ಪ್ರಸಂಗಿ 7:9 - ಪರಿಶುದ್ದ ಬೈಬಲ್9 ಮುಂಗೋಪಿಯಾಗಿರಬೇಡ. ಯಾಕೆಂದರೆ ಕೋಪವು ಕೇವಲ ಮೂಢತನ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ, ಕೋಪಕ್ಕೆ ಮೂಢರ ಎದೆಯೇ ಲೇಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ತವಕಬೇಡ ಕೋಪಮಾಡಲಿಕ್ಕೆ; ಕೋಪಕ್ಕೆ ನೆಲೆ ಮೂಢನ ಎದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ನಿನ್ನ ಮನಸ್ಸು ಕೋಪಕ್ಕೆ ಆತುರಪಡದಿರಲಿ; ಕೋಪಕ್ಕೆ ಮೂಢರ ಎದೆಯೇ ನೆಲೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನೀನು ಕೋಪಿಸಿಕೊಳ್ಳುವುದಕ್ಕೆ ಆತುರಪಡದಿರು, ಏಕೆಂದರೆ ಕೋಪವು ಮೂಢರ ಎದೆಯಲ್ಲಿ ನೆಲೆಗೊಳ್ಳುತ್ತದೆ. ಅಧ್ಯಾಯವನ್ನು ನೋಡಿ |
ಇಸ್ರೇಲರು, “ದಾವೀದನಲ್ಲಿ ನಾವು ಹತ್ತುಪಾಲನ್ನು ಹೊಂದಿದ್ದೇವೆ. ಆದ್ದರಿಂದ ದಾವೀದನ ಮೇಲೆ ನಿಮಗಿಂತಲೂ ನಮಗೆ ಹೆಚ್ಚಿನ ಹಕ್ಕಿದೆ. ಆದರೆ ನೀವು ನಮ್ಮನ್ನು ಕಡೆಗಣಿಸಿದ್ದೇಕೆ? ರಾಜನನ್ನು ಹಿಂದಕ್ಕೆ ಕರೆತರಲು ಮಾತಾನಾಡಿದವರಲ್ಲಿ ನಾವೇ ಮೊದಲಿಗರು” ಎಂದು ಉತ್ತರಿಸಿದರು. ಆದರೆ ಯೆಹೂದದ ಜನರು ಇಸ್ರೇಲರಿಗೆ ಕಟುವಾಗಿ ಉತ್ತರಿಸಿದರು. ಯೆಹೂದ ಜನರ ಮಾತುಗಳು ಇಸ್ರೇಲರ ಮಾತುಗಳಿಗಿಂತ ಹೆಚ್ಚು ಕಟುವಾಗಿದ್ದವು.
ಆಗ ಅಬ್ಷಾಲೋಮನು ತನ್ನ ಸೇವಕರಿಗೆ ಈ ರೀತಿ ಆಜ್ಞೆ ಮಾಡಿದನು: “ಅಮ್ನೋನನನ್ನು ಗಮನಿಸುತ್ತಿರಿ. ಅವನು ಮತ್ತನಾಗಿ ಆನಂದಿಸುತ್ತಿರುವಾಗ ನಾನು ಆಜ್ಞೆಯನ್ನು ಕೊಡುತ್ತೇನೆ. ಆಗ ನೀವು ಅವನ ಮೇಲೆ ಆಕ್ರಮಣಮಾಡಿ ಕೊಲ್ಲಬೇಕು. ನಿಮಗೆ ಶಿಕ್ಷೆಯಾಗುತ್ತದೆ ಎಂಬ ಭಯವಿಲ್ಲದಿರಲಿ, ಯಾಕೆಂದರೆ ನೀವು ನನ್ನ ಆಜ್ಞೆಯನ್ನು ಪಾಲಿಸಿದಿರಷ್ಟೇ, ಆದ್ದರಿಂದ ಶಕ್ತರಾಗಿಯೂ ಧೈರ್ಯವಂತರಾಗಿಯೂ ಇರಿ” ಎಂದನು.