Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 8:12 - ಪರಿಶುದ್ದ ಬೈಬಲ್‌

12 ಒಬ್ಬ ಪಾಪಿಯು ನೂರು ದುಷ್ಕೃತ್ಯಗಳನ್ನು ಮಾಡಿ ಬಹುಕಾಲ ಬದುಕಬಹುದು. ಆದರೆ ದೇವರಲ್ಲಿ ಭಯಭಕ್ತಿಯುಳ್ಳವರಿಗೆ ಅದಕ್ಕಿಂತಲೂ ಮೇಲೇ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಪಾಪಿಯು ನೂರು ಸಲ ಅಧರ್ಮ ಮಾಡಿ ಬಹು ಕಾಲ ಬದುಕಿದರೂ, ದೇವರ ಮುಂದೆ ಹೆದರಿ, ಆತನಲ್ಲಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪಾಪಾತ್ಮನು ನೂರು ಸಾರಿ ಕೆಟ್ಟದ್ದನ್ನು ಮಾಡಿ ದೀರ್ಘಕಾಲ ಬದುಕಿದರೂ ದೇವರಿಗೆ ಹೆದರಿ ಭಯಭಕ್ತಿಯುಳ್ಳವರಿಗೆ ಒಳ್ಳೆಯದೇ ಆಗುವುದೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಪಾಪಿಯು ನೂರು ಸಲ ಅಧರ್ಮಮಾಡಿ ಬಹುಕಾಲ ಬದುಕಿದರೂ ದೇವರ ಮುಂದೆ ಹೆದರಿ ಆತನಲ್ಲಿ ಭಯಭಕ್ತಿಯುಳ್ಳವರಿಗೆ ಮೇಲೇ ಆಗುವದೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಪಾಪಿಯು ನೂರು ಸಾರಿ ಕೆಟ್ಟದ್ದನ್ನು ಮಾಡಿ, ಬಹುಕಾಲ ಬದುಕಿದರೂ ದೇವರಿಗೆ ಹೆದರಿ ದೈವಭಕ್ತಿಯುಳ್ಳವರಿಗೆ ಒಳ್ಳೆಯದಾಗುವುದೆಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 8:12
34 ತಿಳಿವುಗಳ ಹೋಲಿಕೆ  

ವಾಗ್ದಾನ ಮಾಡಲ್ಪಟ್ಟ ಭೂಮಿಯನ್ನು ದೀನರು ಪಡೆದುಕೊಳ್ಳುವರು; ಸಮಾಧಾನವನ್ನು ಅನುಭವಿಸುವರು.


ಹೌದು, ಪ್ರಭುವಾದ ದೇವರು ತನ್ನ ಭಕ್ತರನ್ನು ತೊಂದರೆಗಳಿಂದ ಯಾವಾಗಲೂ ರಕ್ಷಿಸುತ್ತಾನೆ. ಆತನು ದುಷ್ಟಜನರನ್ನು ನ್ಯಾಯತೀರ್ಪಿನ ದಿನ ಬರುವತನಕ ದಂಡಿಸುತ್ತಾನೆ.


ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.


ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ.


ದೇವರು ಮಾಡಿರುವುದು ಸಹ ಹೀಗೆಯೇ. ಆತನು ತನ್ನ ಕೋಪವನ್ನು ತೋರಿಸಿ, ತನ್ನ ಶಕ್ತಿಯನ್ನು ಜನರಿಗೆ ಪ್ರಸಿದ್ಧಿಪಡಿಸಬೇಕೆಂದಿದ್ದನು. ಆದರೂ ಆತನು ತನ್ನ ಕೋಪಕ್ಕೆ ಗುರಿಯಾಗಿ ನಾಶವಾಗಲಿದ್ದ ಜನರನ್ನು ಬಹು ಸಹನೆಯಿಂದ ಸಹಿಸಿಕೊಂಡನು.


ದೇವರು ತನ್ನಲ್ಲಿ ಭಯಭಕ್ತಿಯುಳ್ಳ ಜನರಿಗೆ ಎಂದೆಂದಿಗೂ ಕರುಣೆ ತೋರುವನು.


ನೀವು ಕಠಿಣರಾಗಿದ್ದೀರಿ ಮತ್ತು ಮೊಂಡರಾಗಿದ್ದೀರಿ. ಮಾರ್ಪಾಟಾಗಲು ನಿಮಗೆ ಇಷ್ಟವಿಲ್ಲ. ಆದ್ದರಿಂದ ನಿಮಗೆ ಬರಲಿರುವ ದಂಡನೆಯನ್ನು ನೀವು ಹೆಚ್ಚುಹೆಚ್ಚು ಮಾಡಿಕೊಳ್ಳುತ್ತಿದ್ದೀರಿ. ದೇವರು ತನ್ನ ಕೋಪವನ್ನು ತೋರಿಸುವ ದಿನದಲ್ಲಿ ನಿಮಗೆ ಆ ದಂಡನೆಯಾಗುವುದು. ಆ ದಿನದಲ್ಲಿ ದೇವರ ನ್ಯಾಯವಾದ ತೀರ್ಪುಗಳನ್ನು ಜನರು ನೋಡುವರು.


“ಆಗ ರಾಜನು ತನ್ನ ಬಲಗಡೆಯಲ್ಲಿರುವ ಜನರಿಗೆ, ‘ಬನ್ನಿರಿ, ನನ್ನ ತಂದೆ ನಿಮಗೆ ಮಹಾ ಆಶೀರ್ವಾದಗಳನ್ನು ಕೊಟ್ಟಿದ್ದಾನೆ. ಬನ್ನಿರಿ, ದೇವರು ನಿಮಗೆ ವಾಗ್ದಾನ ಮಾಡಿದ ರಾಜ್ಯವನ್ನು ಪಡೆದುಕೊಳ್ಳಿರಿ. ಆ ರಾಜ್ಯವು ಲೋಕ ಉಂಟಾದಂದಿನಿಂದ ನಿಮಗಾಗಿ ಸಿದ್ಧಮಾಡಲ್ಪಟ್ಟಿದೆ.


ಇವೆರಡರಲ್ಲಿಯೂ ಮಿತವಾಗಿರಬೇಕು. ದೇವಭಕ್ತರಲ್ಲಿ ಇವೆರಡೂ ಅತಿಯಾಗಿರುವುದಿಲ್ಲ.


ಅದು ಸಹ ತುಂಬ ದುಃಖಕರ. ಅವನು ಬಂದ ರೀತಿಯಲ್ಲಿಯೇ ಈ ಲೋಕವನ್ನು ಬಿಟ್ಟುಹೋಗುವನು. “ಗಾಳಿಯನ್ನು ಹಿಂದಟ್ಟುವುದರಿಂದ” ಅವನಿಗಾಗುವ ಪ್ರಯೋಜನವೇನು?


ಪಾಪಿಗಳು ಹೋದಲ್ಲೆಲ್ಲಾ ಕೇಡು ಅವರನ್ನು ಹಿಂಬಾಲಿಸುವುದು. ಸಜ್ಜನರಿಗಾದರೋ ಒಳ್ಳೆಯದೇ ಆಗುತ್ತದೆ.


ಆತನು ದೊಡ್ಡವರೂ ಚಿಕ್ಕವರೂ ಎಂದೆನ್ನದೆ ತನ್ನ ಭಕ್ತರನ್ನೆಲ್ಲಾ ಆಶೀರ್ವದಿಸುವನು.


ಯೆಹೋವನಿಗೆ ಸ್ತೋತ್ರವಾಗಲಿ! ಯಾವನು ಆತನಲ್ಲಿ ಭಯಭಕ್ತಿಯುಳ್ಳವನಾಗಿ ಆತನ ಆಜ್ಞೆಗಳನ್ನು ಪ್ರೀತಿಸುವನೋ ಅವನೇ ಧನ್ಯನು.


ಯೆಹೋವನನ್ನು ಆತನ ಸುಂದರವಾದ ಆಲಯದಲ್ಲಿ ಆರಾಧಿಸಿರಿ. ಭೂನಿವಾಸಿಗಳೆಲ್ಲರೇ, ಆತನನ್ನೇ ಆರಾಧಿಸಿರಿ.


ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು.


ಅಹಾಬನು ಮಾಡಿದಷ್ಟು ಪಾಪಗಳನ್ನು, ಇಲ್ಲವೆ ಕೆಟ್ಟಕಾರ್ಯಗಳನ್ನು ಮಾಡಿದ ಮನುಷ್ಯರು ಬೇರೆ ಯಾರೂ ಇಲ್ಲ. ಅವನು ಆ ಕಾರ್ಯಗಳನ್ನು ಮಾಡುವುದಕ್ಕೆ ಅವನ ಪತ್ನಿಯಾದ ಈಜೆಬೆಲಳು ಅವನನ್ನು ಒತ್ತಾಯಪಡಿಸಿದಳು.


ಆದ್ದರಿಂದ ನೀವು ಅದನ್ನು ತಿನ್ನದೆ ಯೆಹೋವನು ನಿಮಗೆ ತಿಳಿಸಿದಂತೆ ಮಾಡಿರಿ. ಆಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


ಈ ದಾದಿಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿದ್ದ ಕಾರಣ ಆತನು ಅವರನ್ನೂ ಅವರ ಕುಟುಂಬಗಳನ್ನೂ ಅಭಿವೃದ್ಧಿಪಡಿಸಿದನು. ಇದಲ್ಲದೆ ಇಸ್ರೇಲರ ಸಂಖ್ಯೆಯು ಅಧಿಕವಾಗಿ ಬೆಳೆಯತೊಡಗಿತು.


ನಾನು ಈ ಹೊತ್ತು ಕೊಡಲಿರುವ ಆತನ ಕಟ್ಟಳೆಗಳನ್ನೂ ಆಜ್ಞೆಗಳನ್ನೂ ನೀವು ಪರಿಪಾಲಿಸಬೇಕು. ಆಗ ನಿಮಗೂ ನಿಮ್ಮ ನಂತರ ಜೀವಿಸುವ ನಿಮ್ಮ ಮಕ್ಕಳಿಗೂ ಶುಭವಾಗುವುದು. ದೇವರಾದ ಯೆಹೋವನು ನಿಮಗೆ ಕೊಡಲಿರುವ ದೇಶದಲ್ಲಿ ಶಾಶ್ವತವಾಗಿ ಬಾಳುವಿರಿ!”


ಯೆಹೋವನು ಕೊಡುವ ಕಟ್ಟಳೆಗಳನ್ನು ನೀವು ಅನುಸರಿಸಿರಿ. ನಿಮ್ಮ ದೇವರಾದ ಯೆಹೋವನು ಮೆಚ್ಚುವ ಕಾರ್ಯಗಳನ್ನು ನೀವು ಮಾಡುವಾಗ ನಿಮಗೂ ನಿಮ್ಮ ಸಂತತಿಯವರಿಗೂ ಶುಭ ಉಂಟಾಗುವುದು.


ನೀನು ದುಡಿದು ಸಂಪಾದಿಸಿದ್ದನ್ನು ನೀನೇ ಅನುಭವಿಸುವೆ. ನೀನು ಸಂತೋಷದಿಂದಿರುವೆ. ನಿನಗೆ ಒಳ್ಳೆಯದಾಗುವುದು.


ಉಪಯೋಗವಿಲ್ಲದ ನಿಮ್ಮ ಕನಸುಗಳಾಗಲಿ ಜಂಬದ ಮಾತುಗಳಾಗಲಿ ನಿಮ್ಮನ್ನು ಕೇಡಿಗೆ ನಡೆಸದಂತೆ ನೋಡಿಕೊಳ್ಳಿರಿ; ದೇವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.


“ದೇವರು ಕೆಟ್ಟಜನರನ್ನು ದಂಡಿಸುವುದಿಲ್ಲ; ಪಾಪವನ್ನು ಗಮನಿಸುವುದಿಲ್ಲ ಎಂಬುದು ಯೋಬನ ಆಲೋಚನೆ.


ಕೇಡನ್ನು ಮಾಡಲು ಭಯಪಡುವವನು ಆಶೀರ್ವಾದ ಹೊಂದುವನು. ಆದರೆ ಮೊಂಡನು ಆಪತ್ತಿಗೆ ಸಿಕ್ಕಿಬೀಳುವನು.


ಇಂದಿನವರೆಗೂ ಯೆಹೂದದ ಜನ ತಮ್ಮನ್ನು ವಿನೀತರನ್ನಾಗಿ ಮಾಡಿಕೊಂಡಿಲ್ಲ. ಅವರು ನನ್ನ ಬಗ್ಗೆ ಎಳ್ಳಷ್ಟು ಗೌರವವನ್ನು ತೋರಿಸಿಲ್ಲ. ಆ ಜನರು ನನ್ನ ಉಪದೇಶಗಳಂತೆ ನಡೆದುಕೊಂಡಿಲ್ಲ. ನಾನು ನಿಮಗೂ ಮತ್ತು ನಿಮ್ಮ ಪೂರ್ವಿಕರಿಗೂ ಕೊಟ್ಟ ಧರ್ಮೋಪದೇಶಗಳನ್ನು ಅವರು ಪಾಲಿಸಲಿಲ್ಲ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು