳಿದಿಲ್ಲ.


ಅಧಿಕಾರಿಗಳು ಫರೋಹನಿಗೆ, “ಈ ಜನರಿಂದ ಇನ್ನೆಷ್ಟು ಕಾಲ ನಾವು ಬಳಲಬೇಕು? ಇವರು ಹೋಗಿ ತಮ್ಮ ದೇವರಾದ ಯೆಹೋವನನ್ನು ಆರಾಧಿಸಲಿ. ಈಜಿಪ್ಟ್ ನಾಶವಾಗುತ್ತಿದೆ ಎಂಬುದು ನಿನಗಿನ್ನೂ ಮನವರಿಕೆಯಾಗಿಲ್ಲವೇ?” ಅಂದರು.


ನಿನ್ನ ತಂದೆತಾಯಿಗಳ ಆಜ್ಞೆಗಳು ಮತ್ತು ಉಪದೇಶಗಳು ನಿನಗೆ ನೀತಿಮಾರ್ಗವನ್ನು ತೋರಿಸುವ ಬೆಳಕಿನಂತಿವೆ. ಅವು ನಿನ್ನನ್ನು ಸರಿಪಡಿಸಿ ಜೀವಮಾರ್ಗದಲ್ಲಿ ನಡೆಯಲು ಸಹಾಯಮಾಡುತ್ತವೆ.


ಅವು ನಿನ್ನನ್ನು ಕೆಟ್ಟ ಹೆಂಗಸಿನ ಬಳಿಗೆ ಹೋಗದಂತೆ ತಡೆಯುತ್ತವೆ; ಗಂಡನನ್ನು ಬಿಟ್ಟಂಥ ಹೆಂಗಸಿನ ನಯವಾದ ನುಡಿಗಳಿಂದ ತಪ್ಪಿಸಿ ಕಾಪಾಡುತ್ತವೆ.


ಪ್ರಸಂಗಿಯು ಹೀಗೆನ್ನುತ್ತಾನೆ: “ಒಂದು ತೀರ್ಮಾನಕ್ಕೆ ಬರಬೇಕೆಂದು ಇವೆಲ್ಲವುಗಳನ್ನು ಒಟ್ಟಾಗಿ ಸೇರಿಸಿದೆ. ಆದರೂ ಒಂದು ತೀರ್ಮಾನಕ್ಕೆ ಬರಲಾಗುತ್ತಿಲ್ಲ. ಆದರೆ ನಾನು ಒಂದನ್ನು ಕಂಡುಕೊಂಡೆ. ಅದೇನೆಂದರೆ, ಸಾವಿರ ಪುರುಷರಲ್ಲಿ ಒಬ್ಬ ನೀತಿವಂತನು ಇದ್ದರೂ ಇರಬಹುದು; ಆದರೆ ಸಾವಿರ ಸ್ತ್ರೀಯರಲ್ಲಿ ಒಬ್ಬ ನೀತಿವಂತಳನ್ನೂ ನಾನು ಕಾಣಲಿಲ್ಲ.


ಆ ರಾತ್ರಿಯೂ ಅವರು ತಮ್ಮ ತಂದೆಗೆ ದ್ರಾಕ್ಷಾರಸವನ್ನು ಕುಡಿಸಿ ಅಮಲೇರಿಸಿದರು. ಆಮೇಲೆ ಚಿಕ್ಕಮಗಳು ಅವನ ಹಾಸಿಗೆಗೆ ಹೋಗಿ ಅವನೊಂದಿಗೆ ಮಲಗಿಕೊಂಡಳು. ಆಕೆ ಮಲಗಿಕೊಂಡದ್ದು ಲೋಟನಿಗೆ ತಿಳಿಯಲಿಲ್ಲ.


ನನ್ನ ಧಣಿಯು ಈ ಮನೆಯ ಸರ್ವಾಧಿಕಾರವನ್ನು ನನಗೆ ಕೊಟ್ಟಿದ್ದರೂ ತನ್ನ ಧರ್ಮಪತ್ನಿಯಾದ ನಿನ್ನನ್ನು ನನಗೆ ಅಧೀನಪಡಿಸಿಲ್ಲ. ಹೀಗಿರಲು ಇಂಥಾ ಮಹಾ ದುಷ್ಕೃತ್ಯವನ್ನು ನಡೆಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ” ಎಂದು ಉತ್ತರಕೊಟ್ಟನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು