Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:12 - ಪರಿಶುದ್ದ ಬೈಬಲ್‌

12 ಮನುಷ್ಯನಿಗೆ ಮುಂದೆ ಏನಾಗುವುದೋ ತಿಳಿಯದು. ಬಲೆಯಲ್ಲಿ ಸಿಕ್ಕಿಕೊಂಡಿರುವ ಮೀನಿನಂತೆಯೂ ಬೋನಿನಲ್ಲಿ ಸಿಕ್ಕಿಕೊಂಡ ಪಕ್ಷಿಯಂತೆಯೂ ಮನುಷ್ಯನು ತನಗೆ ಸಂಭವಿಸುವ ಕೇಡುಗಳಿಗೆ ಗುರಿಯಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಮನುಷ್ಯನೋ ತನ್ನ ಕಾಲ ಗತಿಯನ್ನು ತಿಳಿಯನಷ್ಟೆ. ಮೀನುಗಳು ಕೆಟ್ಟ ಬಲೆಗೂ, ಪಕ್ಷಿಗಳು ಉರುಲಿನಲ್ಲಿ ಸಿಕ್ಕಿಬೀಳುವ ಹಾಗೆ ಮನುಷ್ಯರು ಪ್ರಾಣಿಗಳ ಹಾಗೆ ತಮ್ಮ ಮೇಲೆ ತಟ್ಟನೆ ಬೀಳುವ ಕೇಡಿನ ಕಾಲಕ್ಕೆ ಸಿಕ್ಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ತನ್ನ ನಿಶ್ಚಿತಕಾಲ ಯಾವಾಗ ಬರುವುದೆಂದು ಮಾನವನಿಗೆ ತಿಳಿಯದು. ಮೀನುಗಳು ಮೋಸಬಲೆಗೂ, ಹಕ್ಕಿಗಳು ಉರುಲುಬಲೆಗೂ, ಸಿಕ್ಕಿ ಬೀಳುವಂತೆ ನರಮಾನವರು ತಮ್ಮ ಮೇಲೆ ತಟ್ಟನೆ ಬೀಳುವ ಕಾಲಪಾಶಕ್ಕೆ ಸಿಕ್ಕಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ, ಅವರವರ ಸಮಯ ಯಾವಾಗ ಬರುತ್ತದೆ ಎಂದು ಯಾರಿಗೂ ತಿಳಿಯದು. ಕ್ರೂರ ಬಲೆಯಿಂದ ಹಿಡಿಯುವ ಮೀನಿನಂತೆಯೂ ಉರುಲಿನಲ್ಲಿ ಸಿಕ್ಕುವ ಪಕ್ಷಿಗಳಂತೆಯೂ ಕೇಡಿನ ಕಾಲವು ತಟ್ಟನೆ ಬೀಳುವಾಗ ಜನರು ಸಿಕ್ಕಿಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:12
28 ತಿಳಿವುಗಳ ಹೋಲಿಕೆ  

“ನಮಗೆ ಶಾಂತಿಯಿದೆ. ನಾವು ಸುರಕ್ಷಿತರಾಗಿದ್ದೇವೆ” ಎಂದು ಜನರು ಹೇಳುವಾಗಲೇ ಅವರಿಗೆ ವಿನಾಶವು ಗರ್ಭಿಣಿಗೆ ಪ್ರಸವವೇದನೆ ಉಂಟಾಗುವಂತೆ ಬರುತ್ತದೆ. ಆ ಜನರು ತಪ್ಪಿಸಿಕೊಳ್ಳಲಾಗುವುದಿಲ್ಲ.


ಕೆಡುಕರು ತಮ್ಮ ಪಾಪದಿಂದಲೇ ಸಿಕ್ಕಿಕೊಳ್ಳುವರು. ಒಳ್ಳೆಯವರಾದರೋ ಸಂತೋಷದಿಂದ ಹಾಡುವರು.


ಸೈತಾನನು ಆ ಜನರನ್ನು ತನ್ನ ಬಲೆಗೆ ಬೀಳಿಸಿ, ತನ್ನ ಅಪೇಕ್ಷೆಗೆ ತಕ್ಕಂತೆ ಅವರಿಂದ ಕಾರ್ಯಗಳನ್ನು ಮಾಡಿಸುತ್ತಿದ್ದಾನೆ. ಆದರೆ ಅವರು ಎಚ್ಚರಗೊಂಡು, ಸೈತಾನನು ತಮ್ಮನ್ನು ವಶಪಡಿಸಿ ಕೊಂಡಿರುವುದನ್ನು ಗುರುತಿಸಬಹುದು ಹಾಗೂ ಸೈತಾನನ ಬಲೆಯಿಂದ ತಪ್ಪಿಸಿಕೊಂಡು ಬಿಡುಗಡೆ ಹೊಂದಬಹುದು.


ದೇವರು ಹೀಗೆನ್ನುತ್ತಾನೆ: “ಸುಪ್ರಸನ್ನತೆಯ ಕಾಲದಲ್ಲಿ ನಾನು ನಿನಗೆ ಕಿವಿಗೊಟ್ಟೆನು, ರಕ್ಷಣೆಯ ದಿನದಲ್ಲಿ ನಾನು ನಿನಗೆ ಸಹಾಯ ಮಾಡಿದೆನು.” ಇದೇ ಆ “ಸುಪ್ರಸನ್ನತೆಯ ಕಾಲ.” ಇದೇ ಆ “ರಕ್ಷಣೆಯ ದಿನ.”


ಆದರೆ ಅವನಿಗೆ ಆಪತ್ತು ಇದ್ದಕ್ಕಿದ್ದಂತೆ ಬರುವುದು. ಅವನು ನಾಶವಾಗುವನು! ಅವನಿಗೆ ಸಹಾಯಮಾಡಲು ಯಾರೂ ಇರುವುದಿಲ್ಲ!


ಆದರೆ ಈ ಸುಳ್ಳುಬೋಧಕರು ತಮಗೆ ಅರ್ಥವಾಗದ ಸಂಗತಿಗಳ ವಿರುದ್ಧ ಕೆಟ್ಟದ್ದನ್ನು ಮಾತಾಡುತ್ತಾರೆ. ಅವರು ವಿವೇಚಿಸದೆ ಕಾರ್ಯ ಮಾಡುವ ಪ್ರಾಣಿಗಳಂತಿದ್ದಾರೆ. ಹಿಡಿಯಲ್ಪಟ್ಟು ಕೊಲ್ಲಲ್ಪಡುವುದಕ್ಕಾಗಿಯೇ ಹುಟ್ಟಿರುವ ಕ್ರೂರಪ್ರಾಣಿಗಳಂತೆ ಅವರು ನಾಶವಾಗುವರು.


ನಂಬಿಕೆಯಿಲ್ಲದ ಜನರು ನಿಮ್ಮ ಸುತ್ತಮುತ್ತಲೆಲ್ಲಾ ವಾಸಿಸುತ್ತಿದ್ದಾರೆ. ನೀವು ತಪ್ಪು ಮಾಡುತ್ತಿರುವಿರೆಂದು ಅವರು ಹೇಳುವ ಸಾಧ್ಯತೆಯಿದೆ. ಆದ್ದರಿಂದ ಒಳ್ಳೆಯವರಾಗಿ ಬಾಳಿರಿ. ನೀವು ಮಾಡುವ ಒಳ್ಳೆಯ ಕಾರ್ಯಗಳನ್ನು ಅವರು ನೋಡುವರು ಮತ್ತು ದೇವರು ಪ್ರತ್ಯಕ್ಷನಾದ ದಿನದಂದು ಆತನನ್ನು ಕೊಂಡಾಡುವರು.


“ಇದು ನಿಮ್ಮ ನೆನಪಿನಲ್ಲಿರಲಿ: ಕಳ್ಳನು ಬರುವ ಗಳಿಗೆಯು ಯಜಮಾನನಿಗೆ ತಿಳಿದರೆ, ಅವನು ತನ್ನ ಮನೆಗೆ ಕನ್ನಹಾಕಲು ಬಿಡುವನೇ? ಇಲ್ಲ!


“ಆದರೆ ದೇವರು ಅವನಿಗೆ, ‘ನೀನು ಬುದ್ಧಿಹೀನ! ಈ ರಾತ್ರಿ ನೀನು ಸಾಯುವೆ! ಈಗ ಹೇಳು, ನೀನು ಕೂಡಿಟ್ಟ ಪದಾರ್ಥಗಳ ಗತಿ ಏನಾಗುವುದು? ಅವು ಯಾರ ಪಾಲಾಗುತ್ತವೆ?’ ಎಂದು ಕೇಳಿದನು.


ನೀವು ತಪ್ಪಿತಸ್ಥರಾಗಿದ್ದೀರಿ. ನೀವು ಬಿರುಕು ಬಿಟ್ಟಿರುವ ಎತ್ತರದ ಗೋಡೆಯಂತಿದ್ದೀರಿ. ಆ ಗೋಡೆಯು ಇದ್ದಕ್ಕಿದ್ದಂತೆ ನೆಲಕ್ಕುರುಳಿ ಚೂರುಚೂರಾಗುವದು. ಒಳ್ಳೆಯ ಸಮಯವು ಬರುತ್ತಿದೆ.


ಜನರ ಅಪರಾಧಗಳಿಗೆ ದಂಡನೆಯು ಕೂಡಲೇ ಬರದಿರುವುದರಿಂದ ದುಷ್ಕೃತ್ಯಗಳನ್ನು ಮಾಡಲು ಇತರರು ಸಹ ಪ್ರೇರಿತರಾಗುತ್ತಾರೆ.


ಆತನು ಆ ದುಷ್ಟರ ಮೇಲೆ ಬೆಂಕಿಗಂಧಕಗಳ ಮಳೆಯನ್ನು ಸುರಿಸುವನು. ಅವರಿಗೆ ಸಿಕ್ಕುವುದೆಂದರೆ ಕಾದ ಉರಿಗಾಳಿಯೊಂದೇ.


ಮನುಷ್ಯನು ಪ್ರಾಣಿಗಿಂತಲೂ ಉತ್ತಮನಾಗಿರುವನೇ? ಇಲ್ಲ! ಏಕೆಂದರೆ ಪ್ರತಿಯೊಂದು ಉಪಯೋಗವಿಲ್ಲದ್ದು. ಪ್ರಾಣಿಗಳಿಗೂ ಮನುಷ್ಯರಿಗೂ ಒಂದೇ ಗತಿಯಾಗುವುದು; ಪ್ರಾಣಿಗಳೂ ಸಾಯುವವು, ಮನುಷ್ಯರೂ ಸಾಯುವರು. ಮನುಷ್ಯರಿಗೂ ಪ್ರಾಣಿಗಳಿಗೂ ಇರುವುದು ಒಂದೇ ‘ಉಸಿರು.’ ಸತ್ತ ಪ್ರಾಣಿಗೂ ಸತ್ತ ಮನುಷ್ಯನಿಗೂ ವ್ಯತ್ಯಾಸವಿಲ್ಲ.


ಇದಲ್ಲದೆ ಲೋಕದಲ್ಲಿ ಜ್ಞಾನದ ಕಾರ್ಯವನ್ನು ಮಾಡುವ ಒಬ್ಬನನ್ನು ನಾನು ಕಂಡೆನು. ಅದು ತುಂಬ ಮುಖ್ಯವಾದದ್ದೆಂದು ನನಗೆ ತೋರಿತು.


ಜನರು ಅಪಾಯದ ವಿಷಯ ಕೇಳಿ ಭಯಗ್ರಸ್ಥರಾಗುವರು. ಕೆಲವರು ಓಡಿಹೋಗುವರು. ಆದರೆ ಅವರು ಗುಂಡಿಯೊಳಗೆ ಬಿದ್ದು ಸಿಕ್ಕಿಕೊಳ್ಳುವರು. ಅವರಲ್ಲಿ ಕೆಲವರು ಗುಂಡಿಯಿಂದ ಹೊರಬರುವರು, ಆದರೆ ಅವರು ಇನ್ನೊಂದು ಉರುಲಿನೊಳಗೆ ಸಿಕ್ಕಿಹಾಕಿಕೊಳ್ಳುವರು. ಆಕಾಶದಲ್ಲಿರುವ ಪ್ರವಾಹದ ದ್ವಾರಗಳು ತೆರೆಯಲ್ಪಡುವವು. ಪ್ರವಾಹವು ತುಂಬುವದು; ಭೂಮಿಯ ಅಸ್ತಿವಾರಗಳು ಕದಲುವವು.


ದೇವರೂ ಪ್ರವಾದಿಯೂ ಕಾವಲುಗಾರರಂತೆ ಎಫ್ರಾಯೀಮನ್ನು ಕಾಪಾಡುತ್ತಿದ್ದಾರೆ. ಆದರೆ ದಾರಿಯಲ್ಲಿ ಅನೇಕ ಉರುಲುಗಳಿವೆ. ಜನರು ಪ್ರವಾದಿಯನ್ನು ಹಗೆ ಮಾಡುತ್ತಾರೆ. ದೇವರ ಆಲಯದಲ್ಲಿಯೂ ಅವನನ್ನು ಹಗೆ ಮಾಡುತ್ತಾರೆ.


ಯಾಕೆಂದರೆ ಅವರು ಬೇಗನೆ ನಾಶವಾಗುವರು. ದೇವರು ಮತ್ತು ರಾಜನು ತಮ್ಮ ವೈರಿಗಳಿಗೆ ಎಷ್ಟು ಕೇಡುಮಾಡಬಲ್ಲರೆಂಬುದು ನಿನಗೆ ತಿಳಿಯದು.


ಯಾರಿಗೂ ತಮ್ಮ ಆತ್ಮವನ್ನು ತಡೆದು ನಿಲ್ಲಿಸಿಕೊಳ್ಳುವ ಶಕ್ತಿ ಇಲ್ಲ. ಯಾರಿಗೂ ತಮ್ಮ ಮರಣವನ್ನು ತಡೆದು ನಿಲ್ಲಿಸುವ ಶಕ್ತಿಯಿಲ್ಲ. ಯುದ್ಧಕಾಲದಲ್ಲಿ ಸೈನಿಕರಿಗೆ ರಜೆ ದೊರೆಯುವುದಿಲ್ಲ. ಅದೇ ರೀತಿಯಲ್ಲಿ, ಪಾಪವು ಪಾಪಿಯನ್ನು ಬಿಟ್ಟುಹೋಗುವುದಿಲ್ಲ.


ನನ್ನ ಒಡೆಯನಾದ ಯೆಹೋವನು ಹೀಗೆನ್ನುತ್ತಾನೆ: “ಅನೇಕರನ್ನು ನಾನು ಒಟ್ಟುಗೂಡಿಸಿದ್ದೇನೆ. ಈಗ ನನ್ನ ಬಲೆಯನ್ನು ನಿನ್ನ ಮೇಲೆ ಬೀಸುವೆನು. ಆಗ ಅವರು ನಿನ್ನನ್ನು ಒಳಸೆಳೆಯುವರು.


ಅವರು ಆ ದೇಶಗಳಿಗೆ ಹೋಗುವಾಗ ನಾನು ಅವರನ್ನು ಉರುಲಿನೊಳಗೆ ಸಿಕ್ಕಿಸುವೆನು. ನನ್ನ ಬಲೆಯನ್ನು ಅವರ ಮೇಲೆ ಬೀಸುವೆನು. ಆಕಾಶದ ಪಕ್ಷಿಗಳ ರೀತಿಯಲ್ಲಿ ಅವರನ್ನು ಕೆಳಗೆ ಬೀಳಿಸುವೆನು. ಅವರು ಮಾಡಿದ ಒಪ್ಪಂದಕ್ಕಾಗಿ ನಾನು ಅವರನ್ನು ಶಿಕ್ಷಿಸುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು