Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:17 - ಪರಿಶುದ್ದ ಬೈಬಲ್‌

17 ಜ್ಞಾನಿಯ ಮೆಲ್ಲನೆಯ ಮಾತುಗಳು ಮೂಢನಾದ ಅಧಿಪತಿಯು ಕೂಗಿಹೇಳಿದ ಮಾತುಗಳಿಗಿಂತಲೂ ಎಷ್ಟೋ ಉತ್ತಮ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹುಚ್ಚರನ್ನು ಆಳುವವನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಕೇಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಹುಚ್ಚರ ಕೂಟದಲ್ಲಿ ಕೇಳಿಬರುವ ಅಧ್ಯಕ್ಷನ ಕೂಗಾಟಕ್ಕಿಂತ ಜ್ಞಾನಿಯ ಮೆಲ್ಲನೆಯ ಮಾತು ಕಿವಿಗೆ ಲೇಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹುಚ್ಚರೊಡೆಯನ ಕೂಗಿಗಿಂತ ಜ್ಞಾನಿಯ ಮೆಲ್ಲನೆಯ ಮಾತುಗಳು ಕಿವಿಗೆ ಅಂಟುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹುಚ್ಚರನ್ನು ಆಳುವವನ ಕೂಗಾಟಕ್ಕಿಂತಲೂ ಜ್ಞಾನಿಯ ಸಮಾಧಾನದ ಮಾತಿಗೆ ಮಹತ್ವ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:17
10 ತಿಳಿವುಗಳ ಹೋಲಿಕೆ  

ಗದರಿಸುವವನು ಸ್ವಲ್ಪಕಾಲದ ನಂತರ ಮುಖಸ್ತುತಿ ಮಾಡುವವನಿಗಿಂತಲೂ ಹೆಚ್ಚಾಗಿ ಗೌರವಿಸಲ್ಪಡುವನು.


ಒಬ್ಬ ವ್ಯಕ್ತಿಯ ಕೋಪವು ದೇವರು ಅಪೇಕ್ಷಿಸಿದಂತೆ ಯೋಗ್ಯ ಜೀವನವನ್ನು ನಡೆಸಲು ಅವನಿಗೆ ಸಹಾಯಕವಾಗುವುದಿಲ್ಲ.


ಆತನು ಬೀದಿಗಳಲ್ಲಿ ಗಟ್ಟಿಯಾಗಿ ಮಾತನಾಡನು, ಗಟ್ಟಿಯಾಗಿ ಕರೆಯುವದಿಲ್ಲ, ಕೂಗುವದಿಲ್ಲ.


ಲೋಕದಲ್ಲಿ ನ್ಯಾಯವನ್ನು ಸ್ಥಾಪಿಸುವ ತನಕ ಆತನು ಬಲಹೀನನಾಗುವದಿಲ್ಲ; ಮುಗ್ಗರಿಸುವುದೂ ಇಲ್ಲ. ದೂರದೇಶದಲ್ಲಿರುವವರು ಸಹ ಆತನ ಬೋಧನೆಯನ್ನು ನಂಬುವರು.”


ಮೂಢರ ಹೊಗಳಿಕೆಗಿಂತ ಜ್ಞಾನಿಗಳ ಗದರಿಕೆಯೇ ಉತ್ತಮ.


ಜ್ಞಾನಿಯ ಮಾತುಗಳು ಅವನಿಗೆ ಘನತೆಯನ್ನು ತರುತ್ತವೆ; ಮೂಢನ ಮಾತುಗಳು ಅವನಿಗೆ ನಾಶನವನ್ನು ತರುತ್ತವೆ.


ಪಟ್ಟಣದ ಅಧಿಕಾರಿಯು ಈ ಸಂಗತಿಗಳನ್ನು ಹೇಳಿದ ಬಳಿಕ ಮನೆಗೆ ಹೋಗಬೇಕೆಂದು ಜನರಿಗೆ ತಿಳಿಸಿದನು. ಆಗ ಅವರೆಲ್ಲರು ಹೊರಟುಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು