ಪ್ರಸಂಗಿ 8:3 - ಪರಿಶುದ್ದ ಬೈಬಲ್3 ರಾಜನಿಗೆ ನಿಮ್ಮ ಆಲೋಚನೆಗಳನ್ನು ತಿಳಿಸಲು ಭಯಪಡಬಾರದು; ನೀವು ಯಾವ ತಪ್ಪಿಗೂ ಬೆಂಬಲ ಕೊಡಬಾರದು. ಆದರೆ ರಾಜನು ತನಗೆ ಇಷ್ಟಬಂದಂತೆ ಆಜ್ಞೆಗಳನ್ನು ಕೊಡುತ್ತಾನೆಂಬುದು ಜ್ಞಾಪಕದಲ್ಲಿರಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅರಸನ ಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ. ದ್ರೋಹಕ್ಕೆ ಸೇರದಿರು. ಅವನು ಇಷ್ಟಬಂದಂತೆ ಮಾಡಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ದುಡುಕುತನದಿಂದ ಅರಸನಿಗೆ ಬೆನ್ನು ತೋರಿಸಬೇಡ; ಕೆಟ್ಟ ವಿಷಯದಲ್ಲಿ ಹಟಮಾಡಬೇಡ. ಆತನು ತನಗಿಷ್ಟಬಂದಂತೆ ಮಾಡಬಲ್ಲನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ರಾಜಸನ್ನಿಧಿಯಿಂದ ತೊಲಗಿಬಿಡಲು ಆತುರಪಡಬೇಡ; ದ್ರೋಹಕ್ಕೆ ಸೇರದಿರು; ಅವನು ಇಷ್ಟಬಂದಂತೆ ಮಾಡಬಲ್ಲನಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಅರಸನನ್ನು ಬಿಟ್ಟುಹೋಗುವುದಕ್ಕೆ ಆತುರ ಪಡಬೇಡಿರಿ. ಅರಸನು ತನಗೆ ಇಷ್ಟಬಂದದ್ದನ್ನೆಲ್ಲಾ ಮಾಡುತ್ತಾನೆ. ನೀವು ಕೆಟ್ಟ ಕಾರ್ಯಕ್ಕಾಗಿ ನಿಲ್ಲಬೇಡಿರಿ. ಅಧ್ಯಾಯವನ್ನು ನೋಡಿ |
ಹಲವಾರು ಜನಾಂಗದ ಮತ್ತು ಭಾಷೆಯ ಜನರು ಅವನಿಗೆ ತುಂಬ ಹೆದರುತ್ತಿದ್ದರು. ಏಕೆಂದರೆ ಮಹೋನ್ನತನಾದ ದೇವರು ಅವನನ್ನು ಬಹುದೊಡ್ಡ ರಾಜನನ್ನಾಗಿ ಮಾಡಿದ್ದನು. ನೆಬೂಕದ್ನೆಚ್ಚರನು ಯಾರನ್ನಾದರೂ ಕೊಲ್ಲಬೇಕೆಂದು ಇಚ್ಛಿಸಿದರೆ ಅವನನ್ನು ಕೊಲ್ಲಿಸಿಬಿಡುತ್ತಿದ್ದನು; ತನಗೆ ಬೇಕಾದವರನ್ನು ಉಳಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಏರಿಸುತ್ತಿದ್ದನು; ತನ್ನ ಮನಸ್ಸಿಗೆ ಬಂದವರನ್ನು ಇಳಿಸುತ್ತಿದ್ದನು.