Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:1 - ಪರಿಶುದ್ದ ಬೈಬಲ್‌

1 ನಾನು ಇವೆಲ್ಲವುಗಳ ಬಗ್ಗೆ ಬಹಳ ಎಚ್ಚರಿಕೆಯಿಂದ ಆಲೋಚಿಸಿದೆ. ಒಳ್ಳೆಯವರಿಗೂ ಜ್ಞಾನಿಗಳಿಗೂ ಅವರ ಕಾರ್ಯಗಳಿಗೂ ಸಂಭವಿಸುವುದೆಲ್ಲಾ ದೇವರ ಹತೋಟಿಯಲ್ಲಿದೆ. ತಾವು ಪ್ರೀತಿಗೆ ಗುರಿಯಾಗುವರೋ ದ್ವೇಷಕ್ಕೆ ಗುರಿಯಾಗುವರೋ ಅವರಿಗೆ ಗೊತ್ತಿಲ್ಲ. ಮುಂದೆ ಸಂಭವಿಸುವುದೂ ಅವರಿಗೆ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಇವೆಲ್ಲವುಗಳನ್ನು ನನ್ನ ಮನಸ್ಸಿನಲ್ಲಿ ವಿಚಾರಿಸಿಕೊಂಡು ಒಂದು ತೀರ್ಮಾನಕ್ಕೆ ಬಂದೆನು. ಅದೇನೆಂದರೆ ನೀತಿವಂತನ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಯಾವ ಮನುಷ್ಯನೂ ತನ್ನ ಮುಂದಿರುವ ಪ್ರೀತಿಯನ್ನು ಅಥವಾ ದ್ವೇಷವನ್ನು ತಿಳಿಯಲಾರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಏಕೆಂದರೆ ಧರ್ಮಿಗಳೂ ಜ್ಞಾನಿಗಳೂ ಅವರ ಕೃತ್ಯಗಳೂ ದೇವರ ಕೈಯಲ್ಲುಂಟು; ತಾವು ಪ್ರೀತಿಗೆ ಗುರಿಯೋ ದ್ವೇಷಕ್ಕೆ ಗುರಿಯೋ ಮನುಷ್ಯರಿಗೆ ಗೊತ್ತಿಲ್ಲ. ಅವರ ಮುಂದೆ ಸಮಸ್ತವೂ ಕಾದಿದೆ ಎಂಬೀ ವಿಷಯಗಳನ್ನೆಲ್ಲಾ ವಿಚಾರಿಸಬೇಕೆಂದು ಮನಸ್ಸಿಗೆ ತೆಗೆದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಾನು ಇವೆಲ್ಲವುಗಳ ಮೇಲೆ ಅಭ್ಯಾಸ ಮಾಡಿ ಈ ತೀರ್ಮಾನಕ್ಕೆ ಬಂದೆನು. ಅದೇನೆಂದರೆ, ನೀತಿವಂತರ ಮತ್ತು ಜ್ಞಾನಿಗಳ ಕೆಲಸಗಳು ದೇವರ ಕೈಯಲ್ಲಿವೆ. ಆದರೆ ಅವರಿಗೆ ಪ್ರೀತಿ ಕಾದಿದೆಯೋ ಅಥವಾ ದ್ವೇಷ ಕಾದಿದೆಯೋ ಎಂದು ಯಾರಿಗೂ ಗೊತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:1
31 ತಿಳಿವುಗಳ ಹೋಲಿಕೆ  

ಹೌದು, ಯೆಹೋವನು ತನ್ನ ಜನರನ್ನು ಪ್ರೀತಿಸುತ್ತಾನೆ. ಪವಿತ್ರ ಜನರೆಲ್ಲರೂ ಆತನ ಕೈಗಳಲ್ಲಿರುವರು. ಆತನ ಕಾಲ ಬಳಿಯಲ್ಲಿ ಕುಳಿತುಕೊಂಡು ಬೋಧನೆಯನ್ನು ಕೇಳುವರು.


ದೇವರ ಶಕ್ತಿಯು ನಿಮ್ಮ ನಂಬಿಕೆಯ ಮೂಲಕ ನಿಮ್ಮನ್ನು ಕಾಯುತ್ತದೆ. ನಿಮಗೆ ರಕ್ಷಣೆಯಾಗುವವರೆಗೆ ನಿಮ್ಮನ್ನು ಸುರಕ್ಷಿತವಾಗಿಡುತ್ತದೆ. ಸಿದ್ಧವಾಗಿರುವ ಆ ರಕ್ಷಣೆಯು ಅಂತ್ಯಕಾಲದಲ್ಲಿ ನಿಮಗೆ ದೊರೆಯುವುದು.


ಲೋಕದಲ್ಲಿ ಮತ್ತೊಂದು ಅನ್ಯಾಯವಿದೆ. ದುಷ್ಟರಿಗೆ ಕೇಡಾಗಬೇಕು, ಕೆಟ್ಟವುಗಳು ಕೆಟ್ಟ ಜನರಿಗೆ ಆಗಬೇಕು. ನೀತಿವಂತರಿಗೆ ಒಳ್ಳೆಯದಾಗಬೇಕು. ಆದರೆ ಕೆಲವು ಸಲ ನೀತಿವಂತರಿಗೆ ಕೇಡಾಗುತ್ತದೆ. ದುಷ್ಟರಿಗೆ ಒಳ್ಳೆಯದಾಗುತ್ತದೆ. ಅದು ನ್ಯಾಯವಲ್ಲ.


ಪ್ರತಿಯೊಂದು ಪ್ರಾಣಿಯ ಜೀವವೂ ಪ್ರತಿಯೊಬ್ಬ ವ್ಯಕ್ತಿಯ ಆತ್ಮವೂ ದೇವರ ಕೈಯಲ್ಲಿವೆ.


ಸುವಾರ್ತೆಯನ್ನು ತಿಳಿಸಿದ್ದರಿಂದಲೇ ನಾನೀಗ ಸಂಕಟವನ್ನು ಅನುಭವಿಸುತ್ತಿದ್ದೇನೆ. ಆದರೆ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನವು ಬರುವತನಕ ಸಂರಕ್ಷಿಸಲು ಆತನು ಸಮರ್ಥನೆಂಬುದನ್ನು ಖಚಿತವಾಗಿ ಬಲ್ಲೆನು.


ಯೆಹೋವನೇ, ನೀನು ಮಾಡಬಯಸಿದ ಎಲ್ಲವುಗಳಲ್ಲಿ ಯಶಸ್ವಿಯಾಗಿರುವೆ. ಆದ್ದರಿಂದ ನಮಗೆ ಶಾಂತಿಯನ್ನು ಅನುಗ್ರಹಿಸು.


ನಿಮ್ಮ ಕಾರ್ಯಗಳನ್ನು ಯೆಹೋವನಿಗೆ ವಹಿಸಿರಿ; ಆಗ ನಿಮ್ಮ ಯೋಜನೆಗಳೆಲ್ಲಾ ಸಫಲವಾಗುವವು.


ಯೆಹೋವನೇ, ನಮ್ಮ ಭರವಸೆಗೆ ಯೋಗ್ಯನಾದ ದೇವರು ನೀನೊಬ್ಬನೇ. ನನ್ನ ಜೀವವನ್ನು ನಿನ್ನ ಕೈಗಳಲ್ಲಿ ಇಟ್ಟಿರುವೆ. ನನ್ನನ್ನು ರಕ್ಷಿಸು!


ಯೆಹೋವನು ತನ್ನ ಪವಿತ್ರ ಜನರನ್ನು ರಕ್ಷಿಸುವನು. ಆತನು ಅವರನ್ನು ಎಡವದಂತೆ ಕಾಪಾಡುವನು. ಆದರೆ ಕೆಟ್ಟವರು ನಾಶವಾಗಿ ಕತ್ತಲೆಯಲ್ಲಿ ಬೀಳುವರು. ಅವರ ಶಕ್ತಿ ಅವರಿಗೆ ಜಯನೀಡಲಾರದು.


ಮೂಢನು ತಾನು ಮಾಡುವಂಥದ್ದರ ಬಗ್ಗೆ ಯಾವಾಗಲೂ ಮಾತಾಡುವನು. ಆದರೆ ಮುಂದೆ ಏನಾಗುವುದೋ ಯಾರಿಗೂ ತಿಳಿಯದು. ಮುಂದೆ ಸಂಭವಿಸುವುದನ್ನು ಯಾರೂ ಹೇಳಲಾರರು.


ಈ ಲೋಕದಲ್ಲಿ ಜನರ ಕಾರ್ಯಗಳನ್ನು ಎಚ್ಚರಿಕೆಯಿಂದ ಅಧ್ಯಯನ ಮಾಡಿದೆ. ಅವರು ಹಗಲುರಾತ್ರಿ ಕೆಲಸ ಮಾಡುವರು; ಕೆಲವೊಮ್ಮೆ ನಿದ್ರೆಯನ್ನೂ ಮಾಡುವುದಿಲ್ಲ.


ನಿಜವಾದ ಜ್ಞಾನವನ್ನು ಕಂಡುಕೊಳ್ಳಲು ನಾನು ವ್ಯಾಸಂಗ ಮಾಡಿದೆ ಮತ್ತು ತುಂಬ ಕಷ್ಟಪಟ್ಟು ಪ್ರಯತ್ನಿಸಿದೆ. ಪ್ರತಿಯೊಂದಕ್ಕೂ ಕಾರಣವನ್ನು ಕಂಡುಕೊಳ್ಳಲು ನಾನು ಪ್ರಯತ್ನಿಸಿದೆ. ನಾನು ಕಲಿತಿದ್ದೇನು? ಕೆಡುಕನಾಗಿರುವುದು ಮೂಢತನ ಮತ್ತು ಮೂಢನಂತೆ ವರ್ತಿಸುವುದು ಹುಚ್ಚುತನ ಎಂಬುದನ್ನು ನಾನು ಕಲಿತುಕೊಂಡೆ.


ನನ್ನ ಅಲ್ಪಕಾಲದ ಜೀವನದಲ್ಲಿ ನಾನು ಪ್ರತಿಯೊಂದನ್ನೂ ನೋಡಿದ್ದೇನೆ. ನೀತಿವಂತರು ಯೌವನ ಪ್ರಾಯದಲ್ಲಿ ಸಾಯುವುದನ್ನೂ ನೋಡಿದ್ದೇನೆ. ದುಷ್ಟರು ಬಹುಕಾಲ ಬದುಕುವುದನ್ನೂ ನೋಡಿದ್ದೇನೆ.


ಜ್ಞಾನವನ್ನಲ್ಲದೆ ಮೂಢತನವನ್ನೂ ಬುದ್ಧಿಹೀನತೆಯನ್ನೂ ಗ್ರಹಿಸಿಕೊಳ್ಳಲು ನಿರ್ಧರಿಸಿದೆನು. ಆದರೆ ಇದು ಸಹ ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೆಂದು ಕಲಿತುಕೊಂಡೆನು.


ದುಷ್ಟರ ಏಳಿಗೆಯನ್ನು ಕಂಡು ಗರ್ವಿಷ್ಠರ ಮೇಲೆ ಅಸೂಯೆಗೊಂಡೆನು.


ಯೆಹೋವನೇ, ಆ ದುಷ್ಟರ ಕ್ರೂರವಾದ ಕಾರ್ಯಗಳನ್ನೂ ದುಷ್ಕೃತ್ಯಗಳನ್ನೂ ನೀನು ಖಂಡಿತವಾಗಿ ನೋಡುವೆ. ಅವುಗಳನ್ನು ನೋಡಿ ಕಾರ್ಯನಿರತನಾಗು. ಅನೇಕ ತೊಂದರೆಗಳಲ್ಲಿ ಸಿಕ್ಕಿಕೊಂಡಿರುವವರು ಸಹಾಯಕ್ಕಾಗಿ ನಿನ್ನ ಬಳಿಗೆ ಬರುವರು. ಅನಾಥರಿಗೆ ಸಹಾಯ ಮಾಡುವವನು ನೀನೇ. ಆದ್ದರಿಂದ ಅವರಿಗೆ ಸಹಾಯಮಾಡು!


ಯೋಬನೇ, ನಾನೇನಾದರೂ ನಿನ್ನ ಸ್ಥಿತಿಯಲ್ಲಿದ್ದಿದ್ದರೆ, ದೇವರನ್ನೇ ಆಶ್ರಯಿಸಿಕೊಂಡು ನನ್ನ ಕಷ್ಟವನ್ನು ಆತನಿಗೆ ಹೇಳಿಕೊಳ್ಳುತ್ತಿದ್ದೆನು.


ನನ್ನ ಪ್ರಾಣವು ಯಾವಾಗಲೂ ಅಪಾಯದಲ್ಲಿದೆ. ಆದರೂ ನಾನು ನಿನ್ನ ಉಪದೇಶಗಳನ್ನು ಮರೆತುಬಿಟ್ಟಿಲ್ಲ.


ಅವರು ಸತ್ತಾಗಲೇ, ಅವರ ಪ್ರೀತಿ, ದ್ವೇಷ ಮತ್ತು ಹೊಟ್ಟೆಕಿಚ್ಚು ಅಳಿದುಹೋದವು; ಸತ್ತವರು ಭೂಲೋಕದ ಕಾರ್ಯಗಳಲ್ಲಿ ಇನ್ನೆಂದಿಗೂ ಪಾಲುಗಾರರಾಗುವುದಿಲ್ಲ.


ಈಗ ಯೋಹಾನಾನ ಮತ್ತು ಎಲ್ಲಾ ಸೈನ್ಯಾಧಿಕಾರಿಗಳು, ಎಲ್ಲಾ ಗಂಡಸರು, ಹೆಂಗಸರು ಮತ್ತು ಮಕ್ಕಳನ್ನು ಈಜಿಪ್ಟಿಗೆ ತೆಗೆದುಕೊಂಡು ಹೋದರು. ಆ ಜನಗಳಲ್ಲಿ ರಾಜನ ಹೆಣ್ಣುಮಕ್ಕಳಿದ್ದರು. (ನೆಬೂಜರದಾನನು ಗೆದಲ್ಯನನ್ನು ಆ ಜನರ ಮೇಲ್ವಿಚಾರಕನನ್ನಾಗಿ ನೇಮಿಸಿದ್ದನು. ನೆಬೂಜರದಾನನು ಬಾಬಿಲೋನಿನ ರಾಜನ ವಿಶೇಷ ರಕ್ಷಕದಳದ ಅಧಿಪತಿಯಾಗಿದ್ದನು). ಯೋಹಾನಾನನು ಪ್ರವಾದಿಯಾದ ಯೆರೆಮೀಯನನ್ನು ಮತ್ತು ನೇರೀಯನ ಮಗನಾದ ಬಾರೂಕನನ್ನು ತೆಗೆದುಕೊಂಡು ಹೋದನು.


ನೀವೆಲ್ಲರೂ ಇವುಗಳನ್ನು ಕಣ್ಣಾರೆ ನೋಡಿದ್ದೀರಿ. ಹೀಗಿರಲು ಅಂಥ ನಿಷ್ಪ್ರಯೋಜಕ ಸಂಗತಿಗಳನ್ನು ಯಾಕೆ ಹೇಳುವಿರಿ?


ಯಾಕೆಂದರೆ ಮುಂದೆ ಏನಾಗುವುದೋ ಅವನಿಗೆ ತಿಳಿಯದು. ಮುಂದೆ ಅದು ಹೇಗೆ ಆಗುವುದೋ ಎಂದು ಅವನಿಗೆ ತಿಳಿಸುವವರು ಯಾರು ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು