ಪ್ರಸಂಗಿ 9:3 - ಪರಿಶುದ್ದ ಬೈಬಲ್3 ಈ ಲೋಕದ ಎಲ್ಲಾ ಕಾರ್ಯಗಳಲ್ಲಿ ಎಲ್ಲಕ್ಕಿಂತಲೂ ದುಃಖಕರವಾದದ್ದೇನೆಂದರೆ, ಎಲ್ಲರೂ ಒಂದೇ ರೀತಿಯಲ್ಲಿ ಅಂತ್ಯವಾಗುವರು. ಆದರೆ ಜನರು ದುಷ್ಟತನವನ್ನೂ ಮೂರ್ಖತನವನ್ನೂ ಆಲೋಚಿಸುತ್ತಲೇ ಇರುವುದು ಅಪಾಯಕರ. ಆಲೋಚನೆಗಳು ಅವರನ್ನು ಮರಣಕ್ಕೆ ನಡೆಸುತ್ತವೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಈ ಲೋಕದಲ್ಲಿ ನಡೆಯುವ ಎಲ್ಲಾ ಸಂಗತಿಗಳಿಗೂ ಕೆಟ್ಟ ಪ್ರತಿಫಲ ಉಂಟು ಮತ್ತು ಎಲ್ಲರಿಗೂ ಒಂದೇ ಗತಿಯಾಗುವುದು. ಇದಲ್ಲದೆ ಮನುಷ್ಯರ ಹೃದಯದಲ್ಲಿ ಕೆಟ್ಟತನವು ತುಂಬಿದೆ. ಅವರು ಬದುಕಿರುವ ತನಕ ಹುಚ್ಚುತನವು ಅವರ ಮನಸ್ಸನ್ನು ಹಿಡಿದಿರುವುದು. ಅನಂತರ ಅವರು ಸಾಯುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕವ್ಯವಹಾರದಲ್ಲೆಲ್ಲಾ ಸೇರಿಕೊಂಡಿದೆ; ಇದಲ್ಲದೆ ನರವಂಶದವರ ಎದೆಯಲ್ಲಿ ಕೆಟ್ಟತನವು ತುಂಬಿದೆ; ಅವರು ಬದುಕಿರುವ ತನಕ ಮರುಳುತನವು ಅವರ ಮನಸ್ಸನ್ನು ಹಿಡಿದಿರುವದು. ಆಮೇಲೆ ಪ್ರೇತಲೋಕವೇ ಗತಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ವ್ಯಸನವು. ಎಲ್ಲರಿಗೂ ಒಂದೇ ಗತಿ ಇದೆ. ಹೌದು, ಮನುಷ್ಯರ ಹೃದಯದಲ್ಲಿ ಕೆಟ್ಟತನ ತುಂಬಿವೆ. ಅವರು ಬದುಕಿರುವ ತನಕ ಅವರ ಹೃದಯಗಳಲ್ಲಿ ಹುಚ್ಚುತನವಿದೆ. ಅನಂತರ ಅವರು ಸಾಯುತ್ತಾರೆ. ಅಧ್ಯಾಯವನ್ನು ನೋಡಿ |