ಪ್ರಸಂಗಿ 8:5 - ಪರಿಶುದ್ದ ಬೈಬಲ್5 ರಾಜನ ಆಜ್ಞೆಗೆ ವಿಧೇಯನಾಗುವವನು ಸುರಕ್ಷಿತವಾಗಿರುವನು. ಆದರೆ ಜ್ಞಾನಿಯು ಸೂಕ್ತ ಸಮಯದಲ್ಲಿ ಸೂಕ್ತ ಕಾರ್ಯವನ್ನು ಮಾಡಲು ತಿಳಿದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅರಸನ ಆಜ್ಞೆಗಳನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸುವುದಿಲ್ಲ. ಜ್ಞಾನಿಯ ಹೃದಯವು ಕಾಲ ಮತ್ತು ನ್ಯಾಯ ಎರಡನ್ನು ತಿಳಿದುಕೊಳ್ಳುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ರಾಜಾಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸದು. ಅದನ್ನು ಯಾವಾಗ, ಹೇಗೆ ಪಾಲಿಸಬೇಕೆಂದು ಜ್ಞಾನಿಗೆ ಮನದಟ್ಟಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಜ್ಞೆಯನ್ನು ಕೈಕೊಳ್ಳುವವನು ಕೇಡನ್ನು ಅನುಭವಿಸನು; ಕಾಲವೂ ನ್ಯಾಯತೀರ್ಪೂ ಉಂಟೆಂಬದು ಜ್ಞಾನಿಯ ಬುದ್ಧಿಗೆ ಗೊತ್ತು; ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಅರಸನ ಆಜ್ಞೆಯನ್ನು ಪಾಲಿಸುವವನಿಗೆ ಕೇಡು ಸಂಭವಿಸುವುದಿಲ್ಲ, ಜ್ಞಾನಿಯ ಹೃದಯವು ಸರಿಯಾದ ಕಾಲ ಕ್ರಮವನ್ನು ತಿಳಿದುಕೊಳ್ಳುತ್ತದೆ. ಅಧ್ಯಾಯವನ್ನು ನೋಡಿ |
ಈ ಪುಸ್ತಕದಲ್ಲಿ ಬರೆಯಲಾಗಿರುವ ಎಲ್ಲಾ ವಿಷಯಗಳಿಂದ ನಾವು ಕಲಿತುಕೊಳ್ಳತಕ್ಕದ್ದೇನು? ಒಬ್ಬನು ಮಾಡಬಹುದಾದ ಅತ್ಯಂತ ಮುಖ್ಯವಾದ ಕಾರ್ಯವೆಂದರೆ, ದೇವರಲ್ಲಿ ಭಯಭಕ್ತಿಯಿಂದಿದ್ದು ಆತನ ಆಜ್ಞೆಗಳಿಗೆ ವಿಧೇಯನಾಗರುವುದೇ. ಯಾಕೆಂದರೆ ಜನರ ಎಲ್ಲಾ ಕಾರ್ಯಗಳೂ ರಹಸ್ಯಗಳೂ ದೇವರಿಗೆ ಗೊತ್ತಿವೆ. ಆತನು ಪ್ರತಿಯೊಂದು ಕಾರ್ಯವನ್ನೂ ತಿಳಿದಿರುವುದರಿಂದ ಪ್ರತಿಯೊಂದಕ್ಕೂ ನ್ಯಾಯತೀರ್ಪು ನೀಡುವನು.