ಪ್ರಸಂಗಿ 8:9 - ಪರಿಶುದ್ದ ಬೈಬಲ್9 ನಾನು ಇವುಗಳನ್ನೆಲ್ಲಾ ನೋಡಿ ಈ ಲೋಕದ ಕಾರ್ಯಗಳನ್ನು ಪರಿಶೀಲಿಸಿದೆನು. ಮನುಷ್ಯರು ಇನ್ನೊಬ್ಬರ ಮೇಲೆ ಅಧಿಪತಿಗಳಾಗಿರಲು ಪ್ರಯಾಸಪಡುತ್ತಾರೆ. ಇದು ಅವರಿಗೆ ಹಾನಿಕರ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ಇದನ್ನೆಲ್ಲಾ ನೋಡಿ, ಈ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ಅಧಿಕಾರ ನಡೆಸಿ ಅವನಿಗೆ ಹಾನಿಯನ್ನು ಉಂಟುಮಾಡುವ ಕಾಲವೂ ಇದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಬ್ಬನು ಮತ್ತೊಬ್ಬನ ಮೇಲೆ ಅಧಿಕಾರ ನಡಿಸಿ ಅವನಿಗೆ ಹಾನಿಯನ್ನುಂಟುಮಾಡುವ ಈ ಕಾಲದಲ್ಲಿ ಇದನ್ನೆಲ್ಲಾ ನೋಡಿ ಲೋಕದೊಳಗೆ ನಡೆಯುವ ಸಕಲ ಕಾರ್ಯಗಳನ್ನೂ ಪರಿಶೀಲಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ಇದನ್ನೆಲ್ಲಾ ನೋಡಿ, ಸೂರ್ಯನ ಕೆಳಗೆ ಮಾಡುವ ಪ್ರತಿಯೊಂದು ಕೆಲಸಕ್ಕೂ ನನ್ನ ಹೃದಯವನ್ನು ಪ್ರಯೋಗಿಸಿದ್ದೇನೆ. ಒಬ್ಬ ಮನುಷ್ಯನು ಇನ್ನೊಬ್ಬನ ಮೇಲೆ ತನ್ನ ಹಾನಿಗಾಗಿ ಅಧಿಕಾರ ನಡೆಸುವ ಕಾಲವೂ ಇದೆ. ಅಧ್ಯಾಯವನ್ನು ನೋಡಿ |