ಪ್ರಸಂಗಿ 8:14 - ಪರಿಶುದ್ದ ಬೈಬಲ್14 ಲೋಕದಲ್ಲಿ ಮತ್ತೊಂದು ಅನ್ಯಾಯವಿದೆ. ದುಷ್ಟರಿಗೆ ಕೇಡಾಗಬೇಕು, ಕೆಟ್ಟವುಗಳು ಕೆಟ್ಟ ಜನರಿಗೆ ಆಗಬೇಕು. ನೀತಿವಂತರಿಗೆ ಒಳ್ಳೆಯದಾಗಬೇಕು. ಆದರೆ ಕೆಲವು ಸಲ ನೀತಿವಂತರಿಗೆ ಕೇಡಾಗುತ್ತದೆ. ದುಷ್ಟರಿಗೆ ಒಳ್ಳೆಯದಾಗುತ್ತದೆ. ಅದು ನ್ಯಾಯವಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವು ಒಂದುಂಟು. ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟನಿಗೆ ಆಗುವುದು. ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವುದು. ಇದು ವ್ಯರ್ಥವೆಂದು ನಾನು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಲೋಕದಲ್ಲಿ ನಡೆಯುವ ನಿರರ್ಥಕ ಕಾರ್ಯ ಒಂದುಂಟು; ದುರ್ಜನರ ನಡತೆಗೆ ಆಗಬೇಕಾದ ತಕ್ಕ ಶಿಕ್ಷೆ ಸಜ್ಜನರಿಗೆ ಆಗುತ್ತದೆ. ಸಜ್ಜನರಿಗೆ ಸಿಗಬೇಕಾದ ಸಂಭಾವನೆ ದುರ್ಜನರಿಗೆ ಸಿಗುತ್ತದೆ. ಇದು ನಿರರ್ಥಕವೆಂದೇ ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಲೋಕದಲ್ಲಿ ನಡೆಯುವ ವ್ಯರ್ಥಕಾರ್ಯವೊಂದುಂಟು; ದುಷ್ಟರ ನಡತೆಗೆ ತಕ್ಕ ಗತಿಯು ಶಿಷ್ಟರಿಗೆ ಆಗುವದು, ಶಿಷ್ಟರ ನಡತೆಗೆ ತಕ್ಕ ಗತಿಯು ದುಷ್ಟರಿಗೆ ಆಗುವದು; ಇದೂ ವ್ಯರ್ಥವೆಂದು ನಾನು ಹೇಳಿದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಭೂಮಿಯ ಮೇಲೆ ನಡೆಯುವ ಇನ್ನೊಂದು ವ್ಯರ್ಥ ಕಾರ್ಯವಿದು: ದುಷ್ಟರಿಗೆ ಆಗಬೇಕಾದ ಶಿಕ್ಷೆಯನ್ನು ನೀತಿವಂತರು ಅನುಭವಿಸುತ್ತಾರೆ. ನೀತಿವಂತರಿಗೆ ಆಗಬೇಕಾದ ಪ್ರತಿಫಲವನ್ನು ದುಷ್ಟರು ಅನುಭವಿಸುತ್ತಾರೆ. ಇದು ಸಹ ವ್ಯರ್ಥವೆಂದು ನಾನು ಹೇಳುತ್ತೇನೆ. ಅಧ್ಯಾಯವನ್ನು ನೋಡಿ |
ಸ್ವಂತ ಕುಟುಂಬವನ್ನು ಹೊಂದಿಲ್ಲದವನು ಅಂದರೆ ಅಣ್ಣತಮ್ಮಂದಿರಾಗಲಿ ಮಕ್ಕಳಾಗಲಿ ಇಲ್ಲದವನು ಸಹ ಪ್ರಯಾಸಪಟ್ಟು ದುಡಿಯುವನು. ಅವನಿಗೂ ತನ್ನ ಆಸ್ತಿಯಲ್ಲಿ ತೃಪ್ತಿಯಿಲ್ಲ. ಅವನು ಬಿಡುವಿಲ್ಲದೆ ಪ್ರಯಾಸಪಟ್ಟು ದುಡಿಯುವನು. “ನಾನೇಕೆ ಪ್ರಯಾಸಪಟ್ಟು ದುಡಿಯುತ್ತಿರುವೆ? ನಾನೇಕೆ ಜೀವನದ ಸುಖವನ್ನು ಅನುಭವಿಸುತ್ತಿಲ್ಲ?” ಎಂದು ಅವನು ಆಲೋಚಿಸುವುದೇ ಇಲ್ಲ. ಇದು ಸಹ ಕೆಟ್ಟದ್ದೂ ವ್ಯರ್ಥವಾದದ್ದೂ ಆಗಿದೆ.