ಪ್ರಸಂಗಿ 9:5 - ಪರಿಶುದ್ದ ಬೈಬಲ್5 ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯಿದೆ. ಆದರೆ ಸತ್ತವರಿಗೆ ಯಾವ ತಿಳುವಳಿಕೆಯೂ ಇಲ್ಲ. ಸತ್ತವರಿಗೆ ಯಾವ ಪ್ರತಿಫಲವೂ ಇಲ್ಲ. ಜನರು ಅವರನ್ನು ಬೇಗನೆ ಮರೆತುಬಿಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಜೀವಿಸುವವರಿಗೆ ಸಾಯುತ್ತೇವೆಂಬ ತಿಳಿವಳಿಕೆಯು ಉಂಟು. ಸತ್ತವರಿಗೋ ಯಾವ ತಿಳಿವಳಿಕೆಯೂ ಇಲ್ಲ. ಅವರಿಗೆ ಇನ್ನು ಮೇಲೆ ಪ್ರತಿಫಲವು ಇಲ್ಲ. ಅವರ ಜ್ಞಾಪಕವೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಜೀವಿತರಿಗೆ ಖಂಡಿತವಾಗಿ ಸಾಯುತ್ತೇವೆಂಬ ತಿಳುವಳಿಕೆಯಾದರೂ ಉಂಟು. ಸತ್ತವರಿಗಾದರೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಯಾವ ಪ್ರತಿಫಲವೂ ಇಲ್ಲ; ಅವರ ಹೆಸರನ್ನೂ ಜನರು ಮರೆತುಬಿಡುತ್ತಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಸತ್ತ ಸಿಂಹಕ್ಕಿಂತ ಬದುಕಿರುವ ನಾಯಿಯೇ ಲೇಸು. ಜೀವಿತರಿಗೆ ಸಾಯುತ್ತೇವೆಂಬ ತಿಳುವಳಿಕೆಯು ಉಂಟಷ್ಟೆ; ಸತ್ತವರಿಗೋ ಯಾವ ತಿಳುವಳಿಕೆಯೂ ಇಲ್ಲ; ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇಲ್ಲ, ಅವರ ಜ್ಞಾಪಕವೇ ಹೋಯಿತಲ್ಲವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿದ್ದಾರೆ, ಆದರೆ ಸತ್ತವರಿಗೆ ಏನೂ ತಿಳಿಯದು; ಅವರಿಗೆ ಇನ್ನು ಮೇಲೆ ಪ್ರತಿಫಲ ಇಲ್ಲ. ಅವರ ಹೆಸರನ್ನು ಸಹ ಜನರು ಮರೆತುಬಿಡುತ್ತಾರೆ. ಅಧ್ಯಾಯವನ್ನು ನೋಡಿ |